Nandi Hills: ಪ್ರವಾಸಿಗರೇ ಗಮನಿಸಿ; ನಂದಿಬೆಟ್ಟಕ್ಕೆ ಜುಲೈ 19ರವರೆಗೆ ಪ್ರವೇಶ ನಿರ್ಬಂಧ

ನಾಳೆ ಮತ್ತು ನಾಡಿದ್ದು ವಾರಾಂತ್ಯವೂ ಇದ್ದು, ಕೊವಿಡ್ ಸೋಂಕು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರದಲ್ಲಿ 27 ಜನರಿಗೆ ಕೊವಿಡ್ ಖಚಿತವಾಗಿದ್ದು,  ಇಬ್ಬರು ಮೃತಪಟ್ಟಿದ್ದಾರೆ.

Nandi Hills: ಪ್ರವಾಸಿಗರೇ ಗಮನಿಸಿ; ನಂದಿಬೆಟ್ಟಕ್ಕೆ ಜುಲೈ 19ರವರೆಗೆ ಪ್ರವೇಶ ನಿರ್ಬಂಧ
ನಂದಿ ಬೆಟ್ಟದ ಮೇಲಿಂದ ಕಾಣುವ ವಿಹಂಗಮ ದೃಶ್ಯ
Follow us
TV9 Web
| Updated By: guruganesh bhat

Updated on:Jul 16, 2021 | 8:41 PM

ಚಿಕ್ಕಬಳ್ಳಾಪುರ: ಕೊವಿಡ್​ ಸೋಂಕಿನ ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ನಂದಿಬೆಟ್ಟಕ್ಕೆ (Nandi Hills) ಪ್ರವೇಶ ನಿರ್ಬಂಧಿಸಲಾಗಿದೆ. ಜುಲೈ 19ರ ಬೆಳಗ್ಗೆ 6ರವರೆಗೂ ಪ್ರವೇಶ ನಿರ್ಬಂಧ ಇರಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆದೇಶಿಸಿದ್ದಾರೆ. ನಾಳೆ ಮತ್ತು ನಾಡಿದ್ದು ವಾರಾಂತ್ಯವೂ ಇದ್ದು, ಕೊವಿಡ್ ಸೋಂಕು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು 27 ಜನರಿಗೆ ಕೊವಿಡ್ ಖಚಿತವಾಗಿದ್ದು,  ಇಬ್ಬರು ಮೃತಪಟ್ಟಿದ್ದಾರೆ.

ಇಂದಿನ ಕೊವಿಡ್ ಅಪ್​ಡೇಟ್ ಇಲ್ಲಿದೆ ರಾಜ್ಯದಲ್ಲಿ ಇಂದು ಒಂದೇ ದಿನ 1,977 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 48 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 462 ಜನರಿಗೆ ಸೋಂಕು ಖಚಿತಪಟ್ಟಿದ್ದು, 10 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,78,564ಕ್ಕೆ ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ 28,10,121 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,037 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 32,383 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಇಂದು ಒಂದೇ ದಿನ 3,188 ಜನರು ಕೊವಿಡ್​ನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಂದಿನ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇಕಡಾ 1.42ರಷ್ಟಿದೆ. (Karnataka Covid Update 1977 new cases and 48 deaths today)

ನಂದಿಬೆಟ್ಟಕ್ಕೆ ರೋಪ್ ವೇ ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಿಸಲು ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಕೆಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಬೆಟ್ಟಕ್ಕೆ (Nandi Hills) ರೋಪ್ ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಲು ಅವರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ಜತೆಗೆ, ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಮಾದರಿಯಲ್ಲಿ ಶ್ರವಣಬೆಳಗೊಳದಲ್ಲಿ ಬಾಹುಬಲಿ ಸಾಕ್ಷ್ಯಚಿತ್ರ ಪ್ರದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇಯನ್ನು ಖಾಸಗಿ ಸಂಸ್ಥೆಯೊಂದು ನಿರ್ಮಿಸಲಿದ್ದು, ದೇಶ ವಿದೇಶಗಳಲ್ಲಿ ರೋಪ್ ವೇಗಳನ್ನು ನಿರ್ಮಿಸಿದ ಅನುಭವಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ:  

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

World Population Day 2021: ಜಗತ್ತಿನಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ದೇಶಗಳು ಯಾವುವು? ಅಲ್ಲಿನ ವಿಶೇಷಗಳೇನು? ಇಲ್ಲಿದೆ ವಿವರ

(Chikkaballapur Nandi Hills Travel restrictions till 19th July due to covid spread)

Published On - 8:30 pm, Fri, 16 July 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ