ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮರಿನಾಯಕನಹಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ದಂಪತಿ ಬಲಿ ಆಗಿದ್ದಾರೆ. ದಂಪತಿಯ 1 ವರ್ಷದ ಹೆಣ್ಣು ಮಗು ಅದೃಷ್ಟವಷಾತ್ ಪಾರಾಗಿದೆ. ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಸುರವನಹಳ್ಳಿ ನಿವಾಸಿ ದಂಪತಿ ಮೃತಪಟ್ಟಿದ್ದಾರೆ. 35 ವರ್ಷ ವಯಸ್ಸಿನ ರಾಜಪ್ಪ ಹಾಗೂ 28 ವರ್ಷ ವಯಸ್ಸಿನ ಮೌನಿಕಾ ಮೃತ ದುರ್ದೈವಿಗಳು. ಬೆಂಗಳೂರಿನಲ್ಲಿ ಜೆ.ಸಿ.ಬಿ ಆಪರೇಟರ್ ಆಗಿದ್ದ ರಾಜಪ್ಪ ದಂಪತಿಗಳು ಸಾವನ್ನಪ್ಪಿದ್ದಾರೆ. ಪುಟ್ಟ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಇಂದು ಸಂಜೆ ಜೀಪ್, ಕ್ಯಾಂಟರ್ ನಡುವೆ ಡಿಕ್ಕಿ ಆಗಿ 8 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿತ್ತು. ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ನಡೆಸಿದ್ದರು. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದರು. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದರು. ಅಪಘಾತ ಆದ ಜೀಪ್‌ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್‌ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್‌ನಲ್ಲಿ ಕೋಲಾರಕ್ಕೆ ರವಾನೆ ಮಾಡಲಾಗಿದೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪ್‌ನಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು ಎಂದು ತಿಳಿಸಿದ್ದರು. ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಘಟನಾಸ್ಥಳಕ್ಕೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಜೀಪ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ; 8 ಮಂದಿ ದುರ್ಮರಣ
ಇದನ್ನೂ ಓದಿ: ತುಮಕೂರು: ಕಾರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಅಪಘಾತ
Published On - 8:28 pm, Sun, 12 September 21