Karnataka Govt Job: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನೇಮಕಾತಿ; ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ!
ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲಾ ಆಯುಷ್ ಕಚೇರಿಯು ಕಮ್ಯುನಿಟಿ ಹೆಲ್ತ್ ಆಫೀಸರ್ (CHO) ಹುದ್ದೆಗೆ ಅರ್ಹ ಪದವೀಧರರಿಂದ ಆಫ್‌ಲೈನ್ ಅರ್ಜಿ ಆಹ್ವಾನಿಸಿದೆ. ಮಾಸಿಕ 25,000 ರೂ. ಗೌರವಧನವಿರುವ ಈ ಸರ್ಕಾರಿ ಉದ್ಯೋಗಕ್ಕೆ 40 ವರ್ಷ ಮೀರಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಕರ್ನಾಟಕ ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಸುವರ್ಣವಕಾಶವೊಂದು ಇಲ್ಲಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಒಂದು ಉತ್ತಮ ಅವಕಾಶವೊಂದನ್ನು ತಂದಿದೆ. ಜಿಲ್ಲಾ ಆಯುಷ್ ಕಚೇರಿಯ ಮೂಲಕ ಕಮ್ಯುನಿಟಿ ಹೆಲ್ತ್ ಆಫೀಸರ್ (CHO) ಹುದ್ದೆಯ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ (Offline) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಯ ವಿವರಗಳು ಮತ್ತು ಅರ್ಹತೆಗಳು:
ಈ ನೇಮಕಾತಿ ಅಭಿಯಾನದ ಮೂಲಕ 1 ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾಗುವ ಅಭ್ಯರ್ಥಿಗೆ ಪ್ರತಿ ತಿಂಗಳು 25,000ರೂ. ಗೌರವಧನ ಸಿಗಲಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ BAMS ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ
ವಯೋಮಿತಿ ಮತ್ತು ಸಡಲಿಕೆ:
ಆಗಸ್ಟ್ 13, 2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಲಿಲಿಕೆ ನೀಡಲಾಗಿದೆ:
- ಕ್ಯಾಟ್ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷಗಳು
- ಕ್ಯಾಟ್-1 ಅಭ್ಯರ್ಥಿಗಳಿಗೆ: 5 ವರ್ಷಗಳು
- ವಿಕಲಚೇತನ (PH) ಅಭ್ಯರ್ಥಿಗಳಿಗೆ: 10 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಅಗತ್ಯ ಶೈಕ್ಷಣಿಕ ದಾಖಲೆಗಳು, ವಯಸ್ಸಿನ ಪುರಾವೆ, ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರವನ್ನು ಲಗತ್ತಿಸಿ ಆಗಸ್ಟ್ 31ರೊಳಗೆ ಕೆಳಗಿನ ವಿಳಾಸಕ್ಕೆ ತಲುಪುವಂತೆ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ: ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಚೇರಿ, ಚಿಕ್ಕಬಳ್ಳಾಪುರ – 562101.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




