ಚಿಕ್ಕಬಳ್ಳಾಪುರ, ಡಿ.13: ಕಾರು ಡಿಕ್ಕಿ ಹೊಡೆದು ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ನಾಯಿಂದ್ರಹಳ್ಳಿ ಬಳಿ ನಡೆದಿದೆ. ಸುಬ್ರಮಣಿ(55), ಗಾಯತ್ರಮ್ಮ(50) ಮೃತ ರ್ದುದೈವಿಗಳು. ಮೃತ ದಂಪತಿ ಕೋಲಾರ ತಾಲೂಕಿನ ಕ್ಯಾಲನೂರು ನಿವಾಸಿಗಳಾಗಿದ್ದು, ನಾಯಿಂದ್ರಹಳ್ಳಿ ಗ್ರಾಮಕ್ಕೆ ಆಗಮಿಸಿ ವಾಪಸ್ ಊರಿಗೆ ಹೊಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಬಳಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಗಂಗಪ್ಪ ಹಲಸೂರು(42) ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕಾಫಿನಾಡಲ್ಲಿ ಸರಣಿ ಅಪಘಾತ; ಕಾರು, ಟಿಪ್ಪರ್, ಬೈಕ್ ನಡುವೆ ಡಿಕ್ಕಿಯಾಗಿ ದಂಪತಿ ಸಾವು, 1 ವರ್ಷದ ಮಗುವಿಗೆ ಗಾಯ
ಚಾಮರಾಜನಗರ: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಮಾದಾಪುರ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಜಿಂಕೆಗೆ ಡಿಕ್ಕಿ ಹೊಡೆದಿದೆ. ಆದರೆ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ಜಿಂಕೆ, ರಸ್ತೆ ಬದಿಗೆ ಬಿದ್ದು ನರಳಾಡಿ ಸಾವನ್ನಪ್ಪಿದೆ. ಈ ಕುರಿತು ಚಾಮರಾಜನಗರ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ