Chikballapur Lok Sabha Constituency: ಚಿಕ್ಕಬಳ್ಳಾಪುರದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: 29 ಅಭ್ಯರ್ಥಿಗಳು ಕಣದಲ್ಲಿ, 19,81,347 ಮತದಾರರು

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕಿನ್ನು ಕೇವಲ ಒಂದು ದಿನ ಬಾಕಿ ಇದೆ. ಹೀಗಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ತಿಳಿಸಿದ್ದಾರೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ 2,326 ಮತಗಟ್ಟೆಗಳಿವೆ.

Chikballapur Lok Sabha Constituency: ಚಿಕ್ಕಬಳ್ಳಾಪುರದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: 29 ಅಭ್ಯರ್ಥಿಗಳು ಕಣದಲ್ಲಿ, 19,81,347 ಮತದಾರರು
ಪ್ರಾತಿನಿಧಿಕ ಚಿತ್ರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 25, 2024 | 9:43 AM

ಚಿಕ್ಕಬಳ್ಳಾಪುರ, ಏಪ್ರಿಲ್​ 25: ಚಿಕ್ಕಬಳ್ಳಾಪುರ (Chikkaballapur) ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು ಮತದಾನಕ್ಕೆ (Vote) ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 19,81,347 ಮತದಾರರಿದ್ದಾರೆ. ಇವರಲ್ಲಿ 9,83,775 ಪುರುಷರು, 9,97,306 ಮಹಿಳೆಯರು, 266 ಇತರರು ಇದ್ದಾರೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ 2,326 ಮತಗಟ್ಟೆಗಳಿವೆ.

ಈ ಪೈಕಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ 259, ಬಾಗೇಪಲ್ಲಿ 267, ಚಿಕ್ಕಬಳ್ಳಾಪುರ 252, ಯಲಹಂಕ 411, ಹೊಸಕೋಟೆ 293, ದೇವನಹಳ್ಳಿ 292, ದೊಡ್ಡಬಳ್ಳಾಪುರ 276, ನೆಲಮಂಗಲ 276 ಮತಗಟ್ಟೆಗಳಿವೆ. ವಿಶೇಷ ಮತಗಟ್ಟೆಗಳನ್ನು ತೆರೆಯಲಾಗಿದೆ. 40 ಮಹಿಳಾ ಮತಗಟ್ಟೆಗಳು, 8 ವಿಶೇಷಚೇತನರ ಮತಗಟ್ಟೆಗಳು, 8 ಯುವ ನೌಕರರ ಮತಗಟ್ಟೆಗಳು ಹಾಗೂ 8 ಎಥ್ನಿಕ್ ಮತಗಟ್ಟೆಗಳನ್ನು ತೆರೆಯಲಾಗಿದೆ.

ಎಲ್ಲಾ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ, ವಿ.ಎಸ್.ಟಿ, ಸೆಕ್ಟರ್ ಅಧಿಕಾರಿಗಳು ಮತ್ತು ಚುನಾವಣಾ ವೆಚ್ಚ ನಿರ್ವಹಣಾ ತಂಡಗಳು ಕೊನೆಯ 72 ಗಂಟೆಗಳಲ್ಲಿ 24/7 ಕರ್ತವ್ಯ ನಿರ್ವಹಿಸಿ, ಅಭ್ಯರ್ಥಿಗಳ ಚುನಾವಣಾ ವೆಚ್ಚಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಎಲ್ಲಾ ಚೆಕ್‌ಪೋಸ್ಟ್​ಗಳಲ್ಲಿ 24/7 ಗಂಟೆಗಳ ಕಾಲ ನಿಗ ಇಡಲಾಗಿದ್ದು, ಕೊನೆಯ 72 ಗಂಟೆಗಳ ಕಾಲದಲ್ಲಿ ವಾಹನಗಳನ್ನು ಪರಿಶೀಲಿಸಿ ಅಕ್ರಮವಾಗಿ ಸಾಗಾಣಿಕೆ ಮಾಡುವ ಮದ್ಯ, ಹಣ ಮತ್ತು ಇತರೆ ಉಡುಗೊರೆಗಳನ್ನು ವಶಕ್ಕೆ ಪಡೆಯಲು ಕಟ್ಟು ನಿಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಹಾಗೂ ಯಾರಾದರೂ ರೂ.50,000 ರೂ. ಕ್ಕಿಂತ ಹೆಚ್ಚು ಹಣವನ್ನು ನಗದು ರೂಪದಲ್ಲಿ ಕೊಂಡ್ಯೊಯ್ಯುತ್ತಿರುವುದು ಕಂಡುಬಂದಲ್ಲಿ ಕೂಡಲೇ ವಶಕ್ಕೆ ಪಡೆಯಲು ನಿರ್ದೇಶನ ನೀಡಲಾಗಿದೆ ಎಂದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಅಥವಾ ಕಾರ್ಯಕರ್ತರು ತೋರಿಸುವ ಯಾವುದೇ ಆಮಿಷಗಳಿಗೆ ಸಂಬಂಧಿಸಿದಂತೆ ದೂರುಗಳನ್ನು CVigil App ಮೂಲಕ ದಾಖಲಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ತೆರಯಲಾಗಿರುವ ಕಂಟ್ರೋಲ್ ರೂಂ ನಂ. 1950 & 08156-277071 ಕ್ಕೆ ಕರೆ ಮಾಡಿ ದೂರುಗಳನ್ನು ನೀಡಬಹುದಾಗಿದೆ. ಸ್ವೀಕೃತವಾಗುವ ದೂರುಗಳ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ತುರ್ತು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ದಂಡ ಪ್ರಕ್ರಿಯೆ ಸಂಹಿತೆ – 1973 ರ ಕಲಂ 144 ರಡಿ ಮತದಾನದ ಪೂರ್ವ 48 ಗಂಟೆಗಳು ಅಂದರೆ ಏಪ್ರಿಲ್ 24 ರ ಸಂಜೆ 6 ಗಂಟೆಯಿಂದ 27 ರ ಬೆಳಿಗ್ಗೆ 6 ಗಂಟೆಯವರೆಗೂ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ ಮತ್ತು ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಲಾಗಿದೆ ಎಂದರು.

ಸಾರ್ವಜನಿಕರು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ಅಥವಾ ಗುಂಪು ಕೂಡುವುದನ್ನು ನಿಷೇಧಿಸಿದೆ ಮತ್ತು ಯಾವುದೇ ಆಯುಧಗಳು ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ ಮತ್ತು ಈ ಅವಧಿಯಲ್ಲಿ ಯಾವುದೇ ಸಂತೆ, ಜಾತ್ರೆ ಮತ್ತು ಇತರೆ ಜನಸಮೂಹಗಳನ್ನು ನಿಷೇಧಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 24 ರ ಸಂಜೆ 6 ಗಂಟೆಯಿಂದ 26 ರ ಮಧ್ಯರಾತ್ರಿ 12 ಗಂಟೆಯವರೆಗೂ ಒಣ ದಿನವನ್ನು ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು ಮುಚ್ಚಲು ಸೂಚಿಸಲಾಗಿದೆ. ಮತದಾನ ದಿನದಂದು ಯಾವುದೇ ಅಭ್ಯರ್ಥಿಯು ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗೆ ಪ್ರಚಾರ ಮಾಡುವಂತಿಲ್ಲ. ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಪೋನ್, ಕಾರ್ಡ್ಲೆಸ್ ಪೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು/ಸಿಬ್ಬಂದಿಗಳನ್ನು ಹೊರತುಪಡಿಸಿ). ಒಟ್ಟು 29 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈ ಪೈಕಿ ಪಕ್ಷೇತರ ಅಭ್ಯರ್ಥಿ ರಾಜಾರೆಡ್ಡಿ ಎಂಬುವವರು ನಿಧನರಾಗಿದ್ದಾರೆ. ಈ ಕುರಿತು ಎಲ್ಲ ಮತಗಟ್ಟೆಗಳಲ್ಲಿ ಮಾಹಿತಿಯನ್ನು ಪ್ರಚುರ ಪಡಿಸಲಾಗುತ್ತದೆ ಎಂದರು.

ಇದನ್ನೂ ಓದಿ: ಚಿನ್ನ, ಬೆಳ್ಳಿ, ವಜ್ರ.. ಅಬ್ಬಬ್ಬಾ ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಆಸ್ತಿ ಎಷ್ಟಿದೆ ಗೊತ್ತಾ?

ವಿಧಾನಸಭಾ ಕ್ಷೇತ್ರವಾರು ಗುರುತಿಸಲಾಗಿರುವ ಕೇಂದ್ರಗಳಲ್ಲಿ ಮಸ್ಟರಿಂಗ್, ಡಿ ಮಸ್ಟರಿಂಗ್ ನಡೆಯಲಿದ್ದು, ಬಳಿಕ ಮತ ಚಲಾವಣೆಯಾದ ಇವಿಎಂಗಳನ್ನು ಪೊಲೀಸ್ ಬಿಗಿ ಭದ್ರತೆಯೊಂದಿಗೆ ಜಿ.ಪಿ.ಎಸ್ ಅಳವಡಿಕೆಯ ಕ್ಲೋಸ್ಡ್ ಕಂಟೈನರ್ ವಾಹನದಲ್ಲಿ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ ಸ್ಟ್ರಾಂಗ್ ರೂಂಗೆ ತಂದು ಇಡಲಾಗುತ್ತದೆ. ಇಲ್ಲಿಯೇ ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ಏಪ್ರಿಲ್ 26 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಶಾಂತಿಯುತ ಮತದಾನ ಪ್ರಕ್ರಿಯೆಗೆ ಸಮರ್ಪಕವಾಗಿ ಎಲ್ಲ ಸಿದ್ದತಾ ಕ್ರಮಗಳನ್ನು ಪೂರ್ಣಗೊಳಿಸಲಾಗಿದೆ. ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ  ಮನವಿ ಮಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:10 am, Thu, 25 April 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ