
ಬೆಂಗಳೂರು: ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿ ಕಾರಿದ್ದಾರೆ.
ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತೇವೆ. ಸಂಜೆಯೊಳಗೆ ಹೌಸಿಂಗ್ ಬೋರ್ಡ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ಲಿ, ಇಲ್ಲದಿದ್ರೆ ಮಂಡಳಿ ಅಧ್ಯಕ್ಷ ಸ್ಥಾನ ವಾಪಸ್ ಪಡೆಯುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಎಂಟಿಬಿ ಗೆಲುವು ಖಚಿತ:
ಹೊಸಕೋಟೆ ಕ್ಷೇತ್ರದಲ್ಲಿ ಶರತ್ ಬಚ್ಚೇಗೌಡ ನೂರಕ್ಕೆ ನೂರು ಪಾಲು ಸೋಲುತ್ತಾರೆ. ಎಂಟಿಬಿ ನಾಗರಾಜ್ರಂತಹ ಪ್ರಾಮಾಣಿಕ ವ್ಯಕ್ತಿ ಮತ್ತೊಬ್ಬರು ಸಿಗಲ್ಲ. ಕಾಂಗ್ರೆಸ್ನವರು MTB ವಿರುದ್ಧ ಸುಳ್ಳು ಆರೋಪ ಮಾಡ್ತಿದ್ದಾರೆ. ಏನೇ ಆದ್ರೂ ಎಂಟಿಬಿ ನಾಗರಾಜ್ ಗೆಲ್ಲೋದು ಖಚಿತ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.