ಸುಧಾಕರ್ ಗೆಲುವು ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜು ಪುಡಿ ಪುಡಿ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪ್ರದೀಪ್ ಈಶ್ವರ್ ರವರ ಮನೆಯ ಮೇಲೆ ದುಷ್ಕರ್ಮಿಗಳು ನಿನ್ನೆ ರಾತ್ರಿ ಕಲ್ಲು ತೂರಾಟ ಮಾಡಿದ್ದು ಮನೆಯ ಕಿಟಕಿ ಗಾಜುಗಳನ್ನು ಹೊಡೆದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow us
| Updated By: ಆಯೇಷಾ ಬಾನು

Updated on:Jun 05, 2024 | 8:02 AM

ಚಿಕ್ಕಬಳ್ಳಾಪುರ, ಜೂನ್.05: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ (Lok Sabha Election) ಬಿಜೆಪಿ ಅಭ್ಯರ್ಥಿ ಡಾ ಕೆ.ಸುಧಾಕರ್‌ (Dr K Sudhakar) ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದು ಈ ಹಿಂದೆ ಪ್ರದೀಪ್ ಈಶ್ವರ್ ಚಾಲೆಂಜ್ ಮಾಡಿದ್ದರು. ಸದ್ಯ ನಿನ್ನೆ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ನಿನ್ನೆ ರಾತ್ರಿ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.

ಕಿಡಿಗೇಡಿಗಳು ನಿನ್ನೆ ರಾತ್ರಿ ಪ್ರದೀಪ್​ ಮನೆ ಮೇಲೆ ಕಲ್ಲು ತೂರಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಘಟನೆ ಸಂಬಂಧ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ಅವರ ತಮ್ಮ ಚೇತನ್, ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆದ್ದ ಕಾರಣ ಅವರ ಬೆಂಬಲಿಗರೆ ಕೃತ್ಯ ಎಸಗಿದ್ದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸುಧಾಕರ್ ಕೇವಲ ಒಂದು ವೋಟಿನಿಂದ ಗೆದ್ದರೂ ರಾಜಕೀಯ ಸನ್ಯಾಸ ತಗೊಳ್ಳುವೆ: ಪ್ರದೀಪ್ ಈಶ್ವರ್

ಶಾಸಕರಾದ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮನೆಯ ಸಿಬ್ಬಂದಿ ಮುನಿಕೃಷ್ಣ ಮಾಹಿತಿ ನೀಡಿದ್ದಾರೆ. ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ. ಕಲ್ಲಿನ ಶಬ್ದ ಕೇಳಿ ಆಚೆ ಬಂದೆವು ಭಯ ಆಯಿತು. ಅಭಿ, ತಾರಕ್ ನಾನು ರೂಮ್ ನಲ್ಲಿ ಇದ್ದೆವು. ಮನೆ ಮಾಡಿ ಒಂದು ವರ್ಷ ಆಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿರೋದು ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:02 am, Wed, 5 June 24

ತಾಜಾ ಸುದ್ದಿ
ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ, ವಿಡಿಯೋ
ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ, ವಿಡಿಯೋ
ಪ್ರಶ್ನೆಗಳಿಗೆ ಉತ್ತರಿಸುವ ಬದಲು ಸಿಎಂ ಹೇಡಿಯಂತೆ ಓಡಿಹೋಗಿದ್ದಾರೆ: ಅಶೋಕ
ಪ್ರಶ್ನೆಗಳಿಗೆ ಉತ್ತರಿಸುವ ಬದಲು ಸಿಎಂ ಹೇಡಿಯಂತೆ ಓಡಿಹೋಗಿದ್ದಾರೆ: ಅಶೋಕ
ಮುಡಾ ಹಗರಣ: ನ್ಯಾಯ ಕೇಳಲು ರಾಜ್ಯಪಾಲರಲ್ಲಿಗೆ ಹೋದ ವಿರೋಧ ಪಕ್ಷಗಳ ಶಾಸಕರು
ಮುಡಾ ಹಗರಣ: ನ್ಯಾಯ ಕೇಳಲು ರಾಜ್ಯಪಾಲರಲ್ಲಿಗೆ ಹೋದ ವಿರೋಧ ಪಕ್ಷಗಳ ಶಾಸಕರು
ಶಿರೂರು ಗುಡ್ಡ ಕುಸಿತ: ನದಿಯಲ್ಲಿ ತೇಲಿಬಂತು ಟ್ರಕ್​ನಲ್ಲಿದ್ದ ಮರದ ತುಂಡು
ಶಿರೂರು ಗುಡ್ಡ ಕುಸಿತ: ನದಿಯಲ್ಲಿ ತೇಲಿಬಂತು ಟ್ರಕ್​ನಲ್ಲಿದ್ದ ಮರದ ತುಂಡು
ಬಿಜೆಪಿ ನಾಯಕರಿಂದ ಹೂವು ನೀಡಿ ಮನವೊಲಿಸುವ ಪ್ರಯತ್ನಕ್ಕೂ ಮಣಿಯದ ಸ್ಪೀಕರ್
ಬಿಜೆಪಿ ನಾಯಕರಿಂದ ಹೂವು ನೀಡಿ ಮನವೊಲಿಸುವ ಪ್ರಯತ್ನಕ್ಕೂ ಮಣಿಯದ ಸ್ಪೀಕರ್
ಅರ್ಜುನ್ ಮತ್ತಿಬ್ಬರ ಶೋಧ ಜಾರಿ, ಡ್ರೋನ್ ಮತ್ತು ಕೋಸ್ಟ್ ಗಾರ್ಡ್ ಚಾಪರ್ ಬಳಕೆ
ಅರ್ಜುನ್ ಮತ್ತಿಬ್ಬರ ಶೋಧ ಜಾರಿ, ಡ್ರೋನ್ ಮತ್ತು ಕೋಸ್ಟ್ ಗಾರ್ಡ್ ಚಾಪರ್ ಬಳಕೆ
ಮೃತ ಮಾಲೀಕನಿಗಾಗಿ ಹುಡುಕಾಡುತ್ತಿರುವ ಸಾಕು ನಾಯಿ, ಮನಕಲಕುವ ದೃಶ್ಯ ಇಲ್ಲಿದೆ
ಮೃತ ಮಾಲೀಕನಿಗಾಗಿ ಹುಡುಕಾಡುತ್ತಿರುವ ಸಾಕು ನಾಯಿ, ಮನಕಲಕುವ ದೃಶ್ಯ ಇಲ್ಲಿದೆ
13 ವರ್ಷದ ಹಿಂದೆ ಜೈಲಿನಲ್ಲಿದ್ದಾಗ ದರ್ಶನ್ ಹೇಗಿದ್ದರು: ಜೈಲಧಿಕಾರಿ ನೆನಪು
13 ವರ್ಷದ ಹಿಂದೆ ಜೈಲಿನಲ್ಲಿದ್ದಾಗ ದರ್ಶನ್ ಹೇಗಿದ್ದರು: ಜೈಲಧಿಕಾರಿ ನೆನಪು
ವಾತಾವರಣ ಅನುಕೂಲಕರವಾಗಿದೆ, ಬಿಜೆಪಿ ಸದಸ್ಯರು ಪಾದಯಾತ್ರೆ ಮಾಡಲಿ: ಖರ್ಗೆ
ವಾತಾವರಣ ಅನುಕೂಲಕರವಾಗಿದೆ, ಬಿಜೆಪಿ ಸದಸ್ಯರು ಪಾದಯಾತ್ರೆ ಮಾಡಲಿ: ಖರ್ಗೆ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜನರ ಹುಚ್ಚಾಟ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜನರ ಹುಚ್ಚಾಟ