
ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಬಸವಕಲ್ಯಾಣ ಕ್ಷೇತ್ರದ ಬಿಜೆಿಪಿ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ್ದಾರೆ.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇಂದು ಐತಿಹಾಸಿಕ ದಿನ: ಶರಣು ಸಲಗರ
ನನ್ನ ಜೀವನದಲ್ಲಿ ಇಂದು ಐತಿಹಾಸಿಕ ದಿನವಾಗಿದೆ ಎಂದು ಮಾತನಾಡಿದ ಶರಣು ಸಲಗರ, ಬಿಜೆಪಿ ಸಾಮಾನ್ಯ ಕಾರ್ಯಕರ್ತನಾದ ನಾನು ಗೆದ್ದಿದ್ದೇನೆ. ಪಕ್ಷದ ನಾಯಕರ ಪರಿಶ್ರಮದಿಂದ ನಾನು ಗೆದ್ದಿದ್ದೇನೆ. ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನರಿಗೆ ಧನ್ಯವಾದಗಳು. ನನ್ನ ಸೋಲಿಸಲು ಸಂಚು ಮಾಡಿದವರು ಠೇವಣಿ ಕಳೆದುಕೊಂಡಿದ್ದಾರೆ. ಬಿಜೆಪಿ ಶಕ್ತಿ ಮುಂದೆ ವಿರೋಧಿಗಳು ತಂತ್ರ ಫಲಿಸಿಲ್ಲಾ. ಕ್ಷೇತ್ರದ ಜನರ ಋಣ ತೀರಿಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಭಿನಂದನೆ ಸಲ್ಲಿಸಿದ ವಿಜಯೇಂದ್ರ
ಬಸವಕಲ್ಯಾಣ ಉಪಚುನಾವಣೆಯಲ್ಲಿ ಸುಸ್ಪಷ್ಟ ಜನಾದೇಶದೊಂದಿಗೆ ಗೆಲುವು ಸಾಧಿಸಿರುವ ಶರಣು ಸಲಗರವರಿಗೆ ಅಭಿನಂದನೆಗಳು. ಕಾರ್ಯಕರ್ತರ ಅವಿರತ ಪರಿಶ್ರಮಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಎಲ್ಲಾ ನಾಯಕರ ಮೇಲೆ ವಿಶ್ವಾಸವಿಟ್ಟು ಪಕ್ಷವನ್ನು ಬೆಂಬಲಿಸಿದ ಮತದಾರರಿಗೆ ನನ್ನ ಧನ್ಯವಾದಗಳು ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ
ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗುವುದಿಲ್ಲ: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ
(Chief Minister Yediyurappa congratulates BJP candidate Sharanu Salagar in twitter)
Published On - 1:43 pm, Sun, 2 May 21