Chikkaballapur gelatin blast | ಅನುಮತಿ ಪಡೆದವರು ಮಾತ್ರ ಗಣಿಗಾರಿಕೆಯಲ್ಲಿ ಸ್ಫೋಟಕ ಬಳಸುವ ಕಾನೂನು ತರುತ್ತೇವೆ; ಸಚಿವ ಮುರುಗೇಶ್ ನಿರಾಣಿ
Chikkaballapur gelatin blast: ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಎಚ್ಚರಿಸಿದರು.
ದೆಹಲಿ: ಸರ್ಕಾರದಿಂದ ಅನುಮತಿ ಪಡೆದವರು ಮಾತ್ರ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಜಿಲೆಟಿನ್ ಕಡ್ಡಿಗಳನ್ನು ಬಳಕೆ ಮಾಡುವಂತಹ ಹೊಸ ಕಾನೂನು ಜಾರಿ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಪೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದಲೇ ಇಂಥ ಘಟನೆಗಳು ನಡೆಯುತ್ತವೆ ಎಂದು ಹೇಳಿದರು. ಇದನ್ನು ತಡೆಯಲು ಸದ್ಯದಲ್ಲೇ ಸರ್ಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಪೋಟಕ ವಸ್ತುಗಳನ್ನು ಬಳಸುವ ಕಾನೂನು ಜಾರಿ ಮಾಡುವುದಾಗಿ ತಿಳಿಸಿದರು.
ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.
ಈ ಘಟನೆಗಳು ನುರಿತ ಕೆಲಸಗಾರರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನಮಗೆ ಅರ್ಥೈಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಕಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟರು.
ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ತರಬೇತಿ ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಜೊತೆಗೆ ಗಣಿಗಾರಿಕೆ ಪ್ರದೇಶಗಳಲ್ಲಿನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಮತ್ತು ಅಕ್ರಮಗಳಲ್ಲಿ ಭಾಗಿಯಾಗಿರುವ ಯಾರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಎಷ್ಟೇ ದೊಡ್ಡವರಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನೇ ಸರ್ಕಾರ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಪುನಃ ಪುನಃ ಮರುಕಳಿಸುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಈಗಾಗಲೇ ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳು, ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ವಸ್ತುಸ್ಥಿತಿ ಪರಿಶೀಲಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಘಟನೆಯಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ ಶಿವಮೊಗ್ಗ ಸೋಟಕ್ಕೆ ಮುಂಚಿತವಾಗಿ ಸೋಟಕಗಳನ್ನು ಸಂಗ್ರಹಿಸಲಾಗಿದೆ ಎಂದು ನಾನು ಅಧಿಕಾರಿಗಳಿಂದ ತಿಳಿದುಕೊಂಡಿದ್ದೇನೆ. ಕೆಲವು ಅಕೃಮ ಮತ್ತು ವೈಯಕ್ತಿಕ ಕೆಲಸಗಳಿಂದಾಗಿ ನಾನು ದೆಹಲಿಯಲ್ಲಿದ್ದೇನೆ. ನಾನು ಇಂದು ಸಂಜೆ ಬೆಂಗಳೂರಿಗೆ ತೆರಳಲಿದ್ದೇನೆ ಮತ್ತು ನೇರವಾಗಿ ಚಿಕ್ಕಬಳ್ಳಾ ಪುರದ ಸೋಟದ ಸ್ಥಳಕ್ಕೆ ಹೋಗುತ್ತೇನೆ ಎಂದು ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಸಹ ಮಾಹಿತಿ ನೀಡಲಾಗಿದೆ. ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಸೂಕ್ತವಾದ ಚಿಕಿತ್ಸೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.ಘಟನೆ ನಡೆದ ನಂತರ ಕೆಲವರು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಪೊಲೀಸರು ತಕ್ಷಣವೇ ಅವರನ್ನು ಬಂಧಿಸುವ ವಿಶ್ವಾಸವಿದೆ. ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.
ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಡಿಸಿ, ಎಸ್ಪಿ ಮತ್ತು ನಮ್ಮ ಇಲಾಖೆಗಳನ್ನು ಅಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅಂದಾಜು ಮಾಡಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡ ವ್ಯಕ್ತಿಗೆ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಿದೆ ಎಂದು ನಿರಾಣಿ ತಿಳಿಸಿದರು.
Published On - 12:18 pm, Tue, 23 February 21