ಸೋಂಕಿತರಿಗೆ ಚಿಕಿತ್ಸೆ ನೀಡಲೇಬೇಕು, ಖಾಸಗಿ ಆಸ್ಪತ್ರೆಗಳಿಗೆ CS ಖಡಕ್ ವಾರ್ನಿಂಗ್

| Updated By: ಸಾಧು ಶ್ರೀನಾಥ್​

Updated on: Jun 28, 2020 | 8:48 PM

ಬೆಂಗಳೂರು: ಕೊವಿಡ್ ಸೋಂಕಿತರಿಗೆ‌ ಚಿಕಿತ್ಸೆ ನಿರಾಕರಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಆದೇಶ ಹೊರಡಿಸಿರುವ ವಿಜಯ್​ ಭಾಸ್ಕರ್,​ ಕೊವಿಡ್ ರೀತಿಯ ಲಕ್ಷಣ ಇರುವವರಿಗೂ ಪರೀಕ್ಷೆ ಹಾಗೂ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಚಿಕಿತ್ಸೆ ಮತ್ತು ಪರೀಕ್ಷೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನ್ವಯ ಕೇಸ್ ದಾಖಲಿಸಲು ನಿರ್ಧರಿಸಿದ್ದಾರೆ. ಇದಲ್ಲದೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯವೂ […]

ಸೋಂಕಿತರಿಗೆ ಚಿಕಿತ್ಸೆ ನೀಡಲೇಬೇಕು, ಖಾಸಗಿ ಆಸ್ಪತ್ರೆಗಳಿಗೆ CS ಖಡಕ್ ವಾರ್ನಿಂಗ್
Follow us on

ಬೆಂಗಳೂರು: ಕೊವಿಡ್ ಸೋಂಕಿತರಿಗೆ‌ ಚಿಕಿತ್ಸೆ ನಿರಾಕರಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಖಡಕ್ ವಾರ್ನಿಂಗ್ ನೀಡಿದ್ದಾರೆ.

ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಆದೇಶ ಹೊರಡಿಸಿರುವ ವಿಜಯ್​ ಭಾಸ್ಕರ್,​ ಕೊವಿಡ್ ರೀತಿಯ ಲಕ್ಷಣ ಇರುವವರಿಗೂ ಪರೀಕ್ಷೆ ಹಾಗೂ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಚಿಕಿತ್ಸೆ ಮತ್ತು ಪರೀಕ್ಷೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನ್ವಯ ಕೇಸ್ ದಾಖಲಿಸಲು ನಿರ್ಧರಿಸಿದ್ದಾರೆ. ಇದಲ್ಲದೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯವೂ ಕೇಸ್ ದಾಖಲಿಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

Published On - 3:18 pm, Sun, 28 June 20