ಅ. 6 ರಂದು ಚಿಕ್ಕಬಳ್ಳಾಪುರಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ; ಇಲ್ಲಿದೆ ವಿವರ

ಬರ ಪೀಡಿತ ಜಿಲ್ಲೆಯೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಬರಪೀಡಿತ ತಾಲ್ಲೂಕುಗಳ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡವು ಅಕ್ಟೋಬರ್ 06 ರಂದು ಭೇಟಿ ನೀಡಲಿದೆ. ಈ ತಂಡದಲ್ಲಿ ಕೇಂದ್ರೀಯ ಜಲ ಆಯುಕ್ತಾಲಯದ ನಿರ್ದೇಶಕರಾದ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ ಕೇಂದ್ರ ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕಿರಣ್ ಚೌಧರಿ ಸೇರಿದಂತೆ ಇನ್ನಿತರರು ಇರಲಿದ್ದಾರೆ.

ಅ. 6 ರಂದು ಚಿಕ್ಕಬಳ್ಳಾಪುರಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ; ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 04, 2023 | 6:58 PM

ಚಿಕ್ಕಬಳ್ಳಾಪುರ, ಅ.04:  ರಾಜ್ಯದಲ್ಲಿ ಈ ಬಾರಿ ತೀವ್ರ ಬರಗಾಲ ಉಂಟಾಗಿದೆ. ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡುಬಂದಿದೆ. ಅದರಂತೆ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಆರು ತಾಲ್ಲೂಕುಗಳಿಗೆ ಶೇ.50% ಹೆಚ್ಚು ಬೆಳೆ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ 6 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಪ್ರದೇಶವೆಂದು ಸರ್ಕಾರದ ಆದೇಶದಲ್ಲಿ ಘೋಷಿಸಲಾಗಿರುತ್ತದೆ.

ಕೇಂದ್ರ ಬರ ಅಧ್ಯಯನ ತಂಡ ಚಿಕ್ಕಬಳ್ಳಾಪುರಕ್ಕೆ ಭೇಟಿ

ಬರ ಪೀಡಿತ ಜಿಲ್ಲೆಯೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಬರಪೀಡಿತ ತಾಲ್ಲೂಕುಗಳ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡವು ಅಕ್ಟೋಬರ್ 06 ರಂದು ಭೇಟಿ ನೀಡಲಿದೆ. ಈ ತಂಡದಲ್ಲಿ ಕೇಂದ್ರೀಯ ಜಲ ಆಯುಕ್ತಾಲಯದ ನಿರ್ದೇಶಕರಾದ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ ಕೇಂದ್ರ ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕಿರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯದ ಕಂದಾಯ ಇಲಾಖೆಯ ವಿಪತ್ತು ನಿರ್ವಾಹಣೆಯ ಹಿರಿಯ ಸಮಾಲೋಚಕರಾದ ಡಾ. ಜಿ.ಎಸ್.ಶ್ರೀನಿವಾಸರೆಡ್ಡಿ ರವರ ನೇತೃತ್ವದಲ್ಲಿ ಕೇಂದ್ರ ಬರ ಅಧ್ಯಯನ ನಡೆಯಲಿದೆ.

ಇದನ್ನೂ ಓದಿ:ಬರಗಾಲಕ್ಕೆ ಕಂಗಲಾದ ಚಿಕ್ಕಬಳ್ಳಾಪುರ; ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ

ಇನ್ನು ಬೆಳಿಗ್ಗೆ 10 ಗಂಟೆಯಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಚೊಕ್ಕಹಳ್ಳಿ, ಬಂಡಮನಹಳ್ಳಿ ಹಾಗೂ ದೊಡ್ಡೇಗಾನಹಳ್ಳಿ ಗ್ರಾಮದ ರೈತರ ಜಮೀನುಗಳಿಗೆ, ನಂತರ ಬೆಳಿಗ್ಗೆ 11:35 ರಿಂದ ಗೌರಿಬಿದನೂರು ತಾಲ್ಲೂಕಿನ ಜಕ್ಕೇನಹಳ್ಳಿ, ಗಂಗಸಂದ್ರ ಹಾಗೂ ಕಡಬೂರು ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 1:30 ಗಂಟೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿಗೆ ಪ್ರಯಾಣಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Wed, 4 October 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ