ರದ್ದಾದ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ದೂರವಾಣಿ ಸಂಖ್ಯೆ: 08156-277 007 ಗೆ ಸಂಪರ್ಕಿಸಬಹುದು

ರದ್ದಾದ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ರದ್ದಾದ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
TV9kannada Web Team

| Edited By: sadhu srinath

Sep 28, 2022 | 7:56 PM

ಚಿಕ್ಕಬಳ್ಳಾಪುರ ಜಿಲ್ಲೆಯ (Chikkaballapur) ಗೌರಿಬಿದನೂರು (Gauribidanur) ತಾಲ್ಲೂಕಿನಲ್ಲಿ ಕೆಲವು ನ್ಯಾಯಬೆಲೆ ಅಂಗಡಿ ಪ್ರಾಧಿಕರಣದಾರರು ಪಡಿತರ ಎತ್ತುಗಳಿಯಲ್ಲಿ ವಿಫಲ/ಪಡಿತರ ದುರುಪಯೋಗ/ಸಂಘಗಳ ಋಣ ಸಮಾಪನೆ/ಪ್ರಾಧಿಕರಣದಾರರ ನಿಧನ/ಪ್ರಾಧಿಕರಣದಾರರ ರಾಜಿನಾಮೆಗಳಂತಹ ವಿವಿಧ ಕಾರಣಗಳಿಂದ ಅಥವಾ ನವೀಕರಣಗೊಳ್ಳದೇ ಕೆಲವು ನ್ಯಾಯಬೆಲೆ ಅಂಗಡಿಗಳ ಪ್ರಾಧಿಕರಣಗಳು ರದ್ದಾಗಿರುವ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ನ್ಯಾಯಬೆಲೆ ಅಂಗಡಿ (Fair Price Shop) ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಂಜೂರಾದ ನ್ಯಾಯಬೆಲೆ ಅಂಗಡಿ ಕೇಂದ್ರಗಳು:

ಗೌರಿಬಿದನೂರು ತಾಲ್ಲೂಕಿನ ಕೋನಾಪುರ, ಜಿ.ಕೊತ್ತೂರು, ಚೋಳಶೆಟ್ಟಹಳ್ಳಿ, ಗುಟ್ಟೇನಹಳ್ಳಿ, ನ್ಯಾಮಗೊಂಡ್ಲು, ಗುಂಡ್ಲಹಳ್ಳಿ ಗ್ರಾಮಗಳಲ್ಲಿ ನ್ಯಾಯಬೆಲೆ ಕೇಂದ್ರಗಳನ್ನು ತೆರೆಯಲು ಅರ್ಹ ಸಂಸ್ಥೆಗಳು, ಸಂಘಗಳು, ವ್ಯಕ್ತಿಗಳು, ವಿಕಲಚೇತನರು ಹಾಗೂ ತೃತೀಯ ಲಿಂಗಿಗಳು ತಾಲ್ಲೂಕು ಕಚೇರಿಯ ಆಹಾರ ಶಾಖೆಯಲ್ಲಿ ಅರ್ಜಿಗಳನ್ನು ಪಡೆದು ಅಕ್ಟೋಬರ್ 27 ರ ಸಂಜೆ 5:30 ಗಂಟೆಯೊಳಗೆ ನಿಗದಿತ ಅರ್ಜಿ ನಮೂನೆ ‘ಎ’ ರಲ್ಲಿ ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಸಲ್ಲಿಸತಕ್ಕದ್ದು,

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ದೂರವಾಣಿ ಸಂಖ್ಯೆ: 08156-277 007 ಗೆ ಸಂಪರ್ಕಿಸಬಹುದು ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಲಾ ಕಟ್ಟಡದ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ್ದ ಅಗ್ನಿಶಾಮಕ ದಳ ಅಧಿಕಾರಿ ಲೋಕಾಯುಕ್ತ ಬಲೆಗೆ

ಗದಗ: ಅಗ್ನಿಶಾಮಕ ದಳದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ. ಶಾಲೆಯ ಕಟ್ಟಡದ ಫಿಟ್ನೆಸ್ ಕುರಿತು ಸುರಕ್ಷತಾ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ್ದ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಗದಗ ನಗರದ ಎಪಿಎಂಸಿ ಆವರಣದಲ್ಲಿ ಇರುವ ಅಗ್ನಿಶಾಮಕ ದಳ ಕಛೇರಿಯಲ್ಲಿ ನಡೆದಿದೆ.

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಎಸ್ ಎಸ್ ಕೂಡ್ಲಮಠ ಶಾಲೆಯ ಕಟ್ಟಡದ ಗುಣಮಟ್ಟದ ಸುರಕ್ಷತಾ ಪ್ರಮಾಣ ಪತ್ರ ಕೊಡಲು 7,000 ರೂಪಾಯಿ ಲಂಚ ಕೇಳಿದ ಆರೋಪದಲ್ಲಿ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಎಂಬುವವರು ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯ ಸಿ. ಬಿ. ಮೊಗಲಿ ಎಂಬುವವರು ಲೋಕಾಯುಕ್ತರ ಕಚೇರಿಗೆ ದೂರು ನೀಡಿದ್ದರು. ಅಗ್ನಿಶಾಮಕ ದಳದ ಜಿಲ್ಲಾ ಮಟ್ಟದ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ, ಡಿವೈಎಸ್ಪಿ ಶಂಕರ ಎಮ್ ರಾಗಿ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರಗಳಾದ ರವಿ ಪುರುಷೋತ್ತಮ್ ಹಾಗೂ ಆಜೀಜ್ ಕಲಾದಗಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಿಬ್ಬಂದಿಗಳಾದ ವಿರೂಪಾಕ್ಷ ಅರಿಷಿಣದ, ಎಸ್ ಎಸ್ ಅಮರಶೆಟ್ಟಿ, ಮಂಜುನಾಥ್ ಗಾರ್ಗಿ, ಲಕ್ಕನಗೌಡರ್, ಗುಬ್ಬಿ ಚಾಲಕರಾದ ನೈನಾಪೂರ ಹಾಗೂ ಹೆಬ್ಬಳ್ಳಿ ಈ ಕಾರ್ಯಾಚರಣೆಯಲ್ಲಿ ಇದ್ದರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada