AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur Utsav: ವೇದಿಕೆ ಮೇಲೆ ಸಚಿವ ಸುಧಾಕರ್​ರನ್ನು ಕೊಂಡಾಡಿದ ನಟ ದುನಿಯಾ ವಿಜಯ್!

ಕಲಾವಿದರನ್ನು ಆರಾಧಿಸುವ ಶಕ್ತಿ ಸಚಿವ ಡಾ.ಕೆ. ಸುಧಾಕರ್ ಅವರಿಗಿದೆ. ಇಂತಹ ನಾಯಕರನ್ನು ಪಡೆದ ಚಿಕ್ಕಬಳ್ಳಾಪುರದ ಜನತೆ ಧನ್ಯರು ಎಂದು ನಟ ದುನಿಯಾ ವಿಜಯ್ ಹೊಗಳಿ ಕೊಂಡಾಡಿದ್ದಾರೆ.

Chikkaballapur Utsav: ವೇದಿಕೆ ಮೇಲೆ ಸಚಿವ ಸುಧಾಕರ್​ರನ್ನು ಕೊಂಡಾಡಿದ ನಟ ದುನಿಯಾ ವಿಜಯ್!
ಸಚಿವ ಮುನಿರತ್ನ, ಸಚಿವ ಡಾ.ಕೆ. ಸುಧಾಕರ್, ನಟ ದುನಿಯಾ ವಿಜಯ್
TV9 Web
| Edited By: |

Updated on: Jan 09, 2023 | 11:59 AM

Share

ಚಿಕ್ಕಬಳ್ಳಾಪುರ: ಮನರಂಜನೆಯನ್ನು ಹೊರತುಪಡಿಸಿ, ಕ್ಷೇತ್ರದ ಅಭಿವೃದ್ಧಿಯನ್ನು ಬಿಂಬಿಸುವ ಉತ್ಸವವೇ ಚಿಕ್ಕಬಳ್ಳಾಪುರ ಉತ್ಸವವಾಗಿದೆ(Chikkaballapur Utsav). ಕಲಾವಿದರನ್ನು ಆರಾಧಿಸುವ ಶಕ್ತಿ ಸಚಿವ ಡಾ.ಕೆ. ಸುಧಾಕರ್(Dr K Sudhakar) ಅವರಿಗಿದೆ. ಇಂತಹ ನಾಯಕರನ್ನು ಪಡೆದ ಚಿಕ್ಕಬಳ್ಳಾಪುರದ ಜನತೆ ಧನ್ಯರು ಎಂದು ಖ್ಯಾತ ನಟ ದುನಿಯಾ ವಿಜಯ್(Duniya Vijay) ಹೊಗಳಿ ಕೊಂಡಾಡಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಆಯೋಜಿಸಿದ್ದ ಚಿಕ್ಕಬಳ್ಳಾಪುರ ಉತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ರು. ಇದೇ ವೇದಿಕೆಯಲ್ಲಿ ಭಾಗವಹಿಸಿದ್ದ ಖ್ಯಾತ ಚಲನಚಿತ್ರ ನಿರ್ದೇಶಕ ಆರ್. ಚಂದ್ರು ಮಾತನಾಡಿ, ಇಂತಹ ಉತ್ಸವ ವಾರಗಳ ಕಾಲ ಮಾಡಲು ಮಹಾರಾಜರಿಂದ ಮಾತ್ರ ಸಾಧ್ಯ. ಆದರೆ ಚಿಕ್ಕಬಳ್ಳಾಪುರದ ಮಹಾರಾಜರಾಗಿರುವ ಡಾ.ಕೆ. ಸುಧಾಕರ್ ಅವರು ಒಂದು ವಾರದ ಉತ್ಸವ ಆಯೋಜಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಯನ್ನು ಪ್ರಚುರಪಡಿಸುವ ಕೆಲಸ ಮಾಡಿರುವುದು ಅಭಿನಂದನೀಯ. ಇಂತಹ ನಾಯಕರು ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಹಾರೈಸಿದರು.

ಇದನ್ನೂ ಓದಿ: ಡಾ. ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಯ 3ನೇ ಭಾರತ ರತ್ನ; ದೇಶಕ್ಕೆ ಮೋದಿ, ರಾಜ್ಯಕ್ಕೆ ಸುಧಾಕರ್ -ಸಚಿವ ಮುನಿರತ್ನ ಬಣ್ಣನೆ

ಚಿಕ್ಕಬಳ್ಳಾಪುರ ಉತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಕಿರುತೆರೆ ನಿರ್ದೇಶಕ ಸಿಹಿಕಹಿ ಚಂದ್ರು, ಒಗ್ಗರಣೆ ಖ್ಯಾತಿಯ ಮುರಳಿ, ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ನಾಗೇಶ್, ಜಿಪಂ ಸಿಇಒ ಶಿವಶಂಕರ್ ಸೇರಿದಂತೆ ಸ್ಥಳಿಯ ಮುಖಂಡರು ಭಾಗವಹಿಸಿದ್ದರು.

ವರದಿ: ಭೀಮಪ್ಪ ಪಾಟೀಲ, ಟಿವಿ9 ಚಿಕ್ಕಬಳ್ಳಾಪುರ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್