AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದಂಡುಪಾಳ್ಯ ಗೇಟ್ ಬಳಿ ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಟಿಟಿ ವಾಹನದಲ್ಲಿದ್ದ 12 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 28, 2024 | 9:52 PM

ಚಿಕ್ಕಬಳ್ಳಾಪುರ, ಆ.28: ಟಿಟಿ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ. ಟಿಟಿ ವಾಹನ ಆಂಧ್ರ ಪ್ರದೇಶದ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಈ ವೇಳೆ ಆಂಧ್ರಪ್ರದೇಶದ ಕಡೆ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನೆಲ್ಲೂರು ಜಿಲ್ಲೆಯ ಶ್ರೀಕಾಂತ್, ಶ್ರೀನಿವಾಸಲು, ಪುಷ್ಪ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಟಿಟಿ ವಾಹನದಲ್ಲಿದ್ದ 12 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ, ಎಎಸ್‌ಪಿ ಖಾಸಿಂ ರಜ, ಡಿವೈಎಸ್ಪಿ ಮುರಳಿಧರ್, ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಇನ್ನು ಈ ಘಟನೆ ಕುರಿತು ಕೆಂಚಾರ್ಲ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಗದಗ: ಸರ್ಕಾರಿ ಬಸ್, ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಇಮಾಮಪುರ ಬಳಿ ಖಾಸಗಿ ಬಸ್, ಆಟೋ ಡಿಕ್ಕಿ; ಓರ್ವ ಮಹಿಳೆ ಸಾವು

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಇಮಾಮಪುರ ಗ್ರಾಮದ ಬಳಿ ಖಾಸಗಿ ಬಸ್​ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಚಳ್ಳಕೆರೆ ಪಟ್ಟಣದ ಗಂಗಮ್ಮ(56) ಮೃತ ರ್ದುದೈವಿ. ಆಟೋ ಚಾಲಕ ಈಶ್ವರಪ್ಪಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 pm, Wed, 28 August 24

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ