AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳೆಂದು ಘೋಷಿಸಿ -ಪ್ರಧಾನಿ ಮೋದಿಗೆ ಸಿಎಂ BSY ಮನವಿ

ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಗಳೆಂದು ಘೋಷಿಸಲು ಸಿಎಂ ಬಿ.ಎಸ್​.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇಂದಿನ ನೀತಿ ಆಯೋಗದ ಸಭೆಯಲ್ಲಿ ಸಿಎಂ BSY ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳೆಂದು ಘೋಷಿಸಿ -ಪ್ರಧಾನಿ ಮೋದಿಗೆ ಸಿಎಂ BSY ಮನವಿ
ಪ್ರಧಾನಿ ಮೋದಿ ಜೊತೆ ಸಿಎಂ ಬಿ.ಎಸ್​.ಯಡಿಯೂರಪ್ಪ (ಸಂಗ್ರಹ ಚಿತ್ರ)
KUSHAL V
|

Updated on: Feb 20, 2021 | 7:52 PM

Share

ದೆಹಲಿ: ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಗಳೆಂದು ಘೋಷಿಸಲು ಸಿಎಂ ಬಿ.ಎಸ್​.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇಂದಿನ ನೀತಿ ಆಯೋಗದ ಸಭೆಯಲ್ಲಿ ಸಿಎಂ BSY ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಜೊತೆಗೆ, ನಾಲೆ ಆಧುನಿಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ಮನವಿ ಸಹ ಮಾಡಿದ್ದಾರೆ. 6,673 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿಗೆ ಸಿಎಂ BSY ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ, ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿ 2014ರ ನಂತರ ದೇಶದಲ್ಲಿ 2.40 ಕೋಟಿ ಮನೆ ನಿರ್ಮಾಣಕ್ಕೆ ಹೊಸ ಮಾಡೆಲ್ ತಯಾರಿಸಲಾಗಿದೆ. 3.5 ಕೋಟಿ ಮನೆಗಳಿಗೆ ಪೈಪ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿರುವ ಮನೆಗಳಿಗೆ ನೀರು ಪೂರೈಕೆ ಮಾಡಲಾಗಿದೆ.

ಈ ಬಾರಿ, ಬಜೆಟ್ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ಬಂದಿದೆ. ಜನರ ಆಕಾಂಕ್ಷೆಗೆ ತಕ್ಕಂತೆ ಮೂಲಸೌಕರ್ಯ ನೀಡಬೇಕು. ಸ್ಟಾರ್ಟ್‌ ಅಪ್‌ಗಳನ್ನ ಬಲಪಡಿಸುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅನೇಕ ಜಿಲ್ಲೆಗಳ ಉತ್ಪನ್ನಗಳ ಮೌಲ್ಯವರ್ಧನೆ ಬಳಿಕ ರಫ್ತು ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತ್ಸ್ಯ ಉದ್ಯೋಗ, ಮೀನು ರಫ್ತಿಗೆ ಬಹಳ ಅವಕಾಶ ಇದೆ. ಇದರಿಂದ ಮೀನುಗಾರರಿಗೆ ಬಹಳ ಅವಕಾಶ ಇದೆ. ರಾಜ್ಯಗಳು ಹೂಡಿಕೆಯನ್ನ ಆಕರ್ಷಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

‘ಕಾರ್ಪೊರೇಟ್ ಟ್ಯಾಕ್ಸ್ ಕಡಿಮೆ ಮಾಡಿ ಹೂಡಿಕೆಗೆ ಆಕರ್ಷಿಸಿ’ ಕಾರ್ಪೊರೇಟ್ ಟ್ಯಾಕ್ಸ್ ಕಡಿಮೆ ಮಾಡಿ ಹೂಡಿಕೆಗೆ ಆಕರ್ಷಿಸಿ. ಕಂಪನಿಗಳನ್ನ ಸಂಪರ್ಕಿಸಿ ಹೂಡಿಕೆ ಆಕರ್ಷಿಸಿ. ಕೇಂದ್ರದ ಬಜೆಟ್ ರೀತಿಯಲ್ಲಿ ರಾಜ್ಯ ಬಜೆಟ್‌ಗಳಲ್ಲಿ ಆತ್ಮನಿರ್ಭರ ಭಾರತಕ್ಕೆ ಒತ್ತು ನೀಡಲಿ. ಆಕಾಂಕ್ಷೆ ಜಿಲ್ಲೆಗಳ ಪ್ರಯೋಗ ಪರಿಣಾಮಕಾರಿ ಆಗಲಿ ಎಂದು ಹೇಳಿದರು.

ಭಾರತಕ್ಕೆ ಅಡುಗೆ ಎಣ್ಣೆ ಅಮದು ನಿಲ್ಲಿಸಲು ಅವಕಾಶವಿದೆ. ನಮ್ಮ ರೈತರಿಗೆ ಸ್ವಲ್ಪ ಈ ಬಗ್ಗೆ ಮಾರ್ಗದರ್ಶನ ನೀಡಬೇಕು. ಕೊರೊನಾ ಕಾಲದಲ್ಲಿ ಕೃಷಿ ಉತ್ಪನ್ನ ರಫ್ತು ಮಾಡಲಾಗಿದೆ ಎಂದು ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದರು.

‘ಕೇಂದ್ರ, ರಾಜ್ಯ ಸರ್ಕಾರಗಳು ಒಗ್ಗೂಡಿ ಕೆಲಸ ಮಾಡಬೇಕು’ ಕೇಂದ್ರ, ರಾಜ್ಯ ಸರ್ಕಾರಗಳು ಒಗ್ಗೂಡಿ ಕೆಲಸ ಮಾಡಬೇಕು. ನಿರ್ದಿಷ್ಟ ಗುರಿಯ ಈಡೇರಿಕೆಗಾಗಿ ಕೆಲಸ ಮಾಡಬೇಕು. ಸಹಕಾರ ಒಕ್ಕೂಟ ವ್ಯವಸ್ಥೆ ಸಾರ್ಥಕಗೊಳಿಸಬೇಕು. ಸ್ಪರ್ಧಾತ್ಮಕ ಸಹಕಾರ ಒಕ್ಕೂಟ ವ್ಯವಸ್ಥೆ ಜಿಲ್ಲಾ ಮಟ್ಟಕ್ಕೆ ಪ್ರಯತ್ನಪೂರ್ವಕವಾಗಿ ಕೊಂಡೊಯ್ಯಬೇಕು. ಸ್ಪರ್ಧೆ ನಿರಂತರವಾಗಿ ಇರಲಿ ಎಂದು ಪ್ರಧಾನಿ ಮೋದಿ ಹೇಳಿದರು.

ಅಭಿವೃದ್ಧಿ ಪ್ರಾಥಮಿಕ ಅಜೆಂಡಾ ಆಗಿರಲಿ. ದೇಶವನ್ನು ಅಭಿವೃದ್ಧಿಯ ಹೊಸ ದಿಕ್ಕಿಗೆ ಕೊಂಡೊಯ್ಯಬೇಕು. ಈ ಮಂಥನದ ಬಗ್ಗೆ ಈ ಹಿಂದೆಯೇ ಚರ್ಚೆ ಮಾಡಿದ್ದೇವೆ. ರಾಜ್ಯ-ಕೇಂದ್ರ ಒಗ್ಗೂಡಿ ಕೊರೊನಾ ಕಾಲದಲ್ಲಿ ಕೆಲಸ ಮಾಡಬೇಕು. ಇದರಿಂದ ವಿಶ್ವದಲ್ಲಿ ಭಾರತದ ಬಗ್ಗೆ ಒಳ್ಳೆಯ ಇಮೇಜ್ ಸೃಷ್ಟಿಯಾಗಲಿದೆ. ರಾಜ್ಯಗಳ ಅಪೇಕ್ಷೆಗೆ ಅನುಗುಣವಾಗಿ ಅಜೆಂಡಾ ತಯಾರಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Gauri Lankesh Murder: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾ