ಜಮೀರ್ ಅಹ್ಮದ್ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ -ಟಿವಿ9ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ
ಚಾಮರಾಜಪೇಟೆ ಕ್ಷೇತ್ರಕ್ಕೆ ಜಮೀರ್ ಅನುದಾನ ಕೇಳಿದ್ದು ನಿಜ. ಆದ್ರೆ ಈವರೆಗೆ ಅವರ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಗಳೂರು: ಜಮೀರ್ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ ಎಂದು ಟಿವಿ9ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಚಾಮರಾಜಪೇಟೆ ಕ್ಷೇತ್ರಕ್ಕೆ ಜಮೀರ್ ಅನುದಾನ ಕೇಳಿದ್ದು ನಿಜ. ಆದ್ರೆ ಈವರೆಗೆ ಅವರ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಮೂಲಕ, ಚಾಮರಾಜಪೇಟೆ ಕ್ಷೇತ್ರಕ್ಕೆ ಅನುದಾನ ನೀಡಿಲ್ಲವೆಂದು ಟಿವಿ9ಗೆ ಖುದ್ದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೇರೆ ಶಾಸಕರ ರೀತಿಯಲ್ಲಿ ಜಮೀರ್ ಅನುದಾನಕ್ಕೆ ಮನವಿ ಮಾಡಿದ್ದು ನಿಜ. ಆದ್ರೆ ಜಮೀರ್ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ನೀಡಿಲ್ಲ. ವಿಶೇಷ ಅನುದಾನ ನೀಡಿದ್ದೇನೆಂಬುದು ಸತ್ಯಕ್ಕೆ ದೂರ. ಅನುದಾನ ವಿಚಾರದಲ್ಲಿ ತಾರತಮ್ಯ ಮಾಡಿಲ್ಲ ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. ನಾವು ಯಾವುದೇ ಶಾಸಕರಿಗೂ ತಾರತಮ್ಯ ಮಾಡಿಲ್ಲವೆಂದು ಟಿವಿ9ಗೆ ಖುದ್ದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ.
‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’
Published On - 9:33 pm, Fri, 15 January 21