AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ 24 ಎಕರೆ ಕೆರೆ ಪರಭಾರೆ ವಿಚಾರ: ವಿಧಾನಸೌಧವನ್ನೇ ಮಾರಿಬಿಡಿ ಎಂದ ಸಚಿವ ಭೈರತಿ ಸುರೇಶ್!

ಚಿಕ್ಕಬಳ್ಳಾಪುರದಲ್ಲಿ 24 ಎಕರೆ ಸರ್ಕಾರಿ ಕೆರೆ ಜಾಗದ ಇ-ಖಾತೆ ಸೃಷ್ಟಿಸಿ ಪರಭಾರೆ ಮಾಡಿದ ಪ್ರಕರಣದ ಬಗ್ಗೆ ಸಚಿವ ಭೈರತಿ ಸುರೇಶ್ ಕೆಡಿಪಿ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಪ್ರಭು ಮತ್ತು ನಗರಸಭೆ ಆಯುಕ್ತ ಮನ್ಸೂರ್ ಅಲಿ ವಿರುದ್ಧ ಕಿಡಿ ಕಾರಿದ ಸಚಿವರು, ಅಧಿಕಾರಿಗಳ ನಿಷ್ಕ್ರಿಯತೆ ಹಾಗೂ ಸಾರ್ವಜನಿಕರಿಗೆ ಸ್ಪಂದಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ 24 ಎಕರೆ ಕೆರೆ ಪರಭಾರೆ ವಿಚಾರ: ವಿಧಾನಸೌಧವನ್ನೇ ಮಾರಿಬಿಡಿ ಎಂದ ಸಚಿವ ಭೈರತಿ ಸುರೇಶ್!
ಭೈರತಿ ಸುರೇಶ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 13, 2026 | 10:23 PM

Share

ಚಿಕ್ಕಬಳ್ಳಾಪುರ, ನವೆಂಬರ್​​ 13: ನಗರದಲ್ಲಿ 24 ಎಕರೆ ಸರ್ಕಾರಿ ಕೆರೆಗೆ ಇ-ಖಾತೆ ಸೃಷ್ಟಿಸಿ ಪರಭಾರೆ ಮಾಡಿರುವ ವಿಚಾರ ಕೆಡಿಪಿ ಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್, ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಮನ್ಸೂರ್ ಅಲಿ ವಿರುದ್ಧ ಕಿಡಿಕಾರಿದ ಸಚಿವರು, ಸರ್ಕಾರಿ ಕೆರೆ ಜಾಗ ಪರಭಾರೆಯಾಗಿದ್ದರೂ ಇದುವರೆಗೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ವಿಧಾನಸೌಧವನ್ನೇ ಮಾರಿಬಿಡಿ ಎಂದ ಭೈರತಿ ಸುರೇಶ್

ನಗರಸಭೆ ಆಯುಕ್ತ ಮನ್ಸೂರ್ ಅಲಿಯನ್ನು ಇನ್ನೂ ಏಕೆ ಅಮಾನತು ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭು ಅವರನ್ನು ಸಚಿವರು ಪ್ರಶ್ನಿಸಿದ್ದಾರೆ. ಸರ್ಕಾರಿ ಆಸ್ತಿಯನ್ನೇ ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ ವಿಧಾನಸೌಧವನ್ನೇ ಬೇರೆಯವರಿಗೆ ಮಾರಿಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಜಿಲ್ಲಾಧಿಕಾರಿ ಪ್ರಭು ಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಇ-ಕೆವೈಸಿಗೆ ಹಣಕ್ಕೆ ಬೇಡಿಕೆ: ಬೆಂಗಳೂರಿನ ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು

24 ಎಕರೆ ಕೆರೆ ಜಾಗ ಪರಭಾರೆಯಾಗಿದ್ದರೂ ನಗರಾಭಿವೃದ್ಧಿ ಇಲಾಖೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ತಹಶೀಲ್ದಾರ್ ಕೂಡ ಕನಿಷ್ಠ ದೂರು ದಾಖಲಿಸಿಲ್ಲ ಎಂಬ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ಪ್ರಕರಣದಲ್ಲಿ ಕಂದಾಯ ಇಲಾಖೆ, ನಗರಸಭೆ ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ಕೂಡ ವ್ಯಕ್ತವಾಗಿದೆ.

LIVE TV

ಬಡವರು, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೇ ಅಧಿಕಾರಿಗಳು?

ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಕಾರ್ಯವೈಖರಿ ಬಗ್ಗೆಯೂ ಜಿಲ್ಲಾ ಉಸ್ತುವಾರಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಬಡವರು, ರೈತರು ಹಾಗೂ ದಲಿತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಬರುವವರಲ್ಲಿ ಶೇಕಡಾ 90ರಷ್ಟು ಮಂದಿ ರೈತರು ಮತ್ತು ಬಡವರಾಗಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸದೆ ಸುಮ್ಮನಿರುವುದೇ ದೊಡ್ಡ ತಪ್ಪು. ಈ ಸಂಬಂಧ ಜಿಲ್ಲಾಧಿಕಾರಿ ಪ್ರಭು ಅವರಿಂದ ಸಭೆಯಲ್ಲಿ ಸ್ಪಷ್ಟನೆ ಕೇಳಿದ್ದು, ಕೆಡಿಪಿ ಸಭೆಯಲ್ಲಿ ಸಚಿವ ಭೈರತಿ ಸುರೇಶ್ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಬಿಗ್ ಬಾಸ್ ಕನ್ನಡ: ಸ್ವಾಭಿಮಾನ ಬಿಟ್ಟು ನಾನು ಆಟ ಆಡಲ್ಲ; ಶಪಥ ಮಾಡಿದ ಗಾನವಿ
ಬಿಗ್ ಬಾಸ್ ಕನ್ನಡ: ಸ್ವಾಭಿಮಾನ ಬಿಟ್ಟು ನಾನು ಆಟ ಆಡಲ್ಲ; ಶಪಥ ಮಾಡಿದ ಗಾನವಿ
ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅನುಮತಿ ಕೋರಿದ ಸಿಎಂ ಡಿಕೆಶಿ
ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅನುಮತಿ ಕೋರಿದ ಸಿಎಂ ಡಿಕೆಶಿ
ವಿಶ್ವದ ಮೊದಲ 'ಟಿಲ್ಟೆಡ್ ಎಲ್‌ಇಡಿ ತಾರಾಲಯ' ಉದ್ಘಾಟಿಸಿದ ಪ್ರಧಾನಿ
ವಿಶ್ವದ ಮೊದಲ 'ಟಿಲ್ಟೆಡ್ ಎಲ್‌ಇಡಿ ತಾರಾಲಯ' ಉದ್ಘಾಟಿಸಿದ ಪ್ರಧಾನಿ
ವಿಶ್ವದ ಮೊದಲ ಟಿಲ್ಟೆಡ್ ಎಲ್​ಇಡಿ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಿದ ಮೋದಿ
ವಿಶ್ವದ ಮೊದಲ ಟಿಲ್ಟೆಡ್ ಎಲ್​ಇಡಿ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಿದ ಮೋದಿ
ಪ್ರಧಾನಿ ಮೋದಿ ಎದುರು ಸಾಲು ಸಾಲು ಬೇಡಿಕೆಯಿಟ್ಟ ಸಿಎಂ ಡಿ.ಕೆ. ಶಿವಕುಮಾರ್
ಪ್ರಧಾನಿ ಮೋದಿ ಎದುರು ಸಾಲು ಸಾಲು ಬೇಡಿಕೆಯಿಟ್ಟ ಸಿಎಂ ಡಿ.ಕೆ. ಶಿವಕುಮಾರ್
ಹೆಚ್​ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಹೆಚ್​​ಡಿ ಕುಮಾರಸ್ವಾಮಿ
ಹೆಚ್​ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಹೆಚ್​​ಡಿ ಕುಮಾರಸ್ವಾಮಿ
ಡಿಕೆ ಶಿವಕುಮಾರ್ ಕೈ ಹಿಡಿದು ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿದ ಮೋದಿ
ಡಿಕೆ ಶಿವಕುಮಾರ್ ಕೈ ಹಿಡಿದು ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿದ ಮೋದಿ
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್