AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ: ಟಿಕೆಟ್ ಘೋಷಣೆಗೂ ಮುನ್ನ ಕ್ಷೇತ್ರದ ಜನರಿಗೆ ಕೆ ಸುಧಾಕರ್ ಮನವಿ

ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಹೈಕಮಾಂಡ್ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಕೆ ಸುಧಾಕರ್, ಚುನಾವಣೆಯಲ್ಲಿ ತನ್ನನ್ನು ಗೆಲ್ಲಿಸಿ ವೇದನೆ ಕಡಿಮೆ ಮಾಡುವಂತೆ ಟಿಕೆಟ್ ಘೋಷಣೆಗೂ ಮುನ್ನ ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ಮಾರ್ಚ್ 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ: ಟಿಕೆಟ್ ಘೋಷಣೆಗೂ ಮುನ್ನ ಕ್ಷೇತ್ರದ ಜನರಿಗೆ ಕೆ ಸುಧಾಕರ್ ಮನವಿ
ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ: ಟಿಕೆಟ್ ಘೋಷಣೆಗೂ ಮುನ್ನ ಕೆ ಸುಧಾಕರ್ ಘೋಷಣೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: Rakesh Nayak Manchi|

Updated on:Mar 11, 2024 | 7:59 PM

Share

ಚಿಕ್ಕಬಳ್ಳಾಪುರ, ಮಾ.11: ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಹೈಕಮಾಂಡ್ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಚಿಕ್ಕಬಳ್ಳಾಪುರ (Chikkaballapur) ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಕೆ ಸುಧಾಕರ್ (K Sudhakar), ಚುನಾವಣೆಯಲ್ಲಿ ತನ್ನನ್ನು ಗೆಲ್ಲಿಸಿ ವೇದನೆ ಕಡಿಮೆ ಮಾಡುವಂತೆ ಟಿಕೆಟ್ ಘೋಷಣೆಗೂ ಮುನ್ನ ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ಮಾರ್ಚ್​ 15 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಮಾತನಾಡಿದ ಸುಧಾಕರ್, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ನನ್ನ ವೇದನೆ ಕಡಿಮೆ ಮಾಡಿ. ಇನ್ನೇನು ಎರಡು ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆ ಆಗುತ್ತದೆ. ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಈ ಸಲ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿಕೊಡಿ ಎಂಬ ಬೆಂಬಲಿಗರಿಗೆ ಮನವಿ ಮಾಡಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಅಖಾಡಕ್ಕಿಳಿದ ಎಸ್​ಆರ್ ವಿಶ್ವನಾಥ್, ಕಾರು ರ್ಯಾಲಿ ಮೂಲಕ ಕ್ಷೇತ್ರದ ಜನತೆಗೆ ಮಗನ ಪರಿಚಯ

ಒಂದು ಅಗಳು ಅನ್ನದಾನ ಮಾಡದ ವ್ಯಕ್ತಿಯನ್ನು ಚಿಕ್ಕಬಳ್ಳಾಫುರದ ಜನ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪರೋಕ್ಷವಾಗಿ ಟೀಕಿಸಿದ ಸುಧಾಕರ್, ಹಗಲು ರಾತ್ರಿ ನಾನು ಕ್ಷೇತ್ರಕ್ಕಾಗಿ ದುಡಿದೆ. ಆದರೂ ನನ್ನನ್ನು ಸೋಲಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ರಾಜ್ಯದಲ್ಲಿ ಚಿಕ್ಕಬಳ್ಳಾಪುರದಿಂದ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ

ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರರ ಮೋದಿ ಅವರು ಮಾರ್ಚ್​ 15 ರಂದು ಚಾಲನೆ ನೀಡಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Mon, 11 March 24

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ