ಕಾರು ಅಡ್ಡಗಟ್ಟಿ ಬೆಂಗಳೂರು ಮೂಲದ ವ್ಯಾಪಾರಿಗಳ ಬಳಿ ದರೋಡೆ

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಕಾರು ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ತಾಲೂಕಿನ ಹಾರೋಬಂಡೆ ಬಳಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ ಮಾಡಿ ನಗದು, ಮೊಬೈಲ್ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೆಂಗಳೂರು ಮೂಲದ ಸಾದಿಕ್, ಫಕ್ರುಬಾಬು, ಮುಷರಫ್​, ಅರುಣ್ ಹಲ್ಲೆಗೊಳಗಾದವರು. ಈ ನಾಲ್ವರೂ ದನದ ವ್ಯಾಪಾರಿಗಳಾಗಿದ್ದು, ಬೆಂಗಳೂರಿನಿಂದ ಅನಂತಪುರಕ್ಕೆ ಬಾಡಿಗೆ ಕಾರಿನಲ್ಲಿ ಹೊರಟಿದ್ದರು. ಕಾರಿನಲ್ಲಿ ಬಂದ ಐವರು ದುಷ್ಕರ್ಮಿಗಳು ವ್ಯಾಪಾರಿಗಳ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಬಳಿಕ ವ್ಯಾಪಾರಿಗಳ ಬಳಿಯಿದ್ದ 3.10ಲಕ್ಷ ನಗದು, 3 ಮೊಬೈಲ್ […]

ಕಾರು ಅಡ್ಡಗಟ್ಟಿ ಬೆಂಗಳೂರು ಮೂಲದ ವ್ಯಾಪಾರಿಗಳ ಬಳಿ ದರೋಡೆ
Follow us
ಸಾಧು ಶ್ರೀನಾಥ್​
|

Updated on: Jan 26, 2020 | 2:06 PM

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಕಾರು ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ತಾಲೂಕಿನ ಹಾರೋಬಂಡೆ ಬಳಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ ಮಾಡಿ ನಗದು, ಮೊಬೈಲ್ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರು ಮೂಲದ ಸಾದಿಕ್, ಫಕ್ರುಬಾಬು, ಮುಷರಫ್​, ಅರುಣ್ ಹಲ್ಲೆಗೊಳಗಾದವರು. ಈ ನಾಲ್ವರೂ ದನದ ವ್ಯಾಪಾರಿಗಳಾಗಿದ್ದು, ಬೆಂಗಳೂರಿನಿಂದ ಅನಂತಪುರಕ್ಕೆ ಬಾಡಿಗೆ ಕಾರಿನಲ್ಲಿ ಹೊರಟಿದ್ದರು. ಕಾರಿನಲ್ಲಿ ಬಂದ ಐವರು ದುಷ್ಕರ್ಮಿಗಳು ವ್ಯಾಪಾರಿಗಳ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಬಳಿಕ ವ್ಯಾಪಾರಿಗಳ ಬಳಿಯಿದ್ದ 3.10ಲಕ್ಷ ನಗದು, 3 ಮೊಬೈಲ್ ಕಸಿದುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್