ಚಿಕ್ಕಬಳ್ಳಾಪುರ: ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
70 ವರ್ಷದ ವೃದ್ಧೆಯನ್ನು ಎರಡು ವರ್ಷದಿಂದ ಮನೆಯ ಟಾಯ್ಲೆಟ್ನಲ್ಲಿ ಇರಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಂಜನಪದವು ಬಳಿಯ ಕಳ್ಳಿಗೆ ಎಂಬಲ್ಲಿ ಈ ಕೃತ್ಯ ನಡೆದಿದೆ.
ಚಿಕ್ಕಬಳ್ಳಾಪುರ: ಸರ್ಕಾರಿ ಕೃಷಿ ಮಹಾವಿದ್ಯಾಲಯದ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಬೂರು ಕೃಷಿ ಮಹಾವಿದ್ಯಾಲಯದಲ್ಲಿ ನಡೆದಿದೆ. ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿರುವ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಒಂದೇ ಕುಟುಂಬದ 9 ಜನರ ಶವ ಪತ್ತೆ ಪ್ರಕರಣ: ಮೂಢನಂಬಿಕೆಗೆ ಮಾರುಹೋಗಿ ಕೊಲೆಯಾದ ಕುಟುಂಬಸ್ಥರು
70 ವರ್ಷದ ವೃದ್ಧೆಯನ್ನು ಟಾಯ್ಲೆಟ್ನಲ್ಲಿ ಇರಿಸಿದ್ದ ಮಗ ಸೊಸೆ:
ದಕ್ಷಿಣ ಕನ್ನಡ: 70 ವರ್ಷದ ವೃದ್ಧೆಯನ್ನು ಎರಡು ವರ್ಷದಿಂದ ಮನೆಯ ಟಾಯ್ಲೆಟ್ನಲ್ಲಿ ಇರಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಂಜನಪದವು ಬಳಿಯ ಕಳ್ಳಿಗೆ ಎಂಬಲ್ಲಿ ಈ ಕೃತ್ಯ ನಡೆದಿದ್ದು, ಗಿರಿಜಾ ಎಂಬಾಕೆಯನ್ನು ತನ್ನ ಮಗ ಮತ್ತು ಸೊಸೆ ಟಾಯ್ಲೆಟ್ನಲ್ಲಿ ಕೂಡಿ ಹಾಕಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಆರೋಪಿಗಳನ್ನು ಹರಿರಾಂ ಮತ್ತು ಪೂಜಾ ಎಂದು ಗುರುತಿಸಲಾಗಿದೆ. ಗಿರಿಜಾ ಎಂಬವರಿಗೆ 70 ವರ್ಷ ವಯಸ್ಸಾಗಿದ್ದು, ಅವರ ಮಗನಾದ ಹರಿರಾಂ ಮತ್ತು ಸೊಸೆ ಪೂಜಾ ಅವರೊಂದಿಗೆ ವಾಸವಾಗಿದ್ದರು. ವರ್ಷದ ಹಿಂದೆ ಅವರ ಮನೆಯ ಜಗುಲಿಯಲ್ಲಿ ಜಾರಿ ಬಿದ್ದು ಕಾಲಿಗೆ ಗಾಯವಾಗಿತ್ತು. ಅವರಿಗಾದ ಗಾಯಕ್ಕೆ ಮಗ ಮತ್ತು ಸೊಸೆ ಚಿಕಿತ್ಸೆ ನೀಡಿಲ್ಲ. ಹಾಗಾಗಿ ನೋವಿನಿಂದ ನಡೆಯಲು ಸಾಧ್ಯವಾಗದೆ ಹಾಸಿಗೆಯಲ್ಲಿ ಮಲಗುವಂತಾದಗಿತ್ತು.
ಆದರೂ ಮಗ ಮತ್ತು ಸೊಸೆ ಯಾವುದೇ ಆರೈಕೆ ಮಾಡದೆ ಮನೆಯ ಶೌಚಗೃಹದಲ್ಲಿ ಹಾಕಿ ಒಂದೇ ಹೊತ್ತು ಊಟ ಮತ್ತು ಚಾ ನೀಡುತ್ತಿರಲಿಲ್ಲ ಎಂದು ಗಿರಿಜಾ ತಾವು ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ತುಳು ಭಾಷೆಯಲ್ಲಿ ಬೈಯುತ್ತಿದ್ದರು. ಹಸಿವೆಯಿಂದ ಊಟ ಕೇಳಿದರೆ ಹಿರಿಯ ನಾಗರಿಕರ ಸಹಾಯವಾಣಿಗೆ ವಿಚಾರ ತಿಳಿದು ಬಂಟ್ವಾಳ ಪಟ್ಟಣ ಠಾಣೆ ಪೊಲೀಸರ ಜೊತೆ ಹೋಗಿ ಗಿರಿಜಾ ಅವರನ್ನು ಶೌಚಗೃಹದಿಂದ ಹೊರಗೆ ಕರೆತಂದು ಉಪಚರಿಸಿ ನಂತರ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹೊಸ ಕರೆನ್ಸಿ ನೀಡಿ ₹64 ಲಕ್ಷ ಮೌಲ್ಯದ ₹500 ಮತ್ತು ₹1000 ಮುಖಬೆಲೆಯ ಹಳೇ ನೋಟುಗಳನ್ನು ಪಡೆದಿದ್ದ ಇಬ್ಬರು ವ್ಯಕ್ತಿಗಳ ಬಂಧನ
ಮೋಟೆಬೆನ್ನೂರು ಬಳಿ ಖಾಸಗಿ ಬಸ್ ಪಲ್ಟಿ, 8 ಜನರಿಗೆ ಗಾಯ
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 8 ಜನರಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳಿಗೆ ಬ್ಯಾಡಗಿ ತಾಲೂಕು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಮುಂಬೈನತ್ತ ಖಾಸಗಿ ಬಸ್ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.