ಚಿಕ್ಕಬಳ್ಳಾಪುರ, ಮೇ 20: ಡ್ರಾಪ್ ಕೊಡುವ ನೆಪದಲ್ಲಿ ಯುವಕನೋರ್ವ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ (students) ಮೇಲೆ ಅತ್ಯಾಚಾರಕ್ಕೆ (rape) ಯತ್ನಿಸಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಿದ್ಯಾರ್ಥಿನಿಯರು ವಾಪಸಾಗುವಾಗ ಘಟನೆ ನಡೆದಿದ್ದು, ಸದ್ಯ ಕೃತ್ಯ ಯತ್ನಿಸಿದ ಪೋಲಕುಂಟಹಳ್ಳಿ ನಿವಾಸಿ ಶ್ರೀಕಾಂತ್ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ. ಜೊತೆಗೆ ಇಬ್ಬರು ವಿದ್ಯಾರ್ಥಿನಿಯರನ್ನ ಪೆರೇಸಂದ್ರ ಠಾಣೆ ಪೊಲೀಸರು ರಕ್ಷಿಸಿದ್ದಾರೆ.
ತಡರಾತ್ರಿ ಪೆರೇಸಂದ್ರದಿಂದ ಚಿಕ್ಕಬಳ್ಳಾಪುರಕ್ಕೆ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಹತ್ತಿಸಿಕೊಂಡಿದ್ದ ಶ್ರೀಕಾಂತ್ ಹೆದ್ದಾರಿ ಬದಲು ಅರಣ್ಯಕ್ಕೆ ಕರೆದೊಯ್ದು ಅತ್ಯಚಾರಕ್ಕೆ ಯತ್ನಿಸಿದ್ದಾನೆ. ಆತನಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿಯರು 112 ಪೊಲೀಸರಿಗೆ ಕರೆ ಮಾಡಿದ್ದಾರೆ. ಲೊಕೇಶನ್ ಆಧಾರದ ಮೇಲೆ ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಆರೋಪಿ ಶ್ರೀಕಾಂತ್‍ನನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.
ಬೆಂಗಳೂರು: ಚಾಕೊಲೇಟ್ ಕೊಡಿಸುವುದಾಗಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬಿಹಾರ ಮೂಲದ ರಾಜೇಶ್ ಗುಪ್ತಾ ಎಂಬಾತನಿಂದ ಪೈಶಾಚಿಕ ಕೃತ್ಯವೆಸಲಾಗಿದ್ದು, ಪೋಕ್ಸೋ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿದೆ. ಶನಿವಾರ ರಾತ್ರಿ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿದ್ದ.
ಇದನ್ನೂ ಓದಿ: ಬೆಳಗಾವಿ: ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ? ಆಗಿದ್ದೇನು?
ಉದ್ಯೋಗ ಅರಸಿ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ ರಾಜೇಶ್, ನಾಗೇನಹಳ್ಳಿ ಬಳಿಯ ಸಮುಚ್ಚಯವೊಂದರಲ್ಲಿ ಸೆಕ್ಯೂರಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನೇಪಾಳ ಮೂಲದ ಬಾಲಕಿಯ ಪೋಷಕರು ನಾಗೇನಹಳ್ಳಿಯ ಮತ್ತೊಂದು ಅಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು.
ಲೈಂಗಿಕ ದೌರ್ಜನ್ಯದ ಬಗ್ಗೆ ತಾಯಿಯ ಬಳಿ ಬಾಲಕಿ ಹೇಳಿಕೊಂಡಿದ್ದಾಳೆ. ತಕ್ಷಣ ಹೆಬ್ಬಾಳ ಪೊಲೀಸ್ ಠಾಣೆಗೆ ಪೋಷಕರು ದೂರು ಕೊಟ್ಟಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಹೆಬ್ಬಾಳ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮಾರಕಾಸ್ತ್ರಗಳನ್ನು ಹಿಡಿದು ಹಿಡಿದು ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೆಣ್ಣೂರು ಪೊಲೀಸರಿಂದ ಸುಹೇದ್ ಮತ್ತು ಮುಬಾರಕ ಬಂಧನ. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಅಂಧ ವೈದ್ಯರ ಮನೆಯಲ್ಲಿ ಕಳ್ಳತನ: ಮಹಡಿಯಿಂದ ಬಿದ್ದು ಸಿಕ್ಕಿಹಾಕಿಕೊಂಡ ಹಳೆಯ ಕಳ್ಳ, ಈ ಸಿನಿಮೀಯ ಸ್ಟೋರಿ ಓದಿ
ಬಾರ್ ಬಳಿ ತೆರಳಿ ಮಾರಕಾಸ್ತ್ರ ಹಿಡಿದು ಇಬ್ಬರು ಆರೋಪಿಗಳು ಕುಳಿತಿದ್ದರು. ಹೊಯ್ಸಳ ಪೊಲೀಸರಿಗೆ ಕರೆಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.