ಚಿಕ್ಕಬಳ್ಳಾಪುರ, ಡಿ.07: ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿ(Bus Palti) ಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(Bagepalli) ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ನಡೆದಿದೆ. ಮೃತರಲ್ಲಿ ಓರ್ವ ರೇಚನಾಯ್ಕನಹಳ್ಳಿ ವೆಂಕಟರಾಪ್ಪ(60) ಎಂದು ತಿಳಿದು ಬಂದಿದ್ದು, ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ. ಇನ್ನುಳಿದಂತೆ ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, 7 ಜನರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಕೂಡಲೇ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇನ್ನು ಈ ಕುರಿತು ಬಸ್ನಲ್ಲಿದ್ದ ಪ್ರಯಾಣಿಕ ರಾಜು ಎಂಬುವವರು ಮಾತನಾಡಿ ‘ಅತಿ ವೇವಾಗಿ ಬಸ್ ಚಲಿಸಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಬಸಕ್ಕೆ ಮರವೇ ಉರುಳಿ ಬಿದ್ದಿದ್ದು, ಬಸ್ನಲ್ಲಿನ ಎಡಭಾಗದಲ್ಲಿ ಕುಳಿತಿದ್ಧ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ನನಗೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಕೇರಳದಲ್ಲಿ ಬಸ್ ಅಪಘಾತ, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ ಗಂಭೀರ ಗಾಯ
ಇನ್ನು ಖಾಸಗಿ ಬಸ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಟಿಓ ಹಾಗೂ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಸಾರಿಗೆ ಸಂಚಾರ ನಿಯಮ ಉಲ್ಲಂಘಿಸಿ ಬಸ್ಗಳನ್ನು ಚಲಾಯಿಸುತ್ತಿದ್ದಾರೆ. ಆರ್ಟಿಓ ಹಾಗೂ ಪೊಲೀಸರು ಕಣ್ಣಿದ್ದು ಕುರುಡರಾಗಿದ್ದಾರೆ. ಖಾಸಗಿ ಬಸ್ಗಳ ಆಟಾಟೋಪಕ್ಕೆ ಕಡಿವಾಣ ಹಾಕುವವರೇ ಇಲ್ಲದಂತಾಗಿದೆ. ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟಿದ್ದಾರೆ, 30 ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತಕ್ಕೆ ಹೊಣೆ ಯಾರು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.
ಇನ್ನು ಖಾಸಗಿ ಬಸ್ ಉರುಳಿಬಿದ್ದು 25ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡು ನಡು ರಸ್ತೆಯಲ್ಲಿ ರಕ್ಷಣೆಗೆ ಮೊರೆ ಇಡುತ್ತಿದ್ದರು. ಆದರೆ, ಗಂಟೆಗಳೇ ಕಳೆದ್ರೂ ಆಂಬುಲೆನ್ಸ್ ಆಗಲಿ ಅಥವಾ ಸರ್ಕಾರಿ ಆಸ್ತತ್ರೆಗಳ ಅಂಬುಲೇನ್ಸ್ಗಳು ಸ್ಥಳಕ್ಕೆ ಬರಲಿಲ್ಲವೆಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:23 pm, Thu, 7 December 23