Nandi Hills: ಕೋವಿಡ್​ಗೆ ಬೈ ಬೈ, ಪ್ರವಾಸಿಗರ ಭೇಟಿಗೆ ನಂದಿ ಬೆಟ್ಟ ಇನ್ಮುಂದೆ ಸದಾ ಮುಕ್ತ ಮುಕ್ತ ಮುಕ್ತಾ! ಟಿಕೆಟ್ ಬುಕ್ಕಿಂಗ್ ಹೇಗೆ?

| Updated By: ಸಾಧು ಶ್ರೀನಾಥ್​

Updated on: Mar 24, 2022 | 9:54 PM

Nandi Hills: ವಾರಾಂತ್ಯದ ದಿನಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶಕ್ಕೆ ಇನ್ನು ಮುಂದೆ ಮುಕ್ತಗೊಳಿಸಲಾಗಿದ್ದು, ಆನ್ ಲೈನ್/ಆಫ್ ಲೈನ್ ಮೂಲಕ ಟಿಕೆಟ್ ಪಡೆದವರಿಗೆ ಮಾತ್ರ ನಂದಿಬೆಟ್ಟ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್/ಆಫ್ ಲೈನ್ ಟಿಕೆಟ್ ಸಿಗದವರಿಗೆ ನಂದಿಬೆಟ್ಟ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಆದ್ದರಿಂದ ಪ್ರವಾಸಿಗರು ಆನ್ ಲೈನ್ ಟಿಕೆಟ್ ಖಾತರಿಪಡಿಸಿಕೊಂಡು ಪ್ರವಾಸ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Nandi Hills: ಕೋವಿಡ್​ಗೆ ಬೈ ಬೈ, ಪ್ರವಾಸಿಗರ ಭೇಟಿಗೆ ನಂದಿ ಬೆಟ್ಟ ಇನ್ಮುಂದೆ ಸದಾ ಮುಕ್ತ  ಮುಕ್ತ  ಮುಕ್ತಾ! ಟಿಕೆಟ್ ಬುಕ್ಕಿಂಗ್ ಹೇಗೆ?
ಕೋವಿಡ್​ಗೆ ಬೈ ಬೈ, ನಂದಿಬೆಟ್ಟ ಪ್ರವಾಸಿಗರ ಭೇಟಿಗೆ ಇನ್ನು ಸದಾ ಮುಕ್ತ ಮುಕ್ತ ಮುಕ್ತಾ! ಟಿಕೆಟ್ ಬುಕ್ಕಿಂಗ್ ಹೇಗೆ?
Follow us on

ಚಿಕ್ಕಬಳ್ಳಾಪುರ: ವಾರಾಂತ್ಯದ ದಿನಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶಕ್ಕೆ (Nandi Hills) ಇನ್ನು ಮುಂದೆ ಮುಕ್ತಗೊಳಿಸಲಾಗಿದ್ದು, ಆನ್ ಲೈನ್/ಆಫ್ ಲೈನ್ ಮೂಲಕ ಪ್ರವೇಶ ಪತ್ರ (ಟಿಕೆಟ್) ಪಡೆದವರಿಗೆ ಮಾತ್ರ ನಂದಿಬೆಟ್ಟ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ಲತಾ ಅವರು ತಿಳಿಸಿದ್ದಾರೆ (Chikkaballapur DC R Latha). ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಂದಿ ಗಿರಿಧಾಮದ ಅಭಿವೃದ್ಧಿ ಕುರಿತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ವಿಶ್ವವಿಖ್ಯಾತ ಪ್ರವಾಸಿ ತಾಣವಾದ ನಂದಿಬೆಟ್ಟಕ್ಕೆ ಕೋವಿಡ್ ಸಾಂಕ್ರಾಮಿಕ ಸೋಂಕಿನಿಂದಾಗಿ (Coronovirus) ಈವರೆಗೆ ವಾರಾಂತ್ಯದ ದಿನಗಳಲ್ಲಿ ಕೊಠಡಿ ಕಾಯ್ದಿರಿಸಿದ ಪ್ರವಾಸಿಗರನ್ನು ಹೊರತುಪಡಿಸಿ ಉಳಿದ ಪ್ರವಾಸಿಗರಿಗೆ ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧಿಸಲಾಗಿತ್ತು. ಈ ನಿರ್ಬಂಧವನ್ನು ಬರುವ ವಾರಾಂತ್ಯದ ದಿನಗಳಿಗೆ ಸಡಿಲಿಕೆ ಮಾಡಿ, ಇದೇ ಮಾರ್ಚ್ 26 ರ ವಾರಾಂತ್ಯದ ದಿನದಿಂದಲೇ ಪ್ರವೇಶ ಪತ್ರ ಪಡೆದ ಪ್ರವಾಸಿಗರಿಗೆ ನಂದಿ ಗಿರಿಧಾಮ ಪ್ರವಾಸಕ್ಕೆ ಅನುಮತಿ ನೀಡಲಾಗಿದೆ ಎಂದರು.

ಟಿಕೆಟ್ ಬುಕ್ಕಿಂಗ್ ಹೇಗೆ?
ವಾರಾಂತ್ಯದ ದಿನಗಳಾದ ಶನಿವಾರ ಪ್ರವಾಸ ಮಾಡಲಿಚ್ಚಿಸುವ ಪ್ರವಾಸಿಗರು ಹಿಂದಿನ ದಿನವಾದ ಶುಕ್ರವಾರ ಸಂಜೆ 6:00 ಗಂಟೆಯೊಳಗೆ ಆನ್ ಲೈನ್ ನಲ್ಲಿ ಟಿಕೆಟ್ ಗಳನ್ನು ಪಡೆಯತಕ್ಕದ್ದು, ಭಾನುವಾರ ಪ್ರವಾಸ ಮಾಡಲಿಚ್ಚಿಸುವ ಪ್ರವಾಸಿಗರು ಹಿಂದಿನ ದಿನವಾದ ಶನಿವಾರ ಸಂಜೆ 6:00 ಗಂಟೆಯೊಳಗೆ ಆನ್ ಲೈನ್ ನಲ್ಲಿ ಟಿಕೆಟ್ ಗಳನ್ನು ಪಡೆಯತಕ್ಕದ್ದು, ಆನ್ ಲೈನ್ ನಲ್ಲಿ ಪ್ರವೇಶ ಪತ್ರ ದೊರಕದವರು ನಂದಿಬೆಟ್ಟದ ಕೆಳಗಿನ ಪ್ರವೇಶ ದ್ವಾರದ ಬಳಿ ಸಕ್ಷಮ ಪ್ರಾಧಿಕಾರ ತೆರದಿರುವ ಜಿಲ್ಲಾಡಳಿತದ ಕೌಂಟರ್ ನಲ್ಲಿ ಆಫ್ ಲೈನ್ ಟಿಕೆಟ್ ಪಡೆದು ಪ್ರವಾಸ ಕೈಗೊಳ್ಳಬಹುದು. ಶೇ.50% ಆನ್ ಲೈನ್ ಮತ್ತು ಶೇ.50% ಆಫ್ ಲೈನ್ ಟಿಕೆಟ್ ಗಾಗಿ ನಿಗದಿಗೊಳಿಸಲಾಗಿದ್ದು, ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಮಾಡುವವರು ನಂದಿಬೆಟ್ಟಕ್ಕೆ ಭೇಟಿ ನೀಡಲು KSTDC ವೆಬ್ ಸೈಟ್ ವಿಳಾಸ ಇಲ್ಲಿದೆ: 

ಆನ್ ಲೈನ್/ಆಫ್ ಲೈನ್ ಟಿಕೆಟ್ ಸಿಗದವರಿಗೆ ನಂದಿಬೆಟ್ಟ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಆದ್ದರಿಂದ ಪ್ರವಾಸಿಗರು ಆನ್ ಲೈನ್ ಟಿಕೆಟ್ ಖಾತರಿಪಡಿಸಿಕೊಂಡು ಪ್ರವಾಸ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
* ನಂದಿಗಿರಿಧಾಮದಲ್ಲಿ ವೀಕೆಂಡ್‌ನಲ್ಲಿ ವಿಧಿಸಿದ್ದ ನಿರ್ಬಂಧ ತೆರವು
* ಕಳೆದ 1 ವರ್ಷದಿಂದ ವೀಕೆಂಡ್‌ನಲ್ಲಿ ನಿರ್ಬಂಧ ವಿಧಿಸಲಾಗಿತ್ತು
* ಪ್ರವಾಸಿಗರು ವಾರದ 7 ದಿನವೂ ನಂದಿ ಹಿಲ್ಸ್‌ಗೆ ಬರಬಹುದು
* ವೀಕೆಂಡ್‌ನಲ್ಲಿ ನಂದಿ ಹಿಲ್ಸ್‌ ಪ್ರವೇಶಕ್ಕೆ ಪಾಸ್ ಕಡ್ಡಾಯ
* ಆನ್‌ಲೈನ್‌ನಲ್ಲಿ ಶೇ. 50, ಆಫ್‌ಲೈನ್‌ನಲ್ಲಿ ಶೇ. 50ರಷ್ಟು ಪಾಸ್

ನಿಲುಗಡೆಯನುಸಾರ ವಾಹನಗಳ ಪ್ರವೇಶಕ್ಕೆ ಅವಕಾಶ
ನಂದಿ ಗಿರಿಧಾಮದ ಮೇಲ್ಭಾಗದಲ್ಲಿ 1000 ದ್ವಿಚಕ್ರ ವಾಹನಗಳು ಹಾಗೂ ಕಾರು, ಮಿನಿ ಬಸ್ಸು ಸೇರಿದಂತೆ 300 ಲಘು (ಪೋರ್ ವೀಲರ್) ವಾಹನಗಳಿಗೆ ವಾಹನ ನಿಲುಗಡೆ ಮಾಡಲು ಸ್ಥಳಾವಕಾಶವಿದ್ದು, ಅಷ್ಟು ವಾಹನಗಳಿಗೆ ಮಾತ್ರ ಗಿರಿಧಾಮದ ಮೇಲ್ಭಾಗಕ್ಕೆ ಅನುಮತಿ ನೀಡಲಾಗುವುದು. ಮೇಲ್ಭಾಗಕ್ಕೆ ಚಲಿಸಿದ ವಾಹನಗಳು ನಿರ್ಗಮಿಸಿದಂತೆ ಇತರ ಪ್ರವಾಸಿಗರ ವಾಹನಗಳಿಗೆ ಟಿಕೆಟ್ ಗಳನ್ನು ವಿತರಿಸಿ, ನಂದಿ ಗಿರಿಧಾಮ ಪ್ರವಾಸಕ್ಕೆ ಅವಕಾಶ ಮಾಡಿಕೊಡಲಾಗಿರುತ್ತದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ದ್ವಿಚಕ್ರ ವಾಹನದಲ್ಲಿ ಬರುವ ಒಬ್ಬ ಸವಾರನಿಗೆ 50 ರೂ. ಇಬ್ಬರು ಸವಾರರ ವಾಹನಕ್ಕೆ 70 ರೂ, ನಾಲ್ಕು ಚಕ್ರದ ಎಲ್.ಎಂ.ವಿ ಲಘು ವಾಹನಗಳಿಗೆ 125 ರೂ.ಗಳು, ನಾಲ್ಕು ಚಕ್ರದ ಎಚ್.ಜಿ.ವಿ ವಾಹನಗಳಿಗೆ 150 ರೂ.ಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆ.ಎಸ್.ಟಿ.ಡಿ.ಸಿ) ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
-ಭೀಮಪ್ಪ ಪಾಟೀಲ್, ಟಿವಿ9, ಚಿಕ್ಕಬಳ್ಳಾಪುರ

Published On - 9:45 pm, Thu, 24 March 22