ಚಲಿಸುತ್ತಿದ್ದ ಬಸ್ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದ್ದು, ಇದರಿಂದ ಶಾಲಾ ಕಾಲೇಜುಗಳಿಗೆ ಹೋಗಿ ಬರುವುದಕ್ಕೂ ವಿದ್ಯಾರ್ಥಿ(Student)ಗಳಿಗೆ ತೊಂದರೆಯಾಗುತ್ತಿದ್ದು, ಇದೀಗ ಚಲಿಸುತ್ತಿದ್ದ ಬಸ್ನಿಂದ ವಿದ್ಯಾರ್ಥಿನಿಯೋರ್ವಳು ಕೆಳಗೆ ಬಿದ್ದ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ: ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಬಹುತೇಕ ಎಲ್ಲಾ ಬಸ್(Bus)ಗಳು ಫುಲ್ ಆಗುತ್ತಿದ್ದು, ಶಾಲಾ ಕಾಲೇಜುಗಳಿಗೆ ಹೋಗಿ ಬರುವುದಕ್ಕೂ ವಿದ್ಯಾರ್ಥಿ (Student) ಗಳಿಗೆ ತೊಂದರೆಯಾಗುತ್ತಿದೆ. ಪುಟ್ಬೋಡ್ ಮೇಲೆ ನಿಂತುಕೊಂಡು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅದರಂತೆ ಇದೀಗ ಚಿಕ್ಕಬಳ್ಳಾಪುರ (Chikkaballapur) ತಾಲ್ಲೂಕಿನ ಜಾತವಾರದ ಹೊಸಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಸಾರಿಗೆ ಬಸ್ನಿಂದ ವಿದ್ಯಾರ್ಥಿನಿಯೋರ್ವಳು ಕೆಳಗೆಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಸಾರಿಗೆ ಬಸ್ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದ ವಿದ್ಯಾರ್ಥಿನಿ
ಹಾವೇರಿ: ಕಳೆದ ಜೂ.12 ನೇ ತಾರೀಖು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ಸರ್ಕಾರಿ ಬಸ್ನಿಂದ ಬಿದ್ದು ಪ್ರೌಢಶಾಲೆ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದ ಘಟನೆ ನಡೆದಿತ್ತು. ಮಧು ಕುಂಬಾರ(14) ಮೃತ ವಿದ್ಯಾರ್ಥಿನಿ. ಮಧು ವಾಸನ ಗ್ರಾಮದಿಂದ ಕುಸನೂರು ಶಾಲೆಗೆ ಹೋಗಲು ಸರ್ಕಾರಿ ಬಸ್ನ್ನು ಹತ್ತಿದ್ದಳು. ಈ ಬಸ್ ಫುಲ್ ರಶ್ ಇದ್ದುದರಿಂದ ಬಾಗಿಲ ಬಳಿಯೇ ನಿಂತಿದ್ದಳು. ಆದ್ರೆ, ನಿಯಂತ್ರಣ ತಪ್ಪಿ ಬಸ್ನಿಂದ ಬಿದ್ದು ಸಾವನ್ನಪ್ಪಿದ್ದಳು. ಇದೀಗ ಅದೃಷ್ಟವಶಾತ್ ಮತ್ತೊಂದು ಅನಾಹುತ ತಪ್ಪಿದೆ. ಆದಷ್ಟು ಬೇಗ ಸರ್ಕಾರ ಈ ಕುರಿತು ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಬೇಕಾಗಿದೆ.
ಇದನ್ನೂ ಓದಿ:ಸರ್ಕಾರಿ ಬಸ್ನಿಂದ ಬಿದ್ದು ವಿದ್ಯಾರ್ಥಿನಿ ಸಾವು: ಮುಂಜಾಗ್ರತೆ ಕ್ರಮ ಕೈಗೊಳ್ಳಲುವಂತೆ ಕರಾರಸಾನಿ ಸೂಚನೆ
ಚಲಿಸುತ್ತಿದ್ದ ಸರ್ಕಾರಿ ಬಸ್ನಿಂದ ಬಿದ್ದು ಸಾವನ್ನಪ್ಪಿದ್ದ ಪ್ರಯಾಣಿಕ
ಮಂಡ್ಯ: ಇನ್ನು ವಿದ್ಯಾರ್ಥಿಗಳು ಅಷ್ಟೇ ಅಲ್ಲದೇ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಹೌದು ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಬಳಿ , ಚಲುವೇಗೌಡ ಎಂಬಾತ ಬಸ್ನಿಂದ ಬಿದ್ದು ಸಾವನ್ನಪ್ಪಿದ್ದ. ಬಸ್ ಪೂರ್ತಿ ತುಂಬಿದ್ದ ಕಾರಣ ಫುಟ್ಬೋರ್ಡ್ನಲ್ಲಿ ನಿಂತಿದ್ದ. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದರು. ಜಕ್ಕನಹಳ್ಳಿ ಕಡೆಯಿಂದ ಮಂಡ್ಯ ಕಡೆಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿತ್ತು.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ