ನಿಂತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ: ಆಂಧ್ರ ಮೂಲದ ಇಬ್ಬರು ಮಹಿಳೆಯರು ಸಾವು

ಕಾರಿನ ಬಳಿ ನಿಂತಿದ್ದ ಮಹಿಳೆಯರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಆಂಧ್ರದ ಮೂಲದ ಇಬ್ಬರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್​ನಲ್ಲಿ ದುರ್ಘಟನೆ ನಡೆದಿದೆ.

ನಿಂತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ: ಆಂಧ್ರ ಮೂಲದ ಇಬ್ಬರು ಮಹಿಳೆಯರು ಸಾವು
ಅಪಘಾತಕ್ಕೀಡಾದ ಕಾರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 13, 2022 | 11:01 PM

ಚಿಕ್ಕಬಳ್ಳಾಪುರ: ಕಾರಿನ ಬಳಿ ನಿಂತಿದ್ದ ಮಹಿಳೆಯರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಆಂಧ್ರದ ಮೂಲದ ಇಬ್ಬರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್​ನಲ್ಲಿ ದುರ್ಘಟನೆ ನಡೆದಿದೆ. ಕಾರ್ಮಿಕರಾದ ಶಬರೀಶಮ್ಮ(30), ನಾಗಮ್ಮ(70) ಮೃತರು. ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಮಹಿಳೆಯರು ಬರುತ್ತಿದ್ದರು. ಮಳೆ ಬರುತ್ತಿದ್ದರಿಂದ ರಸ್ತೆ ಬದಿ ಕಾರು ನಿಲ್ಲಿಸಿ ಕೆಳಗೆ ಇಳಿದಿದ್ದರು. ಕಾರಿನ ಮೇಲಿದ್ದ ವಸ್ತುಗಳಿಗೆ ಟಾರ್ಪಲ್​ ಮುಚ್ಚಲು ಇಳಿದಿದ್ದರು. ಈ ವೇಳೆ ಮತ್ತೊಂದು ಕಾರು ಹರಿದು ಇಬ್ಬರು ಮಹಿಳೆಯರು ದುರ್ಮರಣ ಹೊಂದಿದ್ದಾರೆ. ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿ ನಿಂತಿದ್ದ ಬೈಕ್​ಗೆ ಕಾರು ಡಿಕ್ಕಿ: ಓರ್ವ ಸಾವು

ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಂತಿದ್ದ ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಂದಾರ್ಲಹಳ್ಳಿ ಗೇಟ್ ಬಳಿ ನಡೆದಿದೆ. ಡಿಪಾಳ್ಯಾ ಮೂಲದ ನಿವಾಸಿ ಸುರೇಶ (29) ಮೃತ ವ್ಯಕ್ತಿ. ಚಿಂತಾಮಣಿ ಮೂಲದ ಮದನ್ ಸ್ಥಿತಿ ಗಂಭೀರವಾಗಿದೆ. ಇಬ್ಬರು ಯುವಕರು ಚಿಕ್ಕಬಳ್ಳಾಪುರದ ರಾಮು ಫರ್ನಿಚರ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಕಾರಿನಲ್ಲಿದ್ದ ಮೂವರು ಬಚಾವ್ ಆಗಿದ್ದಾರೆ. ಕಾರಿನಲ್ಲಿದ್ದವರನ್ನು ಸ್ಥಳಿಯರು ತರಾಟೆಗೆ ತೆಗೆದುಕೊಂಡರು.

ಸರ್ಕಾರಿ ಬಸ್​ ಬ್ರೇಕ್ ಫೇಲ್: ಸರಣಿ ಅಪಘಾತ

ಕಾರವಾರ: ಎರಡು ಬಸ್, ಒಂದು ಕಾರು, ಒಂದು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕೋರ್ಟ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಪ್ರಯಾಣಿಕರು ಬಚಾವ್ ಆಗಿದ್ದಾರೆ. ಕುಮಟಾ ಭಾಗದ ಕಡೆಯಿಂದ ಹೊನ್ನಾವರ ಬಸ್ ನಿಲ್ದಾಣಕ್ಕೆ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ ಬಸ್​ನ ಬ್ರೇಕ್ ಫೇಲ್ ಆದ ಕಾರಣ ಅಪಘಾತ ನಡೆದಿದೆ. ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ರಸ್ತೆ ದಾಟುತ್ತಿದ್ದ ಬೈಕ್​ಗೆ ಕಾರ್ ಡಿಕ್ಕಿ: ಬಾಲಕ ಸಾವು

ವಿಜಯಪುರ: ರಸ್ತೆ ದಾಟುತ್ತಿದ್ದ ಬೈಕ್​ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಹಿಂಬದಿ ಕುಳಿತಿದ್ದ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಬಳಿ ನಡೆದಿದೆ. ರಿಯಾಜ್ (12) ಮೃತ ಬಾಲಕ. ಸ್ಥಳಕ್ಕೆ ಮನಗೂಳಿ ಠಾಣೆಯ ಪೊಲೀಸರ ಭೇಟಿ ಮಾಡಿ ಪರಿಶೀಲನೆ ಮಾಡಿದರು. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತಿ-ಪತ್ನಿ ಶವ ಪತ್ತೆ

ಧಾರವಾಡ: ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಜಮೀನೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತಿ-ಪತ್ನಿ ಶವ ಪತ್ತೆಯಾಗಿದೆ. ಪತ್ನಿ ಶ್ರೀದೇವಿ ಕೊಂದು ಪತಿ ರಾಜು ರಾಮಾಪುರ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಪತ್ನಿಯ ಶೀಲ ಶಂಕಿಸಿ ಪತಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪತ್ನಿ ಪಕ್ಕದಲ್ಲೇ ಪತಿ ರಾಜು ರಾಮಾಪುರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 pm, Thu, 13 October 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್