ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯನಿಂದ ಲಂಚ; ರೋಗಿಯಿಂದ ಲಂಚ ಸ್ವೀಕರಿಸುತ್ತಿದ್ದ ವೈದ್ಯ ಎಸಿಬಿ ಬಲೆಗೆ

ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯನಿಂದ ಲಂಚ; ರೋಗಿಯಿಂದ ಲಂಚ ಸ್ವೀಕರಿಸುತ್ತಿದ್ದ ವೈದ್ಯ ಎಸಿಬಿ ಬಲೆಗೆ
ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯನಿಂದ ಲಂಚ; ರೋಗಿಯಿಂದ ಲಂಚ ಸ್ವೀಕರಿಸುತ್ತಿದ್ದ ವೈದ್ಯ ಎಸಿಬಿ ಬಲೆಗೆ

ಮೂಳೆ ರೋಗ ತಜ್ಞ ವೈದ್ಯ ಡಾ.ಕೆ.ಸುದರ್ಶನ್ ಆಸ್ಪತ್ರೆಯಲ್ಲಿ 7 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಗ ವೈದ್ಯ ಅಧಿಕಾರಿಗಳನ್ನು ನೋಡಿ ತಬ್ಬಿಬ್ಬಾಗಿದ್ದಾರೆ.

TV9kannada Web Team

| Edited By: Ayesha Banu

Jan 25, 2022 | 7:39 PM

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ರೋಗಿಯೊಬ್ಬರ ಶಸ್ತ್ರ ಚಿಕಿತ್ಸೆ ಮಾಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು 7 ಸಾವಿರ ರೂಪಾಯಿ ಹಣ ಸ್ವೀಕರಿಸುತ್ತಿದ್ದಾಗ ಸರ್ಕಾರಿ ತಜ್ಞ ವೈದ್ಯನೊರ್ವ ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ದೊಡ್ಡಿವಾರಿಪ್ಪಲಿ ಗ್ರಾಮದ ನಿವಾಸಿ ವೆಂಕಟೇಶಪ್ಪ ಎನ್ನುವವರು ತಮ್ಮ ಕ್ಲಾವಿಕಲ್ ಬೋನ್ನ ಚಿಕಿತ್ಸೆಗಾಗಿ ಬಾಗೇಪಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ರೋಗಿಗೆ ಶಸ್ತ್ರ ಚಿಕಿತ್ಸೆ ಮಾಡಲು ಆಸ್ಪತ್ರೆಯ ಮೂಳೆ ತಜ್ಞ ಡಾ.ಕೆ.ಸುದರ್ಶನ್ 10 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಮೂರು ಸಾವಿರ ರೂಪಾಯಿ ಹಣವನ್ನು ಮುಂಗಡವಾಗಿ ನೀಡಲಾಗಿದೆ. ಮತ್ತೆ ಇನ್ನುಳಿದ ಹಣ ನೀಡುವಂತೆ ವೈದ್ಯರು ಪೀಡಿಸಿದ ಕಾರಣ ಅಸಮಾಧಾನಗೊಂಡ ವೆಂಟಕೇಶ್ ಸ್ನೇಹಿತ ರಮೇಶ ಕುಮಾರ್ ಮೂಲಕ ಚಿಕ್ಕಬಳ್ಳಾಪುರ ವಿಭಾಗದ ಎಸಿಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಎಸಿಬಿ ಅಧಿಕಾರಿಗಳು ಇಂದು(ಜ.25) ಸಂಜೆ ಕಾರ್ಯಾಚರಣೆ ನಡೆಸಿ ವೈದ್ಯನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ವೈದ್ಯ: ಮೂಳೆ ರೋಗ ತಜ್ಞ ವೈದ್ಯ ಡಾ.ಕೆ.ಸುದರ್ಶನ್ ಆಸ್ಪತ್ರೆಯಲ್ಲಿ 7 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಗ ವೈದ್ಯ ಅಧಿಕಾರಿಗಳನ್ನು ನೋಡಿ ತಬ್ಬಿಬ್ಬಾಗಿದ್ದಾರೆ. ರೋಗಿ ನೀಡಿದ ಲಂಚದ ಹಣವನ್ನು ವಶಕ್ಕೆ ಪಡೆದ ಅಧಿಕಾರಿಗಳು ವೈದ್ಯನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ ಬೀದರ್: ಜಿಲ್ಲೆಯ ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ ಲಂಚ ಪಡೆಯುವ ವಿಡಿಯೋ ವೈರಲ್ ಆಗಿದೆ. ಸಿಪಿಐ P.R.ರಾಘವೇಂದ್ರ ವಿರುದ್ಧ ಲಂಚ ಸ್ವೀಕಾರ ಆರೋಪ ಕೇಳಿ ಬಂದಿದ್ದು ಲಂಚ ಪಡೆಯುವ ವಿಡಿಯೋ ವೈರಲ್ ಆಗಿದೆ.

ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ P.R.ರಾಘವೇಂದ್ರ ಪೊಲೀಸ್ ಸಮವಸ್ತ್ರದಲ್ಲಿ ವ್ಯಕ್ತಿಯಿಂದ ಲಂಚ ಪಡೆದಿದ್ದಾರೆ. ಈ ಲಂಚದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಪಿಐ ರಾಘವೇಂದ್ರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೆಲದಿನಗಳ ಹಿಂದಷ್ಟೇ ಭಾಲ್ಕಿ ನಗರಕ್ಕೆ ಸಿಪಿಐಯಾಗಿ P.R.ರಾಘವೇಂದ್ರ ವರ್ಗಾವಣೆಯಾಗಿದ್ದರು. ಸಣ್ಣಪುಟ್ಟ ವಿಷಯಕ್ಕೆ ಸಾರ್ವಜನಿಕರಿಗೆ ಕಿರುಕುಳು ಕೊಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣ; ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ ಅಮಾನತು

ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ; ಲಂಚ ಪಡೆಯುವ ವಿಡಿಯೋ ವೈರಲ್

Follow us on

Related Stories

Most Read Stories

Click on your DTH Provider to Add TV9 Kannada