ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಿಯಕರ ಸೇರಿ ಮೂವರನ್ನು ಬಂಧಿಸಿದ ಬಾಗೇಪಲ್ಲಿ ಪೊಲೀಸರು

ಏಪ್ರಿಲ್ 11ರಂದು SSLC ವಿಜ್ಞಾನ ಪರೀಕ್ಷೆ ಮುಗಿಸಿಕೊಂಡು ಪ್ರೀಯಕರನ ಜೊತೆ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಅಪ್ರಾಪ್ತೆಯ ಪ್ರಿಯಕರ ಗ್ರಾಮ ಹೊರಹೊಲಯದ ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದ. ನಂತರ ಪ್ರೇಮಿಗಳು ಬೆಟ್ಟದಲ್ಲಿದ್ದಾಗ ಸ್ಥಳಕ್ಕೆ ಬಂದ ಆತನ ಮೂವರು ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಿಯಕರ ಸೇರಿ ಮೂವರನ್ನು ಬಂಧಿಸಿದ ಬಾಗೇಪಲ್ಲಿ ಪೊಲೀಸರು
ಬಾಗೇಪಲ್ಲಿ ಪೊಲೀಸ್ ಠಾಣೆ
Edited By:

Updated on: Apr 12, 2022 | 12:42 PM

ಚಿಕ್ಕಬಳ್ಳಾಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರಿಯಕರ ಸೇರಿ ಮೂವರನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಸಿ ಬರುತ್ತಿದ್ದ ಬಾಲಕಿ ಮೇಲೆ ಪ್ರಿಯಕರನ ಸಮ್ಮುಖದಲ್ಲೇ ಆತನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಯತ್ನಿಸಲಾಗಿದೆ.

ಏಪ್ರಿಲ್ 11ರಂದು SSLC ವಿಜ್ಞಾನ ಪರೀಕ್ಷೆ ಮುಗಿಸಿಕೊಂಡು ಪ್ರೀಯಕರನ ಜೊತೆ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಅಪ್ರಾಪ್ತೆಯ ಪ್ರಿಯಕರ ಗ್ರಾಮ ಹೊರಹೊಲಯದ ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದ. ನಂತರ ಪ್ರೇಮಿಗಳು ಬೆಟ್ಟದಲ್ಲಿದ್ದಾಗ ಸ್ಥಳಕ್ಕೆ ಬಂದ ಆತನ ಮೂವರು ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪ್ರಿಯಕರ ಓಡಿಬಂದು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಗ್ರಾಮಸ್ಥರು ಸ್ಥಳಕ್ಕೆ ಬರುವಷ್ಟರಲ್ಲೇ ಆರೋಪಿಗಳು ಪರಾರಿಯಾಗಿದ್ದಾರೆ. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ರಕ್ಷಣೆ ನೀಡಲಾಗಿದೆ.

ಹೆಚ್ಚು ಅಂಕ ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿ ಜತೆ ಶಿಕ್ಷಕನ ಅಸಭ್ಯ ವರ್ತನೆ
SSLC ಪರೀಕ್ಷೆಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡುತ್ತೇನೆಂದು ಶಿಕ್ಷಕ ಪರಮೇಶ್ ಐರಣಿ(45) SSLC ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ ಆರೋಪ ಹಾವೇರಿ ಜಿಲ್ಲೆ ಹಿರೇಕೆರೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿ ಬಂದಿದೆ. ಏಪ್ರಿಲ್​​ 8ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪರೀಕ್ಷಾ ಕೇಂದ್ರದ ಸೂಪರ್ ವೈಸರ್ ಆಗಿದ್ದ ಪರಮೇಶ್​​, ಪರೀಕ್ಷೆ ಆರಂಭ ಆದಾಗಿನಿಂದ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸ್ತಿದ್ದನಂತೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಶಿಕ್ಷಕ ಪರಮೇಶ್​​ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನ ಮೂಲದ ಸಲಿಂಗಿ ಬ್ರಿಟನ್ ಸಂಸತ್ ಸದಸ್ಯ ಇಮ್ರಾನ್ ಬಾಲಕನೊಬ್ಬನ ಮೇಲೆ ನಡೆಸಿದ ಲೈಂಗಿಕ ಹಲ್ಲೆ ಸಾಬೀತಾಗಿದೆ

ಜೂನ್ ತಿಂಗಳಲ್ಲಿ ಕೊರೊನಾ 4ನೇ ಅಲೆ ಸಾಧ್ಯತೆ; ಮತ್ತೆ ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟಿಂಗ್ ನಡೆಸಲು ನಿರ್ಧರಿಸಿದ ಆರೋಗ್ಯ ಇಲಾಖೆ

Published On - 12:33 pm, Tue, 12 April 22