AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಅನಾಮಧೇಯ ದೂರು: ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ

ದೂರುದಾರ ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ ನಡೆಸಬೇಕು. ದಾಖಲೆ ಒದಗಿಸಿದ ಬಳಿಕ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ. ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ಸಿಎಸ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಅನಾಮಧೇಯ ದೂರು: ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ
ವಿಧಾನ ಸೌಧ
KUSHAL V
|

Updated on: Mar 06, 2021 | 11:02 PM

Share

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಅನಾಮಧೇಯ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ಸಿಎಂ ಬಿ.ಎಸ್​. ಯಡಿಯೂರಪ್ಪ ಸೂಚನೆ ಹಿನ್ನೆಲೆಯಲ್ಲಿ ಸಿ.ಎಸ್ ಸುತ್ತೋಲೆ ಹೊರಡಿಸಿದ್ದಾರೆ. ದೂರಿನಲ್ಲಿ ಹೆಸರು ಹಾಗೂ ವಿಳಾಸ ಖಚಿತಪಡಿಸಿಕೊಳ್ಳಬೇಕು. ದೂರುದಾರರ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಉಲ್ಲೇಖಿಸಲಾಗಿದೆ.

ದೂರುದಾರ ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ ನಡೆಸಬೇಕು. ದಾಖಲೆ ಒದಗಿಸಿದ ಬಳಿಕ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ. ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ಸಿಎಸ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘಕ್ಕೆ ಎಲೆಕ್ಷನ್​: ಚುನಾವಣಾಧಿಕಾರಿಯಾಗಿ ರವೀಂದ್ರ ನೇಮಕ ಇತ್ತ, ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಲು ಆದೇಶ ಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವೀಂದ್ರ ನೇಮಕಗೊಂಡಿದ್ದಾರೆ. ಪಿ.ಎನ್‌.ರವೀಂದ್ರರನ್ನು ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರವೀಂದ್ರ ಸದ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬಜೆಟ್​ ಅನುಮೋದಿಸಲು ನಿಗದಿಯಾಗಿದ್ದ ಸಭೆ ಮುಂದೂಡಿಕೆ ಅತ್ತ, ಬಜೆಟ್​ ಅನುಮೋದಿಸಲು ನಿಗದಿಯಾಗಿದ್ದ ಸಭೆ ಮುಂದೂಡಿಕೆಯಾಗಿದೆ. ಸಚಿವ ಸಂಪುಟ ವಿಶೇಷ ಸಭೆ ಒಂದು ಗಂಟೆ ಮುಂದೂಡಿಕೆಯಾಗಿದೆ. ಸೋಮವಾರ ಬೆಳಗ್ಗೆ ವಿಧಾನಸೌಧದಲ್ಲಿ 10.30ಕ್ಕೆ ನಿಗದಿಯಾಗಿದ್ದ ಸಭೆ 11.30ಕ್ಕೆ ಮುಂದೂಡಿಕೆಯಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿಯಲ್ಲಿರುವ ಲೇಡಿಯ ಬೆನ್ನಟ್ಟಿದ ಪೊಲೀಸರಿಗೆ ಸಿಕ್ತಾ ಮಹತ್ತರ ಸುಳಿವು?

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?