AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: 65 ವರ್ಷದ ಮಹಿಳೆ ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು

Chikkaballapura News: ಚಿಕ್ಕಬಳ್ಳಾಪುರ ಕೋರ್ಟ್ ಹಾಲ್‌ನಲ್ಲಿ ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟ-ಮಂತ್ರ ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ವಾಮಾಚಾರದ ದೃಶ್ಯ ಸೆರೆಯಾಗಿದ್ದು, ಈ ಸಂಬಂಧ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ದೂರು ನೀಡಿದ್ದರು. ಆ ಬೆನ್ನಲ್ಲೇ ಮಹಿಳೆಯನ್ನು ಬಂಧಿಸಲಾಗಿದ್ದು, ಆರೋಪಿಗೆ ಕೋರ್ಟ್​​ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: 65 ವರ್ಷದ ಮಹಿಳೆ ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು
ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: ಮಹಿಳೆ ಅರೆಸ್ಟ್​Image Credit source: ANI
ಪ್ರಸನ್ನ ಹೆಗಡೆ
|

Updated on: Jul 14, 2026 | 4:23 PM

Share

ಚಿಕ್ಕಬಳ್ಳಾಪುರ, ಜುಲೈ 14: ನ್ಯಾಯಾಧೀಶರ ಕುರ್ಚಿಯ ಮೇಲೆ ವಾಮಾಚಾರ ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಕೋರ್ಟ್‌ ಹಾಲ್‌ಗೆ ಪ್ರವೇಶಿಸಿದ್ದ ಈಕೆ, ನ್ಯಾಯಾಧೀಶರ ಕುರ್ಚಿಯ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಎರಚಿದ್ದಾಳೆ ಎನ್ನಲಾಗಿದೆ.

ಆರೋಪಿ ಮಹಿಳೆಗೆ 14 ದಿನ ನ್ಯಾಯಾಂಗ ಬಂಧನ

ಎರಡು ದಿನಗಳ ಹಿಂದೆ ಮಹಿಳೆ ವಾಮಾಚಾರ ನಡೆಸಿದ್ದಾಳೆ ಎನ್ನಲಾಗಿರುವ ಘಟನೆ ನ್ಯಾಯಾಲಯದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅದರಲ್ಲಿ ಮಹಿಳೆ ನ್ಯಾಯಾಧೀಶರ ಕುರ್ಚಿಯ ಮೇಲೆ ಬಿಳಿ ಸಾಸಿವೆ ಕಾಳುಗಳನ್ನು ಎರಚುತ್ತಿರುವುದು ಕಂಡುಬಂದಿದೆ. ಈ ಕುರಿತು ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ನೇತ್ರಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ. ಈಕೆ ವಿರುದ್ಧ ಕರ್ನಾಟಕ ಅಮಾನವೀಯ ದುಷ್ಟ ಆಚರಣೆಗಳು ಮತ್ತು ಮಾಟ-ಮಂತ್ರಗಳ ತಡೆ ಹಾಗೂ ನಿರ್ಮೂಲನೆ ಕಾಯ್ದೆ, 2017ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯವು ಆರೋಪಿ ಮಹಿಳೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆ, ಪುತ್ರನ ಬಂಧಿಸಿದ ಬಾಗೇಪಲ್ಲಿ ಪೊಲೀಸರು

ಇಷ್ಟು ದಿನ ಅಲ್ಲಲ್ಲಿ ವರದಿಯಾಗುತ್ತಿದ್ದ ಮಾಟ-ಮಂತ್ರ ಪ್ರಕರಣಗಳು ಈಗ ಕೋರ್ಟ್​​ ವರೆಗೂ ತಲುಪಿರುವುದು ಆತಂಕಕ್ಕೆ ಕಾರಣವಾಗಿದೆ. ಆರೋಪಿ ಮಹಿಳೆ ಯಾವ ಕಾರಣಕ್ಕಾಗಿ ವಾಮಾಚಾರ ನಡೆಸಲು ಮುಂದಾಗಿದ್ದಳು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈ ಸಂಬಂಧ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸತ್ಯಾಸತ್ಯತೆ ಆ ಬಳಿಕವೇ ಬಹಿರಂಗಗೊಳ್ಳಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ