ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ. ವಲಯ 1: ಕೃಷಿ ಮತ್ತು […]

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?
ಸಾಧು ಶ್ರೀನಾಥ್​

Updated on: Mar 05, 2020 | 1:27 PM

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ.

ವಲಯ 1: ಕೃಷಿ ಮತ್ತು ಪೂರಕ ಚಟುವಟಿಕೆಗಳು
ವಲಯ 2: ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ
ವಲಯ 3: ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ
ವಲಯ 4: ಬೆಂಗಳೂರು ಸಮಗ್ರ ಅಭಿವೃದ್ಧಿ
ವಲಯ 5: ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ
ವಲಯ 6: ಅಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು

ಕೃಷಿ ಮತ್ತು ಪೂರಕ ಚಟುವಟಿಕೆಗಳು:
ಸರ್ಕಾರದಿಂದ ಹೊಸ ಕೃಷಿ ನೀತಿ ಜಾರಿಗೊಳಿಸಲಾಗುವುದು. ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಕೃಷಿ ವಲಯಕ್ಕೆ ಹೊಸ ಆಯಾಮ ನೀಡಲು ಪ್ರಯತ್ನಿಸಲಾಗುವುದು. ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಪ್ರಾರಂಭಿಸಲಾಗುವುದು. ಸಾವಯವ ಕೃಷಿಗೆ ₹200 ಕೋಟಿ ಅನುದಾನ ನೀಡಲಾಗುತ್ತೆ ಎಂದರು. ಇದೇ ವೇಳೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಯಡಿಯೂರಪ್ಪ ಮರು ಘೋಷಣೆ ಮಾಡಿದರು.

ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಸಾಲ ಯೋಜನೆ ನೀಡಲಾಗುವುದು. ಸಿರಿಧಾನ್ಯ ಖರೀದಿಗೆ ರೈತರಿಗೆ ಪ್ರತಿ ಹೆಕ್ಟೇರಿಗೆ 10 ರಿಂದ 20 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಮಣ್ಣು ಪರೀಕ್ಷೆ ಸಹಿತ ರೈತರಿಗೆ ಕೃಷಿಯಲ್ಲಿ ಸಹಕಾರಿಯಾಗಲಿದೆ. ಕೃಷಿ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡಲಾಗುತ್ತದೆ. ಇದಕ್ಕಾಗಿ ರಾಜ್ಯದ 40 ಕಡೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗುವುದು.

ಕೃಷಿ ವಲಯಕ್ಕೆ ಬಜೆಟ್‌ನಲ್ಲಿ 32,259 ಕೋಟಿ ರೂಪಾಯಿ ಮೀಸಲಿಡಲಾಗುವುದು. ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆಗೆ ಉತ್ತೇಜನ ನೀಡಲಾಗುವುದು.

Published On - 11:49 am, Thu, 5 March 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us