Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ ಸಂಕಲ್ಪ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಪದಾಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಬಿ.ಎಲ್. ಸಂತೋಷ್

ವಿಜಯ ಸಂಕಲ್ಪಯಾತ್ರೆ ಪೂರ್ವಭಾವಿ ಸಭೆ ಮಾಡಿದ್ದು, ಈ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ  ಕಾರ್ಯದರ್ಶಿ ಬಿ.ಎಲ್.ಸಂತೋಷ್​ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕ್ಲಾಸ್ ತೆಗೆದುಕೊಂಡರು.

ವಿಜಯ ಸಂಕಲ್ಪ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಪದಾಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಬಿ.ಎಲ್. ಸಂತೋಷ್
ಬಿ.ಎಲ್.ಸಂತೋಷ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 19, 2023 | 10:00 PM

ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನಸಭಾ ಚುನಾವಣೆ (election) ಸಮೀಪಿಸುತ್ತಿದ್ದಂತೆ ರಾಜೀಕಿಯ ಚಟುವಟಿಕೆಗಳು ಗರಿಗೆದರಿದೆ. ಪ್ರತಿಯೊಂದು ಪಕ್ಷಗಳು ಸಾಲು ಸಾಲು ಸಮಾವೇಶಗಳು ಹಾಗೂ ಸಭೆಗಳನ್ನು ನಡೆಸುತ್ತಿವೆ. ಈ ಮೂಲಕ ಮತದಾರರನ್ನು ತಮ್ಮತ್ತ ಸೆಳೆಯಲು ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​​ ಕಸರತ್ತು ನಡೆಸಿವೆ. ಹಾಗಾಗಿ ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶದಿಂದ ವಿಜಯ ಸಂಕಲ್ಪ ಅಭಿಯಾನ ಶುರುಮಾಡಲಿದೆ. ಈ ಹಿನ್ನಲೆ ಇಂದು(ಜ.19) ಚಿಕ್ಕಬಳ್ಳಾಪುರದಲ್ಲಿ ವಿಜಯ ಸಂಕಲ್ಪಯಾತ್ರೆ ಪೂರ್ವಭಾವಿ ಸಭೆ ಮಾಡಲಾಯಿತು. ಈ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ  ಕಾರ್ಯದರ್ಶಿ ಬಿ.ಎಲ್.ಸಂತೋಷ್ (BL Santhosh) ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ತಾಲೂಕು ಪಟ್ಟದ ಪದಾದಿಕಾರಿಗಳನ್ನು ವೇದಿಕೆ ಮೇಲೆ ಕರೆದ ಬಿ.ಎಲ್.ಸಂತೋಷ್, ಬೂತ್ ಮಟ್ಟದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ರಾತ್ರಿ ಮಾಡಿದ್ದೇನೆ, ಈಗ ಮಾಡಿದ್ದೇನೆ ಬೇಡ. ಏನು ಕ್ರಮ ಕೈಗೊಂಡಿದ್ದೀರಿ ಹೇಳಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಇನ್ನು ಈ ವೇಳೆ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್, ಎಂ.ಎಲ್.ಸಿ ವೈ.ಎ. ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

ಇದನ್ನೂ ಓದಿ: ಸಿನಿಮಾಗಳಲ್ಲಿ ಅನವಶ್ಯಕವಾಗಿ ಕೇಸರಿ ಬಟ್ಟೆ ಬಳಕೆ ಯಾಕೆ? ಇದು ನೆಹರೂ ಲೆಗಸಿ ಸೃಷ್ಟಿ ಮಾಡಿದ ನರೇಟಿವ್ ಎಂದ ಬಿ ಎಲ್​ ಸಂತೋಷ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಮೊದಲು ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಿಸುವಂತೆ ಮನವಿ 

ಸಭೆ ಬಳಿಕ ಮಾತನಾಡಿದ ಡಾ.ಕೆ.ಸುಧಾಕರ್​, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಮೊದಲು ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಿಸುವಂತೆ ಬಿ.ಎಲ್.ಸಂತೋಷ್‌ಗೆ ಸಚಿವ ಡಾ.ಸುಧಾಕರ್‌ ಮನವಿ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್​ನಿಂದ ‘ನಾ ನಾಯಕಿ’ ಸಮಾವೇಶ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಉತ್ತರಪ್ರದೇಶದಲ್ಲಿ ಅಷ್ಟೋ ಇಷ್ಟು ಅಂತಾ ಕಾಂಗ್ರೆಸ್ ಇತ್ತು. ಪ್ರಿಯಾಂಕಾ ಗಾಂಧಿ ಹೋದ ಮೇಲೆ ಅದು ಕೂಡ​ ಹೋಯಿತು. ಯುಪಿಯಲ್ಲಿ ಇರುವ ಸ್ಥಾನ ಕೂಡ ಕಾಂಗ್ರೆಸ್​ ಕಳೆದುಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್​​ ನಾಯಕರು ಬಹಳ ಹುಮ್ಮಸ್ಸಿನಲ್ಲಿದ್ದರು. ಪ್ರಿಯಾಂಕಾ ಬಂದ ಮೇಲೆ ಕಾಂಗ್ರೆಸ್ಸಿಗರಿಗೆ ಆತಂಕ ಹೆಚ್ಚಾಗಿದೆ ಎಂದರು.

ಇದನ್ನೂ ಓದಿ: BL Santosh: ತವರು ಭಾಗದಲ್ಲಿಯೇ ಮಲ್ಲಿಕಾರ್ಜುನ ಖರ್ಗೆಗೆ ಟಕ್ಕರ್ ಕೊಡಲು ಬಿಜೆಪಿ ತಂತ್ರ -ಕಲಬುರಗಿಗೆ ಇಂದು ಬಿ.ಎಲ್. ಸಂತೋಷ್ ಎಂಟ್ರಿ

ಡಿ.ಕೆ. ಶಿವಕುಮಾರ್​ ಹೇಳಿಕೆಗೆ ಸಚಿವ ಡಾ.ಕೆ.ಸುಧಾಕರ್ ಟಾಂಗ್

ಬೊಮ್ಮಾಯಿ ಸರಿಯಾಗಿ ಆಡಳಿತ ನಡೆಸ್ತಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​​ನವರು ಸರಿಯಾಗಿ ಓಡಿಸದ ಕಾರಣ ಮುಗ್ಗರಿಸಿ ಬಿದ್ದಿದ್ದಾರೆ. ಈಗ ಸಿಕ್ಕಿರುವ ಕುದುರೆಯನ್ನು ಬೊಮ್ಮಾಯಿ ಸರಿಯಾಗಿ ನಡೆಸ್ತಿದ್ದಾರೆ. ಕಾಂಗ್ರೆಸ್​ಗೆ 2023ರ ವಿಧಾನಸಭೆ ಚುನಾವಣೆ ನಂತರ ಗೊತ್ತಾಗಲಿದೆ ಎಂದು ಟಾಂಗ್ ನೀಡಿದರು. ಅನೇಕ ವರ್ಷಗಳಿಂದ ಇದ್ದ ಸಮಸ್ಯೆಗಳನ್ನು ಇತ್ಯರ್ಥಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದಕ್ಷರಿದ್ದಾರೆ. ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ದೀನ ದಲಿತರು, ಬಡವರ ಬಗ್ಗೆ ಆಳವಾಗಿ ತಿಳಿದುಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ಸಮರ್ಪಕವಾಗಿ ರಾಜ್ಯದ ಅಭಿವೃದ್ಧಿ ಮಾಡ್ತಿದ್ದಾರೆ ಎಂದು ಹೇಳಿದರು.

ಇನ್ನು ರಾಜ್ಯ ಬಿಜೆಪಿ ಸರ್ಕಾರ ಲಂಚ ಮಂಚದ ಸರ್ಕಾರ ಅನ್ನೋ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರು ಅಧಿಕಾರದಲ್ಲಿ ಇದ್ದಾಗ ಯಾಕೆ ಲೋಕಾಯುಕ್ತ ಮುಚ್ಚಿದರು. ಲೋಕಾಯುಕ್ತ ಬಂದ್ ಮಾಡಿ ಯಾಕೆ ಎ.ಸಿ.ಬಿ ಮಾಡಿದ್ದು ಎಂದು ಮೊದಲು ಇದಕ್ಕೆ ಉತ್ತರ ನೀಡಲಿ. ಆ ಮೇಲೆ ಲಂಚ ಮಂಚದ ಬಗ್ಗೆ ಮಾತನಾಡಲಿ ಎಂದು ಟಾಂಗ್ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:57 pm, Thu, 19 January 23

ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್