ಚಿಕ್ಕಬಳ್ಳಾಪುರದಲ್ಲಿ ಸಿನೀಮಿಯ ಕಾರು ಅಪಘಾತ, ಸ್ಥಳದಲ್ಲೇ ಮೂವರ ಸಾವು, ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು

ಅವರು ನಾಲ್ಕು ಜನ ಬೆಸ್ಕಾಂ ನಲ್ಲಿ ಸಿಬ್ಬಂದಿಗಳು, ರಾತ್ರಿ ಪಾಳಯದಲ್ಲಿ ಕರ್ತವ್ಯ ನಿರತರಾಗಿದ್ದರು. ವಿದ್ಯುತ್ ರಿಪೇರಿ ಎಂದು ಒಂದು ಊರಿನಿಂದ ಇನ್ನೊಂದು ಉರಿಗೆ ಹೋಗಿ ವಾಪಸ್ ಕಚೇರಿಗೆ ಮರಳುತ್ತಿದ್ದರು. ಆದ್ರೆ, ಅವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ. ಅದರ ರಭಸಕ್ಕೆ ಕಾರಿನಲ್ಲಿಯೇ ಮೂವರು ಮೃತಪಟ್ಟು ಇನ್ನೊಬ್ಬರಿಗೆ ಗಂಭೀರ ಗಾಯವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಸಿನೀಮಿಯ ಕಾರು ಅಪಘಾತ, ಸ್ಥಳದಲ್ಲೇ ಮೂವರ ಸಾವು, ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು
ಚಿಕ್ಕಬಳ್ಳಾಪುರದಲ್ಲಿ ಸಿನೀಮಿಯ ಕಾರು ಅಪಘಾತ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 07, 2024 | 8:41 PM

ಚಿಕ್ಕಬಳ್ಳಾಪುರ, ಜೂ.07: ಭೀಕರ ಅಪಘಾತದಲ್ಲಿ ಕರ್ನಾಟಕ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ನ ಇಬ್ಬರು ಸಿಬ್ಬಂದಿ ಮತ್ತು ಬೆಸ್ಕಾಂನ (BESCOM) ಓರ್ವ ಲೈನ್​ ಮ್ಯಾನ್ ಸೇರಿ ಮೂವರು​ ಮೃತಪಟ್ಟಿರುವ ಘಟನೆ ಗೌರಿಬಿದನೂರು (Gauribidanur) ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭವಿಸಿದೆ. ಕೆಪಿಟಿಸಿಎಲ್ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೇರೆ ಗ್ರಾಮದ ಬಳಿ ಇರುವ ಬೆಸ್ಕಾಂ ಸೇಕ್ಷನ್ ಕಚೇರಿಯಲ್ಲಿ ನಾಲ್ವರು ಲೈನ್ ಮ್ಯಾನ್​ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ನಿನ್ನೆ(ಜೂ.06) ರಾತ್ರಿ ಕರ್ತವ್ಯಕ್ಕೆ ಹೋಗಿದ್ದಾರೆ. ಮದ್ಯೆರಾತ್ರಿ ವಿದ್ಯುತ್ ರಿಪೇರಿ ಎಂದು ನಗರಗೇರೆಯಿಂದ ವಾಟದಹೊಸಹಳ್ಳಿ ಗ್ರಾಮಕ್ಕೆ ಹೋಗಿ ವಾಪಸ್ ನಗರಗೇರೆಗೆ ವೇಣುಗೋಪಾಲ್ ಕಾರಿನಲ್ಲಿ ಬರುತ್ತಿದ್ದಾಗ ಪ್ರಯಾಣಿಸುತ್ತಿದ್ದ ಬ್ರೀಜಾ ಕಾರು ನಿಯಂತ್ರಣ ತಪ್ಪಿ, ನಾಲ್ಕು ಜನರಲ್ಲಿ ಶ್ರೀಧರ್, ⁠ವೇಣುಗೋಪಾಲ್, ⁠ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ⁠ಶಿವಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಚಾಮರಾಜನಗರ: ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ; ಸ್ನೇಹಿತನನ್ನ ಕೊಂದು ಅಪಘಾತದ ಕಥೆ ಕಟ್ಟಿದರು

ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು

ಇನ್ನುಈ ಕಾರು ಸಿಬ್ಬಂದಿ ವೇಣುಗೋಪಾಲ್​ಗೆ ಸೇರಿದ್ದು, ಆತನೇ ಕಾರನ್ನು ಚಾಲನೆ ಮಾಡುತ್ತಿದ್ದರು. ರಸ್ತೆಯಲ್ಲಿ ತಿರುವು ಇದ್ದರೂ ಅತಿವೇಗವಾಗಿ ಚಲಾಯಿಸಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿ ಮೃತರಲ್ಲೊಬ್ಬರಾದ ಶ್ರೀಧರ್,  ಎದರುಗಡೆ ಇದ್ದ ಮರದಲ್ಲಿ ಹಾರಿ ಹೋಗಿ ರಾತ್ರಿಯಿಡಿ ನೇತಾಡಿ ಕೊನೆಗೆ ಮೃತಪಟ್ಟಿದ್ದಾನೆ. ಬೆಳಿಗ್ಗೆ ದಾರಿಹೋಕರು ಗಮನಿಸಿ ಗೌರಿಬಿದನೂರು ಗ್ರಾಮಾಂತರ ಠಾನೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಕಾರಿನಲ್ಲಿದ್ದ ಶಿವಕುಮಾರ್ ನನ್ನು ಆಸ್ಪತ್ರೆಗ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ನಾಲ್ಕು ಜನ ಬೆಸ್ಕಾಂ ಸಿಬ್ಬಂಧಿಗಳು ರಾತ್ರಿ ಪಾಳಯದಲ್ಲಿ ಕರ್ತವ್ಯದಲ್ಲಿ ಇದ್ದರೂ ಪಾನಮತ್ತರಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮದ್ಯದ ಅಮಲಿನಲ್ಲಿ ಕಾರು ಅತಿವೇಗವಾಗಿ ಚಲಾವಣೆ ಮಾಡಿದ ಕಾರಣ ನಿಯಂತ್ರಣ ತಪ್ಪಿ ಅಪಘಾತವಾಗಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಇದ್ರಿಂದ ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಎ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು