ಶಿವಮೊಗ್ಗ ಸ್ಫೋಟದ ಸ್ಥಳಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ; ಕಲ್ಲು ಗಣಿಗಾರಿಕೆಗೆ ಅವಕಾಶ ಇಲ್ಲ

| Updated By: ಸಾಧು ಶ್ರೀನಾಥ್​

Updated on: Jan 23, 2021 | 5:06 PM

ಇಲ್ಲಿನ ಎಲ್ಲ ಕ್ರಷರ್​ಗಳಿಗೆ ಸರ್ಕಾರದಿಂದ ಅನುಮತಿ ಇದೆ. ಆದರೆ ಕಲ್ಲು ಗಣಿಗಾರಿಕೆಗೆ ಯಾವುದೇ ಅನುಮತಿ ಇಲ್ಲ. ಆರೋಪಿಗಳು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.

ಶಿವಮೊಗ್ಗ ಸ್ಫೋಟದ ಸ್ಥಳಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ; ಕಲ್ಲು ಗಣಿಗಾರಿಕೆಗೆ  ಅವಕಾಶ ಇಲ್ಲ
ಸಿಎಂ ಬಿ.ಎಸ್​.ಯಡಿಯೂರಪ್ಪ
Follow us on

ಶಿವಮೊಗ್ಗ: ಘಟನೆಯಲ್ಲಿ ಈವರೆಗೆ ಒಟ್ಟು 6 ಜನರು ಮೃತಪಟ್ಟಿದ್ದಾರೆ. ಹೈದರಾಬಾದ್​ನ ತಂಡ ಪ್ರಾಥಮಿಕ ತನಿಖೆ ನಡೆಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲೂ ತನಿಖೆ ನಡೆಯುತ್ತಿದೆ. ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ ಎಂದು ಜಿಲ್ಲೆಯ ಹುಣಸೋಡುನಲ್ಲಿ ಸ್ಫೋಟ ನಡೆದ ಸ್ಥಳದಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದರು.

ಇಲ್ಲಿನ ಎಲ್ಲ ಕ್ರಷರ್​ಗಳಿಗೆ ಸರ್ಕಾರದಿಂದ ಅನುಮತಿ ಇದೆ. ಆದರೆ ಕಲ್ಲು ಗಣಿಗಾರಿಕೆಗೆ ಯಾವುದೇ ಅನುಮತಿ ಇಲ್ಲ. ಆರೋಪಿಗಳು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.

ಇನ್ನು, ಹುಣಸೋಡುನಲ್ಲಿ ಸ್ಫೋಟ ನಡೆದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳ ಜೊತೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ವಾಪಸ್​ ಆದ ಸಿಎಂ ಬಿಎಸ್​ವೈ 5 ನಿಮಿಷ ಪರಿಶೀಲನೆ ನಡೆಸಿದರು.

ಯಡಿಯೂರಪ್ಪ ಜೊತೆ ಅವರ ಪುತ್ರ ಮತ್ತು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು. ಇದಲ್ಲದೆ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ್ ನಾಯಕ, ಶಿವಮೊಗ್ಗ ಡಿ.ಸಿ ಕೆ.ಬಿ.ಶಿವಕುಮಾರ್, ಎಸ್.​ಪಿ ಶಾಂತರಾಜು, ಜಿ.ಪಂ. ಸಿಇಒ ವೈಶಾಲಿ ಹಾಗೂ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ನಡುವೆ, ಗಣಿ ದುರಂತದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮಾಜಿ ಶಾಸಕ ಪ್ರಸನ್ನ ಕುಮಾರ್‌ರಿಂದ ಸಿಎಂಗೆ ಮನವಿ ಮಾಡಿದರು. ನಗರದ ಐಬಿ ಬಳಿ ಮಾಜಿ ಶಾಶಕ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದರು.

ಇನ್ಮೇಲೆ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ, ಲೈಸೆನ್ಸ್ ಇದ್ರೆ ಮಾತ್ರ ಗಣಿಗಾರಿಕೆ ಮಾಡಬೇಕು: ಮುಖ್ಯಮಂತ್ರಿ ಯಡಿಯೂರಪ್ಪ