ಚಿಕ್ಕಬಳ್ಳಾಪುರ: ನಂದಿಹಿಲ್ಸ್ ರೋಪ್ ವೇ ಶಂಕುಸ್ಥಾಪನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಇಂದು(ಮಾ.27) 94 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನಂದಿಹಿಲ್ಸ್ ರೋಪ್ ವೇ ಗೆ ಶಂಕು ಸ್ಥಾಪನೆ ಮಾಡಿದ್ದಾರೆ. ಇದರ ಜೊತೆಗೆ ಜಿಲ್ಲೆಯಲ್ಲಿ 800 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡವನ್ನ ಉದ್ಘಾಟಿಸಿದರು.
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ಇಂದು(ಮಾ.27) 94 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನಂದಿಹಿಲ್ಸ್ ರೋಪ್ ವೇ ಗೆ ಶಂಕು ಸ್ಥಾಪನೆ ಮಾಡಿದರು. ಇದರ ಜೊತೆಗೆ ಜಿಲ್ಲೆಯಲ್ಲಿ 800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡವನ್ನ ಉದ್ಘಾಟಿಸಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿಯವರಿಗೆ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ ಸಾಥ್ ನೀಡಿದ್ದು, ಬಳಿಕ ಚಿಕ್ಕಬಳ್ಳಾಪುರ ತಾಲೂಕಿನ ಸೋಲಾಲಪ್ಪನ ದಿನ್ನೆಯಲ್ಲಿ ಅವಳಿ ಜಿಲ್ಲೆಗಳ ಸಮಾವೇಶಕ್ಕೆ ಚಾಲನೆ ನೀಡಿದರು.
ಅಂದೇ ನಂದಿ ಗಿರಿಧಾಮಕ್ಕೆ ರೋಪ್ ವೇ ಕನಸು ಕಂಡಿದ್ದ ದಿವಂಗತ ನಟ ಶಂಕರ್ನಾಗ್
ವಿಶ್ವವಿಖ್ಯಾತ ಪ್ರವಾಸಿ ತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ರೋಪ್ ವೇ ನಿರ್ಮಾಣದ ಕನಸು ನನಸು ಆಗುವ ಕಾಲ ಹತ್ತಿರವಾಗಿದೆ. ದಿವಂಗತ ನಟ ಶಂಕರ್ನಾಗ್ ಅಂದಿನ ಕಾಲದಲ್ಲಿ ಗಿರಿಧಾಮಕ್ಕೆ ರೋಪ್ ವೇ ಮಾಡುವ ಕನಸು ಕಂಡಿದ್ದರು. ಆದರೆ ಇದುವರೆಗೂ ಅಂತಿಮ ರೂಪಕ್ಕೆ ಬಂದಿರಲಿಲ್ಲವಾಗಿತ್ತು. ಆದರೀಗ ರಾಜ್ಯ ಸರ್ಕಾರ 94 ಕೋಟಿ ರೂಪಾಯಿಗಳ ಅನುದಾನದಲ್ಲಿ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗಿರಿಧಾಮಕ್ಕೆ ಆಗಮಿಸಿ ಇಂದು(ಮಾ.27) ಶಂಕು ಸ್ಥಾಪನೆ ಮಾಡಿದ್ದಾರೆ.
800 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ
ಇನ್ನು ಇದೇ ಸಂದರ್ಭದಲ್ಲಿ ಸುಮಾರು 800 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಚಿಕ್ಕಬಳ್ಲಾಪುರ ತಾಲೂಕಿನ ಅರೂರು ಬಳಿ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಅದನ್ನ ಸಿಎಂ ಬಸವರಾಜ ಬೊಮ್ಮಾಯಿಯವರು ಉದ್ಘಾಟನೆ ಮಾಡಿದ್ದಾರೆ. ಇದರ ಜೊತೆಗೆ ಚಿಕ್ಕಬಳ್ಳಾಪುರ ತಾಲೂಕಿನ ಸೊಲಾಲಪ್ಪನ ದಿನ್ನೆಯಲ್ಲಿ ಅವಳಿ ಜಿಲ್ಲೆಗಳ ಸಮಾವೇಶಕ್ಕೆ ಚಾಲನೆ ನೀಡಿದ್ದು, ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಜೊತೆಗೆ 40 ಸಾವಿರ ಚೇರ್ಗಳ ವ್ಯವಸ್ಥೆ ಮಾಡಲಾಗಿದ್ದು, ಜನರನ್ನು ಕರೆತರಲು ಸಾವಿರಕ್ಕೂ ಹೆಚ್ಚು ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:36 pm, Mon, 27 March 23