AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ಕೌಂಟಿಂಗೇ ಮುಗ್ದಿಲ್ಲ! ಮುಖ್ಯಮಂತ್ರಿ ಯಡಿಯೂರಪ್ಪ ಜವಾಬ್ದಾರಿಯಿಂದ ಮಾತನಾಡಬೇಕು: ಸಿದ್ದರಾಮಯ್ಯ ಗರಂ

ಮುಖ್ಯಮಂತ್ರಿ ಯಡಿಯೂರಪ್ಪನವರ ಖುರ್ಚಿಯೇ ಅಲುಗಾಡುತ್ತಿದೆ. ನಾಳೆ ವಿಧಾನಸಭೆ ಚುನಾವಣೆ ಆದರೂ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ನಮ್ಮ ಕಾರ್ಯಕರ್ತರೇ ಹೆಚ್ಚು ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಗ್ರಾ.ಪಂ. ಕೌಂಟಿಂಗೇ ಮುಗ್ದಿಲ್ಲ! ಮುಖ್ಯಮಂತ್ರಿ ಯಡಿಯೂರಪ್ಪ ಜವಾಬ್ದಾರಿಯಿಂದ ಮಾತನಾಡಬೇಕು: ಸಿದ್ದರಾಮಯ್ಯ ಗರಂ
ವಿಪಕ್ಷ ನಾಯಕ ಸಿದ್ದರಾಮಯ್ಯ
Lakshmi Hegde
| Updated By: ಸಾಧು ಶ್ರೀನಾಥ್​|

Updated on: Dec 31, 2020 | 2:11 PM

Share

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಸುದ್ದಿಗೋಷ್ಠಿ ನಡೆಸಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.60ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಅಭೂತಪೂರ್ವ ಸಾಧನೆ ಎಂದು ಸಂತೋಷ ವ್ಯಕ್ತಪಡಿಸಿದ ಬೆನ್ನಲ್ಲೇ, ಮಾಜಿ ಸಿಎಂ ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿ, ಸಿಎಂ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಗರಂ ಆಗಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಇನ್ನೂ ಮುಕ್ತಾಯವಾಗಿಲ್ಲ. ಆದರೂ ಈಗಲೇ ನಾವು ಗೆದ್ದಿದ್ದೇವೆ ಎಂದು ಯಡಿಯೂರಪ್ಪನವರು ಹೇಳುತ್ತಿದ್ದಾರೆ. ಬಿಎಸ್​ವೈ ಇನ್ನೂ ಹಗಲುಗನಸು ಕಾಣುತ್ತಿದ್ದಾರೆ. ಅವರೊಬ್ಬ ಸಿಎಂ ಆಗಿ ಜವಾಬ್ದಾರಿಯುತ ಹೇಳಿಕೆ ನೀಡಬೇಕು ಎಂದು ತಿರುಗೇಟು ನೀಡಿದ್ದಾರೆ. ಕೌಂಟಿಂಗ್​ ಪೂರ್ತಿ ಮುಗಿಯುವ ಮುನ್ನವೇ ಶೇ.60ರಷ್ಟು ಗೆದ್ದಿದ್ದೇವೆ ಎನ್ನುತ್ತಾರಲ್ಲ.. ನಾನೂ ಕೂಡ ಕಾಂಗ್ರೆಸ್ ಬೆಂಬಲಿತ ಶೇ.65 ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಹೇಳಬಹುದಲ್ಲ ಎಂದಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರೇ ಹೆಚ್ಚು ಗೆಲುವು ಸಾಧಿಸಲಿದ್ದಾರೆ.. ಮುಖ್ಯಮಂತ್ರಿ ಯಡಿಯೂರಪ್ಪನವರ ಖುರ್ಚಿಯೇ ಅಲುಗಾಡುತ್ತಿದೆ. ನಾಳೆ ವಿಧಾನಸಭೆ ಚುನಾವಣೆ ಆದರೂ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲೂ ನಮ್ಮ ಕಾರ್ಯಕರ್ತರೇ ಹೆಚ್ಚು ಗೆಲುವು ಸಾಧಿಸಲಿದ್ದಾರೆ. ಪುರಸಭೆ ಚುನಾವಣೆಯಲ್ಲೂ ನಾವೇ ನಂಬರ್​ 1 ಆಗಿದ್ದೇವೆ. ಗೆದ್ದಿರುವ ಎಲ್ಲ ಸದಸ್ಯರಿಗೆ, ಮತದಾರರಿಗೆ ಅಭಿನಂದನೆಗಳು. ಇನ್ನೊಂದು ಎಂದರೆ ಗ್ರಾಮಪಂಚಾಯಿತಿ ಚುನಾವಣೆಗಳು ಪಕ್ಷದ ಚಿಹ್ನೆಯ ಆಧಾರದ ಮೇಲೆ ನಡೆಯೋದಿಲ್ಲ. ಕೆಲವೆಡೆ ಪಕ್ಷಗಳ ಕಾರ್ಯಕರ್ತರು ಸ್ಪರ್ಧಿಸುತ್ತಾರೆ, ಇನ್ನೂ ಕೆಲವು ಕಡೆ ಸ್ವತಂತ್ರವಾಗಿ ನಿಲ್ಲುತ್ತಾರೆ ಎಂದು ಸಿದ್ದರಾಮಯ್ಯನವರು ವಿಶ್ಲೇಷಣೆ ಮಾಡಿದರು.

ಸರ್ಕಾರದ ವಿರುದ್ಧ ಕಿಡಿ ಕೊವಿಡ್​-19 ವಿಚಾರದಲ್ಲಿ ಸರ್ಕಾರ ಅರಾಜಕತೆ, ಬೇಜವಾಬ್ದಾರಿ ತೋರಿಸುತ್ತಿದೆ ಎಂದು ಸಿದ್ದರಮಯ್ಯನವರು ಕಿಡಿಕಾರಿದರು. ಕೊರೊನಾ ನಿಯಂತ್ರಣ ಮಾಡಿದ್ದೇವೆ ಎನ್ನುತ್ತಾರೆ..ಆದರೆ ವಿಮಾನ ನಿಲ್ದಾಣದಿಂದ ಜನರು ಮಿಸ್ ಆಗಿದ್ದಾರೆ ಎಂದು ಹೇಳುತ್ತಾರೆ. ಏರ್​ಪೋರ್ಟ್​ಗೆ ಬಂದವರನ್ನೇ ತಪಾಸಣೆಗೆ ಒಳಪಡಿಸಲು ಆಗದೆ ಇದ್ದವರು ಕೊವಿಡ್​ ಕಂಟ್ರೋಲ್​ ಹೇಗೆ ಮಾಡುತ್ತಾರೆ. ವಿಮಾನ ನಿಲ್ದಾಣಕ್ಕೆ ಬಂದವರು ಕದ್ದು ಓಡಿಹೋಗಲು ಸಾಧ್ಯವಾಗುತ್ತಾ? ಈ ಸರ್ಕಾರದ್ದು ಬೇಜವಾಬ್ದಾರಿತನ ಎಂದು ವಾಗ್ದಾಳಿ ನಡೆಸಿದರು.

ಹೊಸ ವರ್ಷಾಚರಣೆಗೆ ಜಾರಿಗೊಳಿಸಿದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ: ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್