AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿ 3 ವರ್ಷದ ಬಾಲಕ ಸಾವು, ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ

ಮನೆಯ ಮುಂದೆ ಕಾಪೌಂಡ್​ನಲ್ಲಿ ಮಲಗಿದ್ದಾಗ ರಾತ್ರಿ ನಾಗರಹಾವು 3 ವರ್ಷದ ಬಾಲಕನಿಗೆ ಕಚ್ಚಿದೆ. ಸಕಾಲಕ್ಕೆ ಬಾಗೇಪಲ್ಲಿ ಆಸ್ಪತ್ರೆಯ ಸ್ಟಾಪ್ ನರ್ಸ್ ಬೋಮ್ಮಣ್ಣ ಸ್ಪಂದಿಸಿಲ್ಲ. ವೈದ್ಯರು ಬಂದು ನೋಡುವಷ್ಟರಲ್ಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿ 3 ವರ್ಷದ ಬಾಲಕ ಸಾವು, ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ
ಸಾಂದರ್ಭಿಕ ಚಿತ್ರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಆಯೇಷಾ ಬಾನು|

Updated on: Jun 15, 2024 | 9:15 AM

Share

ಚಿಕ್ಕಬಳ್ಳಾಪುರ, ಜೂನ್.15: ನಾಗರಹಾವು ಕಚ್ಚಿ 3 ವರ್ಷದ ಬಾಲಕ ಮೃತಪಟ್ಟ (Death) ಘಟನೆ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದೆ ರಾತ್ರಿ ಮಲಗಿದ್ದಾಗ ನಾಗರಹಾವು (Cobra) ಕಚ್ಚಿ ದೀಕ್ಷಿತ್(3) ಮೃತಪಟ್ಟಿದ್ದಾನೆ. ಸೂಕ್ತ ಸಮಯದಲ್ಲಿ ಬಾಗೇಪಲ್ಲಿ ಆಸ್ಪತ್ರೆಯ ಸಿಬ್ಬಂದಿ ಬೊಮ್ಮಣ್ಣ ಸ್ಪಂದಿಸಿಲ್ಲ. ನಿರ್ಲಕ್ಷ್ಯ ತೋರಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಮಾಲತಿ ಹಾಘೂ ಸುರೇಶ್ ದಂಪತಿಯ ಏಕೈಕ ಪುತ್ರ ದೀಕ್ಷಿತ್ ಮನೆಯ ಮುಂದೆ ಕಾಪೌಂಡ್​ನಲ್ಲಿ ಮಲಗಿದ್ದಾಗ ರಾತ್ರಿ ನಾಗರಹಾವು ಕಚ್ಚಿದೆ. ಸಕಾಲಕ್ಕೆ ಬಾಗೇಪಲ್ಲಿ ಆಸ್ಪತ್ರೆಯ ಸ್ಟಾಪ್ ನರ್ಸ್ ಬೋಮ್ಮಣ್ಣ ಸ್ಪಂದಿಸಿಲ್ಲ. ವೈದ್ಯರು ಬಂದು ನೋಡುವಷ್ಟರಲ್ಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಹಿಟ್ ಆ್ಯಂಡ್ ರನ್, ಚಿರತೆ ಬಲಿ

ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿಟ್​ ಆ್ಯಂಡ್ ರನ್​ಗೆ ಚಿರತೆ ಬಲಿಯಾಗಿದೆ. ಅಪಘಾತವೆಸಗಿದ ಅಪರಿಚಿತ ವಾಹನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ

ಇನ್ನೂ ಮತ್ತೊಂದೆಡೆ ಚಿರತೆ ರಸ್ತೆ ಅಪಘಾತದಲ್ಲಿ ಅಥವಾ ಕೊಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ 10 ಗಂಟೆಗೆ ಪಶು ಚಿಕಿತ್ಸಾಲಯದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದ್ದು ಸತ್ಯ ಬಯಲಾಗಲಿದೆ. ಸದ್ಯ ಚಿರತೆ ಶವ ನಗರೂರಿನ ನರ್ಸರಿಯಲ್ಲಿ ಇಡಲಾಗಿದೆ. ಕಳೆದ 6 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆಯನ್ನು ಕೊಂದಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. RFO ಗೋವಿಂದರಾಜು ನೇತೃತ್ವದಲ್ಲಿ ಚಿರತೆ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ

ಧಾರವಾಡದಲ್ಲಿ ಬಜರಂಗದಳ ಕಾರ್ಯಕರ್ತರಾದ ಸೋಮಶೇಖರ್, ಗಣೇಶ್ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಸಲಾಗಿದೆ. ಇದ್ರಿಂದ ರೊಚ್ಚಿಗೆದ್ದ ಕಾರ್ಯಕರ್ತರು ಧಾರವಾಡ ಉಪನಗರ ಠಾಣೆ ಎದುರು ಆಕ್ರೋಶ ವ್ಯಕ್ತಪಡಿಸಿದ್ರು. ವಿಷ್ಯ ಗೊತ್ತಾಗ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಆಗಮಿಸಿದ್ರು. ಈ ವೇಳೆ ಕಮಿಷನರ್ ರೇಣುಕಾ ಸುಕುಮಾರ, ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ