AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಚಾಲಕ ಬಾಬು ಆತ್ಮಹತ್ಯೆ: ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ಬಿಜೆಪಿ ಸಂಸದ ಕೆ.ಸುಧಾಕರ್ ಹೆಸರು ಬರೆದಿಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗಳ ಕಾರು ಚಾಲಕ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಆತ್ಮಹತ್ಯೆ ಮಾಡಿಕೊಂಡ ಬಾಬು ಪತ್ನಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನಲ್ಲಿ ಡಾ.ಕೆ.ಸುಧಾಕರ್ ಹೆಸರು ಸೇರಿಸುವಂತೆ ಕಾಂಗ್ರೆಸ್​ ಆಗ್ರಹಿಸಿದ್ದರೆ, ಮತ್ತೊಂದೆಡೆ ದೂರಲ್ಲಿ ಸುಧಾಕರ್ ಹೆಸರು ಸೇರಿಸದಂತೆ ಬಿಜೆಪಿ ಪಟ್ಟು ಹಿಡಿದಿದೆ. ಅಂತಿಮವಾಗಿ ಸುಧಾಕರ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಕಾರು ಚಾಲಕ ಬಾಬು ಆತ್ಮಹತ್ಯೆ: ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
Dr Sudhakar And Babu
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 07, 2025 | 7:09 PM

Share

ಚಿಕ್ಕಬಳ್ಳಾಪುರ, (ಆಗಸ್ಟ್ 07): ಬಿಜೆಪಿ ಸಂಸದ ಕೆ.ಸುಧಾಕರ್ (Dr K Sudhakar) ಹೆಸರು ಬರೆದಿಟ್ಟು ಬಾಬು ಆತ್ಮಹತ್ಯೆ (Babu Suicide Case) ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೃತ ಬಾಬಯ ಪತ್ನಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ (Chikkaballapur) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಡೆತ್ ನೋಟ್​​ ನಲ್ಲಿ ಉಲ್ಲೇಖಿಸಿದ್ದ ಮೂವರ ವಿರುದ್ಧವೂ ಎನ್ಎಸ್ ಸೆಕ್ಷನ್ 108, 352, 351ರ ಅಡಿ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಬಿಜೆಪಿ ಸಂಸದ  ಸುಧಾಕರ್ ವಿರುದ್ಧವೂ ಸಹ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, A1 ಆರೋಪಿಯಾಗಿದ್ದಾರೆ. ಇನ್ನು FIRನಲ್ಲಿ ನಾಗೇಶ್, ಮಂಜುನಾಥ ಹೆಸರು ಸಹ ಉಲ್ಲೇಖಿಸಲಾಗಿದೆ.

ಇದಕ್ಕೂ ಮೊದಲು ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾವೇ ನಡೆಯಿತು. ದೂರಿನಲ್ಲಿ ಡಾ.ಕೆ.ಸುಧಾಕರ್ ಹೆಸರು ಸೇರಿಸುವಂತೆ ಕಾಂಗ್ರೆಸ್​ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಎಫ್ಐಆರ್​​ ನಲ್ಲಿ ಸುಧಾಕರ್ ಹೆಸರು ಸೇರಿಸದಂತೆ ಬಿಜೆಪಿ ಆಗ್ರಹಿಸಿತು. ಹೀಗೆ ಪೊಲೀಸರ ಮೇಲೆ ಪ್ರಭಾವ ಬೀರಲು ಎರಡು ಕಡೆಯಿಂದಲೂ ನಡೆದಿತ್ತು. ಅಂತಿಮವಾಗಿ ಪೊಲೀಸರು, ಸಂಸದ ಡಾ.ಕೆ ಸುಧಾಕರ್ ಸೇರಿದಂತೆ ಮೂವರ ವಿರುದ್ಧವೂ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:  ಬಿಜೆಪಿ ಸಂಸದ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ, ರಾಜಕೀಯ ಸ್ವರೂಪ ಪಡೆದ ಪ್ರಕರಣ

ಬಿಎನ್ಎಸ್ ಕಾಯ್ದೆ ಅಡಿ ಅಡಿ ಸೆಕ್ಷನ್ 108, 352 , 351 ಹಾಗೂ ಎಸ್ ಸಿ ಎಸ್ ಟಿ ಕಾಯ್ದೆ ಅಡಿ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಡೆತ್ ನೋಟ್ ನಲ್ಲಿ ಹೆಸರು ಇರುವ ಸಂಸದ ಸುಧಾಕರ್, ನಾಗೇಶ್ ಮತ್ತು ಮಂಜುನಾಥ್ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಇದರಲ್ಲಿ ಸಂಸದ ಸುಧಾಕರ್ 1 ಆರೋಪಿಯಾಗಿದ್ದರೆ, ನಾಗೇಶ್ 2, ಮಂಜುನಾಥ್ 3 ಆರೋಪಿಯನ್ನಾಗಿ ಮಾಡಲಾಗಿದೆ.

ಜಿಲ್ಲಾ ಪಂಚಾಯ್ತಿಯಲ್ಲೇ ಆತ್ಮಹತ್ಯೆ

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ (Chikkaballapur Zilla Panchayat) ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೌಕರ ಕಾರು ಚಾಲಕನಾಗಿದ್ದ ಬಾಬು, ಇಂದು (ಆಗಸ್ಟ್ 07) ಜಿಲ್ಲಾ ಪಂಚಾಯತಿ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿದ್ದಾನೆ. ಬಳಿಕ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣಿಗೆ ಶರಣಾಗಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಮೃತನ ಕಾರಿನಲ್ಲಿ 4 ಪುಟಗಳ ಡೆತ್ ನೋಟ್ ಸಿಕ್ಕಿದೆ. ಡೆತ್ ನೋಟ್ ನ ಮೊದಲ ಪುಟದಲ್ಲೇ, ಮೊದಲ ಸಾಲಿನಲ್ಲೇ ನನ್ನ ಸಾವಿಗೆ ಡಾ ಕೆ ಸುಧಾಕರ್ ಕಾರಣ ಹಾಗೂ ನಾಗೇಶ್ ಸೇರಿದಂತೆ ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ವಿಭಾಗದ ಎಸ್ ಡಿ ಎ ಮಂಜುನಾಥ್ ಹೆಸರನ್ನ ಉಲ್ಲೇಖಿಸಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾರು ಚಾಲಕ ಆತ್ಮಹತ್ಯೆ: ಡೆತ್​ ನೋಟ್​​​​ನಲ್ಲಿ ತಮ್ಮ ಹೆಸರು ಉಲ್ಲೇಖಿಸಿದ್ದಕ್ಕೆ ಸುಧಾಕರ್ ಹೇಳಿದ್ದಷ್ಟು

ಡೆತ್ ನೋಟ್ ನಲ್ಲೇನಿದೆ?

ಆತ್ಮಹತ್ಯೆಗೂ ಮುನ್ನ ಬಾಬು ಡೆತ್ ನೋಟ್ ಬರೆದಿಟ್ಟಿದ್ದಾರೆ. ಡಾ.ಕೆ ಸುಧಾಕರ್ ಎಂಪಿ ಯ ಮೇಲೂ ತನಿಖೆ ಮಾಡಿ. ನಾಗೇಶ್ ಹಾಗೂ ಮಂಜುನಾಥ್ ಮೇಲೆ ತನಿಖೆ ಮಾಡಿ. ನನ್ನ ಹೆಂಡತಿ ಶಿಲ್ಪಾಗೆ ನ್ಯಾಯ ಕೊಡಿಸಿ. ನಾಗೇಶ್ ಹಾಗೂ ಮಂಜುನಾಥ್ ಸುಧಾಕರ್ ಆತ್ಮೀಯರು. MLA ಪ್ರದೀಪ್ ಸರ್, ಡಿ ಸಿ ಸರ್, ಎಸ್ಪಿ ಸರ್, ಸಿಇಒ ಸರ್, ಎಡಿಸಿ ಭಾಸ್ಕರ್ ಸರ್ ನನ್ನ ಹೆಂಡತಿಗೆ ನ್ಯಾಯ ಕೊಡಿಸಿ. ನನ್ನ ಬಳಿ 35 ಲಕ್ಷ ರೂ. ಹಣ ತೆಗೆದುಕೊಂಡಿರುತ್ತಾರೆ. ಮೋಸ ಹೋದ ಕಾರಣ ನಾನು‌ ಸಾವಿಗೆ ಶರಣಾಗುತ್ತಿದ್ದೇನೆ ಎಂದು ಡೆತ್ನೋಟ್​​ ನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು