Apply Now: ಚಿಕ್ಕಬಳ್ಳಾಪುರ ಆರೋಗ್ಯ ಇಲಾಖೆಯಲ್ಲಿ ಉದ್ಯೋಗವಕಾಶ; 45 ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಇಲಾಖೆಯು 45 ಫಾರ್ಮಸಿ, ನರ್ಸಿಂಗ್ ಹಾಗೂ ಜೂನಿಯರ್ ಲ್ಯಾಬ್ ಟೆಕ್ನಿಷಿಯನ್ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶ. ಯಾವುದೇ ಅರ್ಜಿ ಶುಲ್ಕವಿಲ್ಲ. ಆಸಕ್ತರು ಸೆಪ್ಟೆಂಬರ್ 3ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆ ಮತ್ತು ದಾಖಲಾತಿ ಪರಿಶೀಲನೆ ದಿನಾಂಕಗಳನ್ನು ಗಮನಿಸಿ.

ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ಫಾರ್ಮಸಿ ಆಫೀಸರ್, ನರ್ಸಿಂಗ್ ಆಫೀಸರ್ ಸೇರಿದಂತೆ ವಿವಿಧ 45 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ ಮತ್ತು ಶೈಕ್ಷಣಿಕ ಅರ್ಹತೆ:
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 23 ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್ (DMLT), 7 ಫಾರ್ಮಸಿ ಆಫೀಸರ್ (D.Pharm) ಹಾಗೂ 15 ನರ್ಸಿಂಗ್ ಆಫೀಸರ್ (Nursing) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳು ತಮ್ಮ ವಿಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ ಮತ್ತು ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷ ಮೀರಬಾರದು. ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ. ಅಲ್ಲದೆ, ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ, ಉಚಿತವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ
ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ:
ಆನ್‌ಲೈನ್ ಅರ್ಜಿ, ಶೈಕ್ಷಣಿಕ ದಾಖಲಾತಿಗಳ ಪರಿಶೀಲನೆ ಮತ್ತು ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಎಲ್ಲಾ ಅಗತ್ಯ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡುವ ಮೂಲಕ ಅರ್ಜಿಯನ್ನು ಪೂರ್ಣಗೊಳಿಸಬೇಕು.
ಪ್ರಮುಖ ದಿನಾಂಕಗಳು ಮತ್ತು ದಾಖಲಾತಿ ಪರಿಶೀಲನೆ:
ಆನ್‌ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 24 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 03 ಕೊನೆಯ ದಿನವಾಗಿದೆ. ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್ ಮತ್ತು ಫಾರ್ಮಸಿ ಆಫೀಸರ್ ಹುದ್ದೆಗಳಿಗೆ ಸೆಪ್ಟೆಂಬರ್ 04 ರಂದು ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗೆ ಸೆಪ್ಟೆಂಬರ್ 05 ರಂದು ದಾಖಲಾತಿ ಪರಿಶೀಲನೆ ನಡೆಯಲಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




