ಶಿಡ್ಲಘಟ್ಟದಲ್ಲಿ 185 ಕೋಟಿ ರೂ. ವೆಚ್ಚದ ಸರ್ಕಾರಿ ಹೈಟೆಕ್ ರೇಷ್ಮೆ ಮಾರ್ಕೆಟ್ ನಿರ್ಮಾಣ: ಸಚಿವ ಕೆ ವೆಂಕಟೇಶ್

| Updated By: ಗಂಗಾಧರ​ ಬ. ಸಾಬೋಜಿ

Updated on: Oct 05, 2023 | 7:55 PM

ಶಿಡ್ಲಘಟ್ಟ ನಗರದ ಹೊರವಲಯದಲ್ಲಿ 185 ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದಿನ ವರ್ಷದ ವೇಳೆಗೆ ಹೈಟೆಕ್ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಿಸುವ ಉದ್ದೇಶವಿದೆ. ಇಂದು ಸ್ಥಳ ಗುರುತಿಸಲಾಗಿದೆ, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್​ ಹೇಳಿದ್ದಾರೆ.

ಶಿಡ್ಲಘಟ್ಟದಲ್ಲಿ 185 ಕೋಟಿ ರೂ. ವೆಚ್ಚದ ಸರ್ಕಾರಿ ಹೈಟೆಕ್ ರೇಷ್ಮೆ ಮಾರ್ಕೆಟ್ ನಿರ್ಮಾಣ: ಸಚಿವ ಕೆ ವೆಂಕಟೇಶ್
ರೇಷ್ಮೆ ಮಾರ್ಕೆಟ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವ ಕೆ. ವೆಂಕಟೇಶ್
Follow us on

ಚಿಕ್ಕಬಳ್ಳಾಪುರ, ಅಕ್ಟೋಬರ್​ 05: ಜಿಲ್ಲೆಯ ಶಿಡ್ಲಘಟ್ಟ ನಗರದ ಹೊರವಲಯದಲ್ಲಿ 185 ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದಿನ ವರ್ಷದ ವೇಳೆಗೆ ಹೈಟೆಕ್ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಿಸುವ ಉದ್ದೇಶವಿದೆ. ಇಂದು ಸ್ಥಳ ಗುರುತಿಸಲಾಗಿದೆ, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ (K Venkatesh)​ ಹೇಳಿದ್ದಾರೆ. ಇಂದು ಶಿಡ್ಲಘಟ್ಟ ನಗರಕ್ಕೆ ಭೇಟಿ ನೀಡಿ ನಗರದ ಹೊರವಲಯದ ಹನುಮಂತಪುರ ಗ್ರಾಮದ ಸರ್ವೇ ನಂ 19ರ ಸರ್ಕಾರಿ ಜಮೀನಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ಮಾತನಾಡಿದ ಅವರು, ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಿಸುವುದು ಈ ಭಾಗದ ರೈತರ ಬಹುದಿನದ ಬೇಡಿಕೆ ಆಗಿತ್ತು. ಇದನ್ನು ಮನಗಂಡ ಸರ್ಕಾರ 2023-24 ಸಾಲಿನ ಆಯವ್ಯಯದಲ್ಲಿ “ಶಿಡ್ಲಘಟ್ಟ ನಗರದಲ್ಲಿ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಿಸಲು 75 ಕೋಟಿ ರೂ. ಅನುದಾನವನ್ನು ಮಿಸಲಿಡಲಾಗಿತ್ತು. ಈ ಯೋಜನೆಗೆ ಒಟ್ಟು 185 ಅನುದಾನದ ಅವಶ್ಯಕತೆ ಇದ್ದು ಪ್ರಸ್ತುತ ಮೊದಲನೇ ಹಂತದಲ್ಲಿ 80 ಕೋಟಿ ರೂ. ಅನುದಾನದಲ್ಲಿ ಕೆಲಸ ಆರಂಭ ಆಗಲಿದೆ ಎಂದರು.

ಇದನ್ನೂ ಓದಿ: ಅ. 6 ರಂದು ಚಿಕ್ಕಬಳ್ಳಾಪುರಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ; ಇಲ್ಲಿದೆ ವಿವರ

ಮುಂದಿನ ವರ್ಷದಲ್ಲಿ ಉಳಿಕೆ ಅನುದಾನವನ್ನು ಒದಗಿಸಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಸದ್ಯದಲ್ಲೇ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು.

ಪ್ರಸ್ತುತ ಹನುಮಂತಪುರ ಗ್ರಾಮದ ಬಳಿ ಗುರ್ತಿಸಿರುವ ಜಾಗ 15 ಎಕರೆ ವಿಸ್ತೀರ್ಣವನ್ನು ಹೊಂದಿದ್ದು, ನಗರಕ್ಕೆ ಸಮೀಪ ಇರುವುದರಿಂದ ರೇಷ್ಮೆ ಗೂಡನ್ನು ರೈತರು ಮಾರುಕಟ್ಟೆಗೆ ತರಲು ಅನುಕೂಲ ಆಗಲಿದೆ. ರೇಷ್ಮೆ ವಹಿವಾಟಿಗೂ ಸಹಕಾರಿಯಾಗುತ್ತದೆ.

ಇದನ್ನೂ ಓದಿ: ವಿವಾದದ ಗೂಡಾದ ಐತಿಹಾಸಿಕ ಪ್ರಸಿದ್ಧ ಪಾಪಾಘ್ನಿ ಮಠ: ಒಂದೇ ಸಮುದಾಯದ 2 ಬಣಗಳ ಮಧ್ಯೆ ಪೈಟ್

ಮುಂದಿನ ದಿನಗಳಲ್ಲಿ ಆನ್ ಲೈನ್ ವ್ಯವಸ್ಥೆ ಮೂಲಕ ವಹಿವಾಟು ನಡೆಯುವುದರಿಂದ ಅದಕ್ಕೆ ಪೂರಕವಾಗಿ ಮಾರುಕಟ್ಟೆಯನ್ನು ರೈತರಿಗೆ ಮತ್ತು ವ್ಯಾಪರಸ್ಥರಿಗೆ ಅನುಕೂಲ ಆಗುವ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.