AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಇಬ್ಬರ ಸಾವು, 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(Bagepalli) ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ(Bus Palti) ಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರಲ್ಲಿ ಓರ್ವ ರೇಚನಾಯ್ಕನಹಳ್ಳಿ ವೆಂಕಟರಾಪ್ಪ(60) ಎಂದು ತಿಳಿದು ಬಂದಿದ್ದು, ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ.

ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಇಬ್ಬರ ಸಾವು, 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
ಬಾಗೇಪಲ್ಲಿ ಬಸ್​ ಪಲ್ಟಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Dec 07, 2023 | 3:09 PM

Share

ಚಿಕ್ಕಬಳ್ಳಾಪುರ, ಡಿ.07: ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿ(Bus Palti) ಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(Bagepalli) ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ನಡೆದಿದೆ. ಮೃತರಲ್ಲಿ ಓರ್ವ ರೇಚನಾಯ್ಕನಹಳ್ಳಿ ವೆಂಕಟರಾಪ್ಪ(60) ಎಂದು ತಿಳಿದು ಬಂದಿದ್ದು, ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ. ಇನ್ನುಳಿದಂತೆ ಬಸ್​​ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, 7 ಜನರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಕೂಡಲೇ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನು ಈ ಕುರಿತು ಬಸ್​ನಲ್ಲಿದ್ದ ಪ್ರಯಾಣಿಕ ರಾಜು ಎಂಬುವವರು ಮಾತನಾಡಿ ‘ಅತಿ ವೇವಾಗಿ ಬಸ್ ಚಲಿಸಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಬಸಕ್ಕೆ ಮರವೇ ಉರುಳಿ ಬಿದ್ದಿದ್ದು, ಬಸ್​ನಲ್ಲಿನ ಎಡಭಾಗದಲ್ಲಿ ಕುಳಿತಿದ್ಧ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ನನಗೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಕೇರಳದಲ್ಲಿ ಬಸ್​ ಅಪಘಾತ, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ ಗಂಭೀರ ಗಾಯ

ಆರ್ ಟಿ ಓ ಹಾಗೂ ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ

ಇನ್ನು ಖಾಸಗಿ ಬಸ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಟಿಓ ಹಾಗೂ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಸಾರಿಗೆ ಸಂಚಾರ ನಿಯಮ ಉಲ್ಲಂಘಿಸಿ ಬಸ್​ಗಳನ್ನು ಚಲಾಯಿಸುತ್ತಿದ್ದಾರೆ. ಆರ್​ಟಿಓ ಹಾಗೂ ಪೊಲೀಸರು ಕಣ್ಣಿದ್ದು ಕುರುಡರಾಗಿದ್ದಾರೆ. ಖಾಸಗಿ ಬಸ್​ಗಳ ಆಟಾಟೋಪಕ್ಕೆ ಕಡಿವಾಣ ಹಾಕುವವರೇ ಇಲ್ಲದಂತಾಗಿದೆ. ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟಿದ್ದಾರೆ, 30 ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತಕ್ಕೆ ಹೊಣೆ ಯಾರು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಅಪಘಾತವಾಗಿ ಗಂಟೆಗಳೆ ಕಳೆದ್ರೂ ಸ್ಥಳಕ್ಕೆ ಬರದ ಆಂಬುಲೆನ್ಸ್

ಇನ್ನು ಖಾಸಗಿ ಬಸ್ ಉರುಳಿಬಿದ್ದು 25ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡು ನಡು ರಸ್ತೆಯಲ್ಲಿ ರಕ್ಷಣೆಗೆ ಮೊರೆ ಇಡುತ್ತಿದ್ದರು. ಆದರೆ, ಗಂಟೆಗಳೇ ಕಳೆದ್ರೂ ಆಂಬುಲೆನ್ಸ್ ಆಗಲಿ ಅಥವಾ ಸರ್ಕಾರಿ ಆಸ್ತತ್ರೆಗಳ ಅಂಬುಲೇನ್ಸ್​ಗಳು ಸ್ಥಳಕ್ಕೆ ಬರಲಿಲ್ಲವೆಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Thu, 7 December 23

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್