BMTC: ಹೊಸ ವರ್ಷದ ಆರಂಭದಲ್ಲಿ ಪ್ರಯಾಣಿಕರಿಗೆ ಗುಡ್​ ನ್ಯೂಸ್ ಕೊಟ್ಟ ಬಿಎಂಟಿಸಿ​

ಬೆಂಗಳೂರು ನಗರ, ಬೆಂ.ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿದೆ.

BMTC: ಹೊಸ ವರ್ಷದ ಆರಂಭದಲ್ಲಿ ಪ್ರಯಾಣಿಕರಿಗೆ ಗುಡ್​ ನ್ಯೂಸ್ ಕೊಟ್ಟ ಬಿಎಂಟಿಸಿ​
ಬಿಎಂಟಿಸಿ
Edited By:

Updated on: Jan 04, 2023 | 11:33 AM

ಬೆಂಗಳೂರು: ಕೇವಲ ಬೆಂಗಳೂರು ನಗರ, ಬೆಂ.ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಿದ ಸರ್ಕಾರ. ಇಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿದೆ.

ಇತ್ತೀಚೆಗಷ್ಟೇ ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್​ ನೀಡಿತ್ತು. ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದ್ದು, ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿತ್ತು, ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿತ್ತು.

ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್​ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ ಎಂದು ಹೇಳಿದ್ದು, ಇದೀಗ ತನ್ನ ವ್ಯಾಪ್ತಿಯನ್ನ ವಿಸ್ತರಿಸುವ ಮೂಲಕ ಬಹುದಿನಗಳ ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸಮ್ಮತಿಸಿದೆ. ಇನ್ನು ಮುಂದೆ ಸಾಮಾನ್ಯ ಹಾಗೂ ಐಷಾರಾಮಿ ಬಸ್​ಗಳು ಬೆಂಗಳೂರು ಟು ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Wed, 4 January 23