ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ತಿಂಗಳು ಫಾರಿನ್​ ಟೂರ್​

|

Updated on: Dec 23, 2019 | 12:19 PM

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಿನ ತಿಂಗಳು ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 21ರಿಂದ 24ರವರೆಗೆ ಸ್ವಿಟ್ಜರ್ಲ್ಯಾಂಡ್​ ಪ್ರವಾಸ ಕೈಗೊಳ್ಳಲಿರುವ ಬಿಎಸ್​ವೈ, ದಾವೋಸ್​ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ 50ನೇ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದಾವೋಸ್​ಗೆ ಭಾರತೀಯ ನಿಯೋಗದಲ್ಲಿ ಸಿಎಂ ಯಡಿಯೂರಪ್ಪ ಜೊತೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಹ ತೆರಳಲಿದ್ದಾರೆ. ನಿಯೋಗದಲ್ಲಿ ಕೇಂದ್ರ ಸಚಿವರಾದ ಪಿಯೂಷ್ ಗೋಯೆಲ್, ಮನ್ ಸುಖ್ ಮಾಂಡವೀಯ, ಪಂಜಾಬ್ ಸಿಎಂ ಕ್ಯಾ. ಅಮರಿಂದರ್ ಸಿಂಗ್, ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಮತ್ತು ಭಾರತದ […]

ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ತಿಂಗಳು ಫಾರಿನ್​ ಟೂರ್​
Follow us on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಿನ ತಿಂಗಳು ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 21ರಿಂದ 24ರವರೆಗೆ ಸ್ವಿಟ್ಜರ್ಲ್ಯಾಂಡ್​ ಪ್ರವಾಸ ಕೈಗೊಳ್ಳಲಿರುವ ಬಿಎಸ್​ವೈ, ದಾವೋಸ್​ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ 50ನೇ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ದಾವೋಸ್​ಗೆ ಭಾರತೀಯ ನಿಯೋಗದಲ್ಲಿ ಸಿಎಂ ಯಡಿಯೂರಪ್ಪ ಜೊತೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಹ ತೆರಳಲಿದ್ದಾರೆ. ನಿಯೋಗದಲ್ಲಿ ಕೇಂದ್ರ ಸಚಿವರಾದ ಪಿಯೂಷ್ ಗೋಯೆಲ್, ಮನ್ ಸುಖ್ ಮಾಂಡವೀಯ, ಪಂಜಾಬ್ ಸಿಎಂ ಕ್ಯಾ. ಅಮರಿಂದರ್ ಸಿಂಗ್, ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಮತ್ತು ಭಾರತದ ವಿವಿಧ ಕಂಪನಿಗಳ 100 ಸಿಇಒಗಳು ವಿದೇಶ ಪ್ರವಾಸ ತೆರಳಲಿದ್ದಾರೆ.

Published On - 12:19 pm, Mon, 23 December 19