AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಚಾಲಕ ಆತ್ಮಹತ್ಯೆ: ಡೆತ್​ ನೋಟ್​​​​ನಲ್ಲಿ ತಮ್ಮ ಹೆಸರು ಉಲ್ಲೇಖಿಸಿದ್ದಕ್ಕೆ ಸುಧಾಕರ್ ಹೇಳಿದ್ದಷ್ಟು

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ.ಕೆ, ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಒಂದೆಡೆ ಕಾಂಗ್ರೆಸ್ ನಾಯಕರು ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ, ಮತ್ತೊಂದೆಡೆ ಸುಧಾಕರ್ ಬೆಂಬಲಿಗರು ಆರೋಪವನ್ನು ತಳ್ಳಿಹಾಕಿದ್ದಾರೆ. ಇನ್ನು ಈ ಎಲ್ಲಾ ಬೆಳವಣಿಗೆಗಳ ನಡುವೆ ದೆಹಲಿಯಲ್ಲಿ ಸ್ವತಃ ಸುಧಾಕರ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಕಾರು ಚಾಲಕ ಆತ್ಮಹತ್ಯೆ: ಡೆತ್​ ನೋಟ್​​​​ನಲ್ಲಿ ತಮ್ಮ ಹೆಸರು ಉಲ್ಲೇಖಿಸಿದ್ದಕ್ಕೆ ಸುಧಾಕರ್ ಹೇಳಿದ್ದಷ್ಟು
Babu And Sudhakar
ರಮೇಶ್ ಬಿ. ಜವಳಗೇರಾ
|

Updated on: Aug 07, 2025 | 4:09 PM

Share

ನವದೆಹಲಿ/ಚಿಕ್ಕಬಳ್ಳಾಪುರ, (ಆಗಸ್ಟ್ 07): ಚಿಕ್ಕಬಳ್ಳಾಪುರದ (Chikkaballapur) ಜಿಲ್ಲಾಡಳಿತ ಭವನದ ಆವರಣದಲ್ಲಿ ಗುತ್ತಿಗೆ ನೌಕರ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಬಾಬು ಡೆತ್ನೋಟ್ (Death Note) ಬರೆದಿರುವುದು ಪತ್ತೆಯಾಗಿದ್ದು, ಡೆತ್ನೋಟ್ನಲ್ಲಿ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ (Dr K Sudhakar) ಹೆಸರು ಉಲ್ಲೇಖಿಸಿರುವುದು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಸುಧಾಕರ್ ಹೆಸರು ಕೇಳಿಬರತ್ತಿದ್ದಂತೆಯೇ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇನ್ನು ಬಗ್ಗೆ ನವದೆಹಲಿಯಲ್ಲಿ ಸುಧಾಕರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬಾಬು ಎಂಬ ವ್ಯಕ್ತಿ ನನಗೆ ಗೊತ್ತಿಲ್ಲ, ಆತನ ಮುಖವನ್ನೇ ನೋಡಿಲ್ಲ. ಈ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖ ಮಾಡಿದ್ದಾರೋ ಗೊತ್ತಿಲ್ಲ ಎಂದು ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ.

ಬಾಬು ಯಾರು ಅಂತ ಗೊತ್ತಿಲ್ಲ

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸುಧಾಕರ್, ಬಾಬು ಎಂಬ ವ್ಯಕ್ತಿ ನನಗೆ ಗೊತ್ತಿಲ್ಲ, ಆತನ ಮುಖವನ್ನೇ ನೋಡಿಲ್ಲ. ಈ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖ ಮಾಡಿದ್ದಾರೋ ಗೊತ್ತಿಲ್ಲ. ಬಾಬು ಅನ್ನೋ ವ್ಯಕ್ತಿ ಚಿಕ್ಕಬಳ್ಳಾಪುರ ನಿವಾಸಿ ಅಂತ ಗೊತ್ತಾಗಿದೆ . ಆತ್ಮಹತ್ಯೆಗೆ ಶರಣಾಗಿರುವುದು ಜಿಲ್ಲಾ ಪಂಚಾಯತ್ ಆವರಣದಲ್ಲಿ . ಮೊದಲು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತೇನೆ. ಮೊದಲನೆಯದಾಗಿ ನಂಗೆ ಈ ಸಾವು ದುಃಖ ತಂದಿದೆ.ನನ್ನ ಸಾರ್ವಜನಿಕ ಜೀವನದಲ್ಲಿ ಈ ಬಾಬು ಅನ್ನೋ ವ್ಯಕ್ತಿಯನ್ನ ಭೇಟಿ ಆಗಿಲ್ಲ . ನಾನು ಎರಡು ಬಾರಿ ಸಚಿವ ಆಗಿದ್ದೇನೆ, ಶಾಸಕ ಆಗಿದ್ದೇನೆ . ಈ ಸಮಯದಲ್ಲಿ ಹಲವರಿಗೆ ಕೆಲಸ ಕೊಡಿಸಿದ್ದೇನೆ, ಆದ್ರೆ ಈ ವ್ಯಕ್ತಿ ನಂಗೆ ಯಾರೂ ಅಂತ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಬಿಜೆಪಿ ಸಂಸದ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ, ರಾಜಕೀಯ ಸ್ವರೂಪ ಪಡೆದ ಪ್ರಕರಣ

ಶಾಸಕರು, ಉಸ್ತುವಾರಿ ಸಚಿವರು ರಾಜಕೀಯ ಇದೆ

ಬಾಬು ಕುಟುಂಬದ ದವರು ದೂರು ಕೊಡಲು ಠಾಣೆಗೆ ಹೋದಾಗ ಅಲ್ಲಿನ ಪಿಎಸ್ ಐ ಶರಣಪ್ಪ ಡೆತ್ ನೋಟ್ ನಲ್ಲಿರುವಂತೆ ದೂರು ಕೊಡಿ ಎಂದಿದ್ದಾರೆ. ಶಾಸಕರು, ಉಸ್ತುವಾರಿ ಸಚಿವರು ರಾಜಕೀಯ ಇದೆ. ನನ್ನ ಒಳಗೊಂಡಂತೆ ಯಾರೇ ತಪ್ಪಿತಸ್ಥರು ಇದ್ದರೂ ಅವರಿಗೆ ಉಗ್ರ ಶಿಕ್ಷೆಯಾಗಲಿ. ಕಾನೂನು ಏನೇ ಇರಲಿ ತನಿಖೆ ಪಾರದರ್ಶಕ ವಾಗಿರಲಿ. ಇದು ಮಾಧ್ಯಮದ ಟ್ರಯಲ್ ಆಗೋದು ಬೇಡ. ಸರಿಯಾಗಿ ತನಿಖೆ ಆಗಲಿ ಎಂದು ಒತ್ತಾಯಿಸಿದ್ದಾರೆ.

ಮೃತ ಕುಟುಂಬ ಸದಸ್ಯರನ್ನು ನಾನು ಭೇಟಿ ಮಾಡುತ್ತೇನೆ. ದೆಹಲಿಯಿಂದ ಹೋದಾ ಬಳಿಕ ಭೇಟಿ ಮಾಡಿ‌ ಸಾಂತ್ವನ ಹೇಳುತ್ತೇನೆ. ಇದರ ಹಿಂದೆ ರಾಜಕೀಯ ಪಿತೂರಿ ಇದೆ. ಇದು ಜಗತ್ ಜಾಹೀರಾಗಿದೆ. ಕಾಂಗ್ರೆಸ್ ಶಾಸಕರ ಹೆಸರು ಬಂದ್ರೆ ಒಂದು ಕಾನೂನು, ಬಿಜೆಪಿ ಶಾಸಕ, ಸಂಸದರು ಹೆಸರು ಬಂದ್ರೆ ಬೇರೆ ಕಾನೂನು. ಬಾಬು ಸಾವನ್ನು ರಾಜಕೀಯ ಕಾರಣಕ್ಕೆ ಎಳೆದು ತರುವುದು ಸರಿ ಅಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.

ನಾಗೇಶ್ ಅವರ ಮಾವ ಚಿಕ್ಕಾಡಗನಹಳ್ಳಿ ಕೃಷ್ಣಮೂರ್ತಿ ಪರಿಚಯ ಇದೆ. ಕೊಡಗು ಪ್ರಕರಣದಲ್ಲಿ ಶಾಸಕರು ಹೆಸರು ಯಾಕೆ ಹಾಕಿಲ್ಲ. ಇದರಲ್ಲಿ ರಾಜಕೀಯ ಇರೋದು ಎದ್ದು ಕಾಣುತ್ತಿದೆ. ನಾಗೇಶ್ ಹಾಗೂ ಮಂಜುನಾಥ್ ಎಂಬ ಇಬ್ಬರು ವ್ಯಕ್ತಿಗಳು, ಕೆಲಸ ಕೊಡಿಸೋದಾಗಿ ಹೇಳಿ 15 ಲಕ್ಷ  ರೂ. ತಗೊಂಡಿದ್ದರೆ ಅಂತಾನೆ ಮಾಹಿತಿ ಬಂದಿದೆ . ನಾಗೇಶ್ ಅವರ ಮಾವ ಕೃಷ್ಣಮೂರ್ತಿ ನಮ್ಮ ಪಕ್ಷದಲ್ಲಿದ್ದರು . ಈ ಒಂದು ಆತ್ಮಹತ್ಯೆ ರಾಜಕೀಯ ಮಾಡೋ ಪ್ರಯತ್ನವನ್ನು ಮಾಡಲಾಗುತ್ತಿದೆ. ದೇಶದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿದೆ. ತನಿಖೆ ಪಾರದರ್ಶಕವಾಗಿ ಆಗ್ಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ . ದೆಹಲಿಯಿಂದ ಹೋದಮೇಲೆ ಮೃತಪಟ್ಟ ಕುಟುಂಬಸ್ಥರನ್ನ ಭೇಟಿ ಮಾಡುತ್ತೇನೆ. ನನ್ನ ಕೈಲಾದ ಸಹಾಯವನ್ನು ಆ ಕುಟುಂಬಸ್ಥರಿಗೆ ಮಾಡುತ್ತೇನೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ