AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಹವಾ ನಿಯಂತ್ರಿತ ಬಸ್; ಸೇವೆಗೆ ಸಚಿವ ಕೆ. ಸುಧಾಕರ್ ಚಾಲನೆ

ಚಿಕ್ಕಬಳ್ಳಾಪುರ ನಗರದಲ್ಲಿ ಬಿಎಂಟಿಸಿ ಹವಾನಿಯಂತ್ರಿತ ಬಸ್​​ಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಜಿಲ್ಲೆಗೆ ಬಿಎಂಟಿಸಿ ಸೇವೆ ತರಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಹವಾ ನಿಯಂತ್ರಿತ ಬಸ್; ಸೇವೆಗೆ ಸಚಿವ ಕೆ. ಸುಧಾಕರ್ ಚಾಲನೆ
ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಹವಾ ನಿಯಂತ್ರಿತ ಬಸ್
ಗಣಪತಿ ಶರ್ಮಾ
|

Updated on: Mar 21, 2023 | 6:02 PM

Share

ಮುಖ್ಯಾಂಶಗಳು

  • ಚಿಕ್ಕಬಳ್ಳಾಪುರ ನಗರದ ಜನತೆಗೆ ಯುಗಾದಿ ಹಬ್ಬದ ಉಡುಗೊರೆ
  • ಬಿಎಂಟಿಸಿ ಬಸ್ ಸೇವೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಚಾಲನೆ
  • ಚಿಕ್ಕಬಳ್ಳಾಪುರ ನಗರಕ್ಕೆ ಬಿಎಂಟಿಸಿ ಹವಾನಿಯಂತ್ರಿತ ಬಸ್ ಸೇವೆ

ಚಿಕ್ಕಬಳ್ಳಾಪುರ: ನಗರದ ಜನತೆಗೆ ಯುಗಾದಿ (Ugadi) ಹಬ್ಬದ ಉಡುಗೊರೆಯಾಗಿ ಬಿಎಂಟಿಸಿ ಬಸ್ ಸೇವೆ (BMTC Bus Service) ಕಾರ್ಯಾರಂಭ ಮಾಡುತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (K Sudhakar) ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಬಿಎಂಟಿಸಿ ಹವಾನಿಯಂತ್ರಿತ ಬಸ್​​ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಗೆ ಬಿಎಂಟಿಸಿ ಸೇವೆ ತರಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಈ ಹಿಂದೆ ತಮ್ಮನ್ನು ಹಲವರು ಹೈಟೆಕ್ ಶಾಸಕರು ಎಂದು ಕರೆಯುತ್ತಿದ್ದರು, ಇದೀಗ ಜಿಲ್ಲೆಯಾದ್ಯಂತ ಎಲ್ಲ ಅಭಿವೃದ್ಧಿ ಹೈಟೆಕ್ ಮಾಡುವ ಗುರಿ ಹೊಂದಿರುವುದಾಗಿ ಅವರು ಹೇಳಿದರು. ಹವಾನಿಯಂತ್ರಿತ ಬಿಎಂಟಿಸಿ ಬಸ್​​​ಗಳು ಪ್ರತಿನಿತ್ಯ ಬೆಂಗಳೂರಿಗೆ ನೇರವಾಗಿ ಸೇವೆ ಒದಗಿಸಲಿವೆ. ವಿದ್ಯಾರ್ಥಿಗಳು, ರೈತರು, ಉದ್ಯೋಗಿಗಳಿಗೆ ಇದು ಸಹಕಾರಿಯಾಗಲಿದೆ. ಈ ಸೇವೆ ಜಿಲ್ಲೆಗೆ ವಿಸ್ತರಿಸಲು ತಾಂತ್ರಿಕ ಸಮಸ್ಯೆ ಬರಲಿದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಸೇವೆ ಆರಂಭಿಸಲು ಕೆಎಸ್ಆರ್​​ಟಿಸಿ ಅವರ ಒಪ್ಪಿಗೆ ಬೇಕಿತ್ತು. ಅವರು ಪರವಾನಗಿ ನೀಡುವುದು ತಡವಾದ ಕಾರಣ ಮುಖ್ಯಮಂತ್ರಿಗಳಿಂದ ಎರಡು ಬಾರಿ ಸೂಚನೆ ಕೊಡಿಸಿ ಬಸ್ ಸೇವೆ ಆರಂಭಿಸಲಾಗಿದೆ ಎಂದರು.

ಬದ್ಧತೆ ಇದ್ದರೆ ಮಾತ್ರ ಇಂತಹ ಕೆಲಸ ಮಾಡಲು ಸಾಧ್ಯ, ಇಂತಹ ಬದ್ಧತೆ ಬಿಎಂಟಿಸಿ ಉಪಾಧ್ಯಕ್ಷ ನವೀನ್ ಕಿರಣ್ ಅವರು ತೋರಿಸಿರುವುದು ಅವರ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ. ಅದೇ ರೀತಿಯಲ್ಲಿ ಖಾದಿ ಮಂಡಳಿಯಲ್ಲಿಯೂ ಅಧ್ಯಕ್ಷ ಕೆ.ವಿ. ನಾಗರಾಜ್ ಅವರು ಹೆಚ್ಚಿನ ಶ್ರಮ ಪಡುತ್ತಿದ್ದಾರೆ. ನಿರೀಕ್ಷೆಗೂ ಮೀರಿ ಮಂಡಳಿಯಲ್ಲಿ ವಹಿವಾಟು ನಡೆದಿದೆ. ಆದರೆ ಯುವಕರು ಖಾದಿ ಮಂಡಳಿ ಉಪಯೋಗ ಹೆಚ್ಚು ಪಡೆಯುತ್ತಿಲ್ಲ, ಎಷ್ಟೇ ಅರಿವು ಮೂಡಿಸಿದರೂ ಅದು ಸಾಧ್ಯವಾಗಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಸಂಸ್ಥೆಗೆ ನಷ್ಟವಾಗದಂತೆ ಸೇವೆ ಬಳಕೆಯಾಗಲಿ

ಬಿಎಂಟಿಸಿ ಸಂಸ್ಥೆಗೆ ನಷ್ಟವಾಗದಂತೆ ಬಸ್ ಸೇವೆಯನ್ನು ಯಶಸ್ವಿಗೊಳಿಸಲು ಜನರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಸಂಚಾರಿ ಸೇವೆಗಳನ್ನು ಬಳಸುವುದು ಕ್ರಮ ಆಗಬೇಕು, ಸಾರ್ವಜನಿಕ ಸಾರಿಗೆ ಸೇವೆ ವಿಶ್ವದಲ್ಲಿ ಅತ್ಯಂತ ಶ್ರೀಮಂತರೂ ಬಳಸುತ್ತಾರೆ. ಸಚಿವರು, ಪ್ರಧಾನಿಗಳೂ ಈ ಸೇವೆ ಬಳಕೆ ಮಾಡುತ್ತಾರೆ. ಇಂತಹ ಮನೋಭಾವ ನಮ್ಮಲ್ಲಿಯೂ ಬರಬೇಕು ಇದನ್ನು ಹೆಚ್ಚು ಬಳಸುವುದರಿಂದ ಸಂಚಾರ ದಟ್ಟಣೆಗೆ ನಿಯಂತ್ರಣ ಮಾಡಲು ಸಾಧ್ಯ ಎಂದು ಹೇಳಿದರು.

ವಾಹನ ದಟ್ಟಣೆ ನಿಯಂತ್ರಣವಾಗಲಿ

ಚಿಕ್ಕಬಳ್ಳಾಪುರದಲ್ಲಿಯೂ ಇತ್ತೀಚಿನ ದಿನಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಪ್ರತಿ ದಿನ 5 ಸಾವಿರ ವಾಹನಗಳು ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುತ್ತಿವೆ. ಆದರೆ ರಸ್ತೆ ಹೆಚ್ಚಾಗುವುದಿಲ್ಲ, ಇದರಿಂದ ವಾಹನ ದಟ್ಟಣೆ ಹೆಚ್ಚಿ ಸಮಸ್ಯೆ ಎದುರಾಗುತ್ತಿದ್ದು, ನಾನೂ ಸೇರಿದಂತೆ ಎಲ್ಲರೂ ಈ ಬಗ್ಗೆ ಚಿಂತಿಸಬೇಕಾದ ಅಗತ್ಯವಿದೆ ಎಂದರು.

ಇದನ್ನೂ ಓದಿ: BMTC: ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್​ ಸಂಚಾರ ಆರಂಭ; ಸಮಯ ಹೀಗಿದೆ

ಸಂಚಾರ ನಿಯಮ ತಪ್ಪದೇ ಪಾಲಿಸಬೇಕು, ಹದಿಹರಿಯದವರು ವಾಹನ ಚಲಾಯಿಸಬಾರದು, ರೋಗಗಳಿಗಿಂತ ಹೆಚ್ಚು ಅಪಘಾತಗಳಲ್ಲಿಯೇ ಸಾವು ಆಗುತ್ತಿದೆ. ಅದರಲ್ಲಿಯೂ ಯುವಕರೇ ಹೆಚ್ಚು ಸಾಯುತ್ತಿರುವುದು ದುರಂತ. ಎಲ್ಲರೂ ನಿಯಮಗಳನ್ನು ತಪ್ಪದೇ ಪಾಲಿಸುವ ಮೂಲಕ ಅನಾಹುತಗಳು ತಪ್ಪಿಸುವ ಜೊತೆಗೆ ವಾಹನ ದಟ್ಟಣೆ ಕಡಿಮೆ ಮಾಡಲು ಸಾಧ್ಯವಾಗಲಿದೆ. ಸಾರಿಗೆ ನೌಕರರಿಗೆ ಸರ್ಕಾರ ಶೇ.15 ರಷ್ಟು ವೇತನ ಹೆಚ್ಚಳ ಮಾಡಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ