ಗೇಮ್ ಆಡಲು ಮೊಬೈಲ್ ಕೊಡದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಗೇಮ್ ಆಡಲು ಮೊಬೈಲ್ ಕೊಡಲಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಮೇಡಂಪಲ್ಲಿ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಯಶವಂತ್ ಮೃತ ವಿದ್ಯಾರ್ಥಿ. ಭಾನುವಾರ ತಡರಾತ್ರಿ ಗೇಮ್​ ಆಡಲು ಮೊಬೈಲ್​ ಬೇಕೆಂದು ಯಶವಂತ್ ಹಠ ಹಿಡಿದಿದ್ದಾನೆ. ಆಗ ತಮ್ಮನಿಗೆ ಮೊಬೈಲ್ ನೀಡಲು ಅಕ್ಕ ನಿರಾಕರಿಸಿದ್ದಾಳೆ. ಇದರಿಂದ ಮನನೊಂದು ಚೇಳೂರು ಗ್ರಾಮದ ಅರವಿಂದ ಪ್ರೌಢಶಾಲೆ ವಿದ್ಯಾರ್ಥಿ ಯಶವಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೇಮ್ ಆಡಲು ಮೊಬೈಲ್ ಕೊಡದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
ಸಾಧು ಶ್ರೀನಾಥ್​

Updated on: Dec 24, 2019 | 7:33 PM

ಚಿಕ್ಕಬಳ್ಳಾಪುರ: ಗೇಮ್ ಆಡಲು ಮೊಬೈಲ್ ಕೊಡಲಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಮೇಡಂಪಲ್ಲಿ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಯಶವಂತ್ ಮೃತ ವಿದ್ಯಾರ್ಥಿ.

ಭಾನುವಾರ ತಡರಾತ್ರಿ ಗೇಮ್​ ಆಡಲು ಮೊಬೈಲ್​ ಬೇಕೆಂದು ಯಶವಂತ್ ಹಠ ಹಿಡಿದಿದ್ದಾನೆ. ಆಗ ತಮ್ಮನಿಗೆ ಮೊಬೈಲ್ ನೀಡಲು ಅಕ್ಕ ನಿರಾಕರಿಸಿದ್ದಾಳೆ. ಇದರಿಂದ ಮನನೊಂದು ಚೇಳೂರು ಗ್ರಾಮದ ಅರವಿಂದ ಪ್ರೌಢಶಾಲೆ ವಿದ್ಯಾರ್ಥಿ ಯಶವಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us