ಗೌರಿಬಿದನೂರಿನಲ್ಲಿ ಕ್ಯಾಂಟರ್​- ಆಟೋ ನಡುವೆ ಭೀಕರ ಅಪಘಾತ: ಮೂವರು ದುರ್ಮರಣ

ಕ್ಯಾಂಟರ್​ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗಡಿ ಭಾಗವಾದ ರಂಗನಹಳ್ಳಿ ಗೇಟ್​ ಬಳಿ ನಡೆದಿದೆ.

ಗೌರಿಬಿದನೂರಿನಲ್ಲಿ ಕ್ಯಾಂಟರ್​- ಆಟೋ ನಡುವೆ ಭೀಕರ ಅಪಘಾತ: ಮೂವರು ದುರ್ಮರಣ
ಕ್ಯಾಂಟರ್, ಆಟೋ ಡಿಕ್ಕಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 11, 2022 | 6:21 PM

ಚಿಕ್ಕಬಳ್ಳಾಫುರ: ಕ್ಯಾಂಟರ್​ ಹಾಗೂ ಆಟೋ ನಡುವೆ ಭೀಕರ ಅಪಘಾತ (accident) ಸಂಭವಿಸಿದ್ದು ಮೂವರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗಡಿ ಭಾಗವಾದ ರಂಗನಹಳ್ಳಿ ಗೇಟ್​ ಬಳಿ ನಡೆದಿದೆ. ಕೊರಟಗೆರೆಯ ನಿವಾಸಿಗಳಾದ ಮೀಲಾನಿ(25), ವೃದ್ಧೆ ಜೈರಬಿ(70) ಸ್ಥಳದಲ್ಲೇ ವೃತಪಟ್ಟರೆ, ಆಟೋ‌ ಚಾಲಕ ಕಲಂದರ್ ಗೌರಿಬಿದನೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜೊತೆಗೆ ಅರ್ಪ (5), ಅಸೀತಾ (3) ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗೌರಿಬಿದನೂರು ತಾಲ್ಲೂಕಿನ ಅಲಕಾಪುರಕ್ಕೆ ಆಗಮಿಸಿ ಕೆಲಸ ಮುಗಿಸಿಕೊಂಡು ವಾಪಸ್ ಕೊರಟಗೆರೆಗೆ ತೆರಳುವ ವೇಳೆ ಅಪಘಾತವಾಗಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಗುಡಿಬಂಡೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಲಿಂಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದ ಸರ್ಕಾರಿ ಬಸ್

ಹಾವೇರಿ: ಸವಣೂರು ಹೊರವಲಯದ ಮೋತಿ ಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ರಸ್ತೆ ಬದಿಗೆ ನುಗ್ಗಿದೆ. ಅದೃಷ್ಟವಶಾತ್ 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸವಣೂರು ಪಟ್ಟಣದಿಂದ ಗದಗ ಕಡೆ ಸಾರಿಗೆ ಬಸ್ ಹೊರಟಿತ್ತು. ರಾಜ್ಯ ಹೆದ್ದಾರಿ ಸಂಪೂರ್ಣ ಹಾಳಾಗಿದ್ದರಿಂದ ಅವಘಡ ಸಂಭವಿಸಿದೆ. ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime News: ಉಡುಪಿ ಸಬ್​ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ

ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಅಂತರ್‌ ಜಿಲ್ಲಾ ಕಳ್ಳರ ಬಂಧನ

ಕಾರವಾರ: ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಅಂತರ್‌ ಜಿಲ್ಲಾ ಕಳ್ಳರ ಬಂಧನ ಮಾಡಲಾಗಿದೆ. ವಸಂತ ಕುಮಾರ ಮತ್ತು ಸಲೀಂ ಬಂಧಿತರು. ಆರೋಪಿಗಳಿಂದ 1 ಕಾರು, ದೇವಸ್ಥಾನದ ವಿವಿದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಒಂದು ತಿಂಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಗ್ರಾಮದ ಮಹಾಗಜಲಕ್ಷ್ಮೀ ದೇವಸ್ಥಾನದಲ್ಲಿ ಖದೀಮರು ಕಳ್ಳತನ ಮಾಡಿದ್ದರು. 3,000 ರೂ ಕಾಣಿಕೆ, 10,000 ರೂ. ಬೆಲೆ ಬಾಳುವ ಎರಡು ಗಂಟೆಗಳು ಮತ್ತು ಇತರೆ ಸಣ್ಣ ಪುಟ್ಟ ಗಂಟಿಗಳನ್ನ ಕಳ್ಳತನ ಮಾಡಿದ್ದರು. ಈ ಖದೀಮರು ಇನ್ನು ಹಲವು ದೇವಸ್ಥಾನಗಳ ಕಳ್ಳತನ ಮಾಡಿದ್ದಾರೆ ಎನ್ನುವ ಆರೋಪವಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: Crime News: ಶಿವಮೊಗ್ಗ ಸಮೀಪ ಲಾರಿ-ಕಾರು ಮುಖಾಮುಖಿಯಲ್ಲಿ ಮೂವರ ಸಾವು, ಬೆಂಗಳೂರು ಕ್ಯಾಸಿನೊ ಮೇಲೆ ಪೊಲೀಸರ ದಾಳಿ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಧಾರವಾಡ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ ಸುಳ್ಳದ (35) ಆತ್ಮಹತ್ಯೆ ಮಾಡಿಕೊಂಡ ರೈತ. ಮನೆಯಲ್ಲಿ ನೇಣುಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ವಿವಿಧ ಬ್ಯಾಂಕ್‌ಗಳಲ್ಲಿ ಮೃತ ಬಸವರಾಜ 3 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗುತ್ತಿದೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:09 pm, Sun, 11 December 22

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ