AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌಸಿಂಗ್ ಬೋರ್ಡ್ ಅಧ್ಯಕ್ಷ ಸ್ಥಾನದಿಂದ ಶರತ್​ಗೆ ಕೊಕ್?

ಬೆಂಗಳೂರು: ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಬಂಡಾಯ ಅಭ್ಯರ್ಥಿ ಶರತ್‌ ಬಚ್ಚೇಗೌಡರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತೇವೆ. ಸಂಜೆಯೊಳಗೆ ಹೌಸಿಂಗ್ ಬೋರ್ಡ್‌ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ಲಿ, ಇಲ್ಲದಿದ್ರೆ ಮಂಡಳಿ ಅಧ್ಯಕ್ಷ ಸ್ಥಾನ ವಾಪಸ್ ಪಡೆಯುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ಎಂಟಿಬಿ ಗೆಲುವು ಖಚಿತ: ಹೊಸಕೋಟೆ ಕ್ಷೇತ್ರದಲ್ಲಿ ಶರತ್‌ ಬಚ್ಚೇಗೌಡ ನೂರಕ್ಕೆ ನೂರು ಪಾಲು ಸೋಲುತ್ತಾರೆ. […]

ಹೌಸಿಂಗ್ ಬೋರ್ಡ್ ಅಧ್ಯಕ್ಷ ಸ್ಥಾನದಿಂದ ಶರತ್​ಗೆ ಕೊಕ್?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2019 | 11:29 AM

Share

ಬೆಂಗಳೂರು: ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿ ಕಾರಿದ್ದಾರೆ.

ಬಂಡಾಯ ಅಭ್ಯರ್ಥಿ ಶರತ್‌ ಬಚ್ಚೇಗೌಡರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತೇವೆ. ಸಂಜೆಯೊಳಗೆ ಹೌಸಿಂಗ್ ಬೋರ್ಡ್‌ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ಲಿ, ಇಲ್ಲದಿದ್ರೆ ಮಂಡಳಿ ಅಧ್ಯಕ್ಷ ಸ್ಥಾನ ವಾಪಸ್ ಪಡೆಯುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಎಂಟಿಬಿ ಗೆಲುವು ಖಚಿತ: ಹೊಸಕೋಟೆ ಕ್ಷೇತ್ರದಲ್ಲಿ ಶರತ್‌ ಬಚ್ಚೇಗೌಡ ನೂರಕ್ಕೆ ನೂರು ಪಾಲು ಸೋಲುತ್ತಾರೆ. ಎಂಟಿಬಿ ನಾಗರಾಜ್​ರಂತಹ ಪ್ರಾಮಾಣಿಕ ವ್ಯಕ್ತಿ ಮತ್ತೊಬ್ಬರು ಸಿಗಲ್ಲ. ಕಾಂಗ್ರೆಸ್​ನವರು MTB ವಿರುದ್ಧ ಸುಳ್ಳು ಆರೋಪ ಮಾಡ್ತಿದ್ದಾರೆ. ಏನೇ ಆದ್ರೂ ಎಂಟಿಬಿ ನಾಗರಾಜ್ ಗೆಲ್ಲೋದು ಖಚಿತ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು