ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ. ವಲಯ 1: ಕೃಷಿ ಮತ್ತು […]

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?
Follow us
ಸಾಧು ಶ್ರೀನಾಥ್​
|

Updated on:Mar 05, 2020 | 1:27 PM

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ.

ವಲಯ 1: ಕೃಷಿ ಮತ್ತು ಪೂರಕ ಚಟುವಟಿಕೆಗಳು ವಲಯ 2: ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯ 3: ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ ವಲಯ 4: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯ 5: ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯ 6: ಅಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು

ಕೃಷಿ ಮತ್ತು ಪೂರಕ ಚಟುವಟಿಕೆಗಳು: ಸರ್ಕಾರದಿಂದ ಹೊಸ ಕೃಷಿ ನೀತಿ ಜಾರಿಗೊಳಿಸಲಾಗುವುದು. ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಕೃಷಿ ವಲಯಕ್ಕೆ ಹೊಸ ಆಯಾಮ ನೀಡಲು ಪ್ರಯತ್ನಿಸಲಾಗುವುದು. ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಪ್ರಾರಂಭಿಸಲಾಗುವುದು. ಸಾವಯವ ಕೃಷಿಗೆ ₹200 ಕೋಟಿ ಅನುದಾನ ನೀಡಲಾಗುತ್ತೆ ಎಂದರು. ಇದೇ ವೇಳೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಯಡಿಯೂರಪ್ಪ ಮರು ಘೋಷಣೆ ಮಾಡಿದರು.

ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಸಾಲ ಯೋಜನೆ ನೀಡಲಾಗುವುದು. ಸಿರಿಧಾನ್ಯ ಖರೀದಿಗೆ ರೈತರಿಗೆ ಪ್ರತಿ ಹೆಕ್ಟೇರಿಗೆ 10 ರಿಂದ 20 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಮಣ್ಣು ಪರೀಕ್ಷೆ ಸಹಿತ ರೈತರಿಗೆ ಕೃಷಿಯಲ್ಲಿ ಸಹಕಾರಿಯಾಗಲಿದೆ. ಕೃಷಿ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡಲಾಗುತ್ತದೆ. ಇದಕ್ಕಾಗಿ ರಾಜ್ಯದ 40 ಕಡೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗುವುದು.

ಕೃಷಿ ವಲಯಕ್ಕೆ ಬಜೆಟ್‌ನಲ್ಲಿ 32,259 ಕೋಟಿ ರೂಪಾಯಿ ಮೀಸಲಿಡಲಾಗುವುದು. ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆಗೆ ಉತ್ತೇಜನ ನೀಡಲಾಗುವುದು.

Published On - 11:49 am, Thu, 5 March 20

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?