ಚಿಕ್ಕಬಳ್ಳಾಪುರ, ಆ.28: ಟಿಟಿ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ. ಟಿಟಿ ವಾಹನ ಆಂಧ್ರ ಪ್ರದೇಶದ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಈ ವೇಳೆ ಆಂಧ್ರಪ್ರದೇಶದ ಕಡೆ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನೆಲ್ಲೂರು ಜಿಲ್ಲೆಯ ಶ್ರೀಕಾಂತ್, ಶ್ರೀನಿವಾಸಲು, ಪುಷ್ಪ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಟಿಟಿ ವಾಹನದಲ್ಲಿದ್ದ 12 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ, ಎಎಸ್‌ಪಿ ಖಾಸಿಂ ರಜ, ಡಿವೈಎಸ್ಪಿ ಮುರಳಿಧರ್, ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಇನ್ನು ಈ ಘಟನೆ ಕುರಿತು ಕೆಂಚಾರ್ಲ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಗದಗ: ಸರ್ಕಾರಿ ಬಸ್, ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಇಮಾಮಪುರ ಗ್ರಾಮದ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಚಳ್ಳಕೆರೆ ಪಟ್ಟಣದ ಗಂಗಮ್ಮ(56) ಮೃತ ರ್ದುದೈವಿ. ಆಟೋ ಚಾಲಕ ಈಶ್ವರಪ್ಪಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:48 pm, Wed, 28 August 24