ಚಿಕ್ಕಬಳ್ಳಾಪುರ: ಗೆಳೆಯನ ಮೀನು ತಿನ್ನುವ ಆಸೆ ಪೂರೈಸಲು ಮೀನು ಹಿಡಿಯಲು ಕೆರೆಗಿಳಿದ ವ್ಯಕ್ತಿ ಮರಳಿ ಬರಲೇ ಇಲ್ಲ!

ಗೆಳೆಯನ ಆಸೆ ಪೂರೈಸಲು ಮೀನು ಹಿಡಿಯಲು ಹೋದ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ.

ಚಿಕ್ಕಬಳ್ಳಾಪುರ: ಗೆಳೆಯನ ಮೀನು ತಿನ್ನುವ ಆಸೆ ಪೂರೈಸಲು ಮೀನು ಹಿಡಿಯಲು ಕೆರೆಗಿಳಿದ ವ್ಯಕ್ತಿ ಮರಳಿ ಬರಲೇ ಇಲ್ಲ!
ಪ್ರಾತಿನಿಧಿಕ ಚಿತ್ರ
Follow us
| Updated By: guruganesh bhat

Updated on: Sep 06, 2021 | 5:48 PM

ಚಿಕ್ಕಬಳ್ಳಾಪುರ: ಗೆಳೆತನ ಅಥವಾ ದೋಸ್ತಿ ಎಷ್ಟು ಪವಿತ್ರವಾದದ್ದು ಎಂದರೆ ದೋಸ್ತಿಗಾಗಿ ಏನನ್ನು ಬೇಕಾದರು ಮಾಡಲು ಸಿದ್ಧವಿರುವವರು ಕಾಣಸಿಗುತ್ತಾರೆ. ಆದರೆ ಚಿಕ್ಕಬಳ್ಳಾಪುರ ನಗರದಲ್ಲಿ ಸ್ನೇಹಿತನ ಆಸೆ ಈಡೇರಿಸಲು ಹೋದ ವ್ಯಕ್ತಿಯೋರ್ವ ಮರಳಿ ಬಾರದ ಲೋಕಕ್ಕೆ ಹೋದ ದುರ್ಘಟನೆ ನಡೆದಿದೆ. ಸ್ನೇಹಿತ ಬಾಬು ಎಂಬ ವ್ಯಕ್ತಿಗೆ ಮೀನು ಎಂದರೆ ಬಹಳವೇ ಇಷ್ಟವಿತ್ತಂತೆ. ಬಾಬುವಿನ ಗೆಳೆಯ ಬಾಪೂಜಿ ನಗರದ ನಿವಾಸಿ ಶಾಂತ್​ ರಾಜ್. ಬಾಬುವಿಗೆ ಮೀನು ಹಿಡಿದು ತರಲೆಂದು ಶಾಂತ್ ರಾಜ್ ಚಿಕ್ಕಬಳ್ಳಾಪುರ ನಗರದ ಕಂದವಾರ ಕೆರೆಯಲ್ಲಿ ಇಳಿದಿದ್ದಾರೆ. ಆದರೆ ದುರದೃಷ್ಟವಷಾತ್ ಶಾಂತ್ ರಾಜ್ ಕೆರೆಯಲ್ಲಿಯೆ ಮುಳುಗಿಹೋಗಿದ್ದಾರೆ. ಗೆಳೆಯನ ಮೀನು ತಿನ್ನುವ ಆಸೆ ತೀರಿಸಲೋಸುಗ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಈಕುರಿತು ಸತ್ಯಾಸತ್ಯತೆ ತನಿಖೆಯ ನಂತರವೇ ತಿಳಿದುಬರಬೇಕಿದೆ.

ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ವಿದ್ಯಾರ್ಥಿನಿ ಗ್ಯಾಸ್ ಗೀಸರ್​ ಸೋರಿಕೆಯಾಗಿ ಉಸಿರುಗಟ್ಟಿ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂಪದ (23) ವರ್ಷದ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೇ ಮೃತಪಟ್ಟ ದುರ್ದೈವಿ. ಸೆಪ್ಟೆಂಬರ್ 4ರಂದು ಸ್ನಾನಕ್ಕೆ ತೆರಳಿದ್ದಾಗ ವಿದ್ಯಾರ್ಥಿನಿ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ನಾನ ಮಾಡಲು ಮಧ್ಯಾಹ್ನ 12.30ಕ್ಕೆ ಬಾತ್ರೂಂಗೆ ಹೋಗಿದ್ದ ವಿದ್ಯಾರ್ಥಿನಿ 2 ಗಂಟೆಯಾದರೂ ಹೊರಬಂದಿರಲಿಲ್ಲ. ಅನುಮಾನದಿಂದ ಬಾತ್​ರೂಮ್​ ಬಾಗಿಲು ಒಡೆದು ನೋಡಿದಾಗ ಪ್ರಜ್ಞೆತಪ್ಪಿ ಬಿದ್ದಿರುವುದು ಕಂಡಿತ್ತು. ತಕ್ಷಣವೇ ವಿದ್ಯಾರ್ಥಿನಿ ಸಂಪದಾಳನ್ನು ಆಸ್ಪತ್ರೆಗೆ ಕರೆತಂದರೂ ಮಾರ್ಗಮಧ್ಯೆಯೇ ಆಕೆ ಸಾವನ್ನಪ್ಪಿದ್ದಾಳೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೋನ್ ಚಾರ್ಜ್ ಹಾಕುವಾಗ ಹಾವು ಕಡಿದು ಗಾಯ ಕೊಪ್ಪಳ: ಫೋನ್ ಚಾರ್ಜ್ ಹಾಕುವಾಗ ಹಾವು ಕಚ್ಚಿ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ಕಲ್ಮಠ ಖಾಸಗಿ ITI ಕಾಲೇಜಿನಲ್ಲಿ ನಡೆದಿದೆ. ಗವಿಸ್ವಾಮಿ(18) ಹಾವು ಕಡಿತಕ್ಕೊಳಗಾದ ವಿದ್ಯಾರ್ಥಿ. ಪೋನ್ ಚಾರ್ಜ್ ಹಾಕುವಾಗ ಸ್ವಿಚ್ ಬೋರ್ಡ್ನಲ್ಲಿ ಹೊಕ್ಕಿ ಕುಳಿತಿದ್ದ ಹಾವು ವಿದ್ಯಾರ್ಥಿಯನ್ನು ಕಚ್ಚಿದೆ. ಇದನ್ನು ತಿಳಿದ ಗವಿಸ್ವಾಮಿಯ ಸ್ನೇಹಿತರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸದ್ಯ ಪ್ರಾಣಾಪಾಯದಿಂದ ವಿದ್ಯಾರ್ಥಿ ಬಚಾವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: 

ತಾಲಿಬಾನ್ ಆಡಳಿತಕ್ಕೆ ವಿಶ್ವಸಂಸ್ಥೆ ಅಭಯ: ಅಫ್ಘಾನಿಸ್ತಾನದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್ಸ್​-ಮುಲ್ಲಾ ಬಾರದಾರ್ ಭೇಟಿ 

ಮಾರುಕಟ್ಟೆಯಲ್ಲಿ ಹೆಚ್ಚಾಗುತ್ತಿದೆ ನಕಲಿ ಕೊವಿಡ್​ 19 ಲಸಿಕೆಗಳ ಹಾವಳಿ; ಅಸಲಿ..ನಕಲಿ ಪತ್ತೆ ಹಚ್ಚೋದು ಹೇಗೆ? ಇಲ್ಲಿದೆ ಮಾಹಿತಿ

(Chikkaballapur A man who crumbled to catch fish to satisfy his friends desire to eat has died)

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು